-ಮೊಳಕಾಲ್ಮುರು ತಾಲೂಕು ಆಡಳಿತ ಸೌಧದಲ್ಲಿ ಆಯೋಜಿಸಲಾದ ಪ್ರಗತಿ ಪರಿಶೀಲನಾ ಸಭೆ
------ಸ್ಮಾಲ್ ಕಿಕ್ಕರ್-
ಸಾರ್ವಜನಿಕರ ಅಲೆದಾಟ ಸಲ್ಲ-----
ಕನ್ನಡಪ್ರಭವಾರ್ತೆ, ಮೊಳಕಾಲ್ಮುರುಕಾರ್ಯನಿಮಿತ್ತ ಸರ್ಕಾರಿ ಕಚೇರಿಗೆ ಆಗಮಿಸುವ ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಮೊಳಕಾಲ್ಮುರು ತಾಲೂಕು ಆಡಳಿತ ಸೌಧದಲ್ಲಿ ಆಯೋಜಿಸಲಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ, ಶಿರಸ್ತೇದಾರರು, ಉಪತಹಸೀಲ್ದಾರ್, ತಹಸೀಲ್ದಾರ್ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅವರು ಮಾತನಾಡಿದರು.ಮೊಳಕಾಲ್ಮೂರು ತಾಲೂಕು ಪಹಣಿ-ಆಧಾರ್ ಜೋಡಣೆಯಲ್ಲಿ ಉತ್ತಮ ಸಾಧನೆ ತೋರಿದೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಪಹಣಿ-ಆಧಾರ್ ಜೋಡಣೆ ಮಾಡುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಲ್ಯಾಂಡ್ ಬೀಟ್, ಕಂದಾಯ ಗ್ರಾಮ ರಚನೆ ಸೇರಿದಂತೆ ಕಂದಾಯ ಇಲಾಖೆ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ, ಪಟ್ಟಣ ಪಂಚಾಯತಿ, ಕೃಷಿ, ಪಶುಸಂಗೋಪನೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೂ ಸಭೆ ನಡೆಸಿದರು.ನಂತರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳುತ್ತಿರುವ ತುಮಕೂರ್ಲಹಳ್ಳಿಯಿಂದ ಚಿಕ್ಕೊಬನಹಳ್ಳಿವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದರು. ಕೋನಸಾಗರ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ವಸತಿ ಶಾಲೆಯ ನಿರ್ಮಾಣ ಕಾಮಗಾರಿ ಪ್ರಗತಿ ವೀಕ್ಷಿಸಿದರು.
ತಹಸೀಲ್ದಾರ್ ಟಿ.ಜಗದೀಶ್, ತಾಲೂಕು ಪಂಚಾಯಿತಿ ಇಒ ಪ್ರಕಾಶ್, ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಲಕ್ಷ್ಮಿ ನಾರಾಯಣ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಇಂಜಿನಿಯರ್ ಹರೀಶ್, ಪಶುಇಲಾಖೆ ಸಹಾಯಕ ನಿರ್ದೇಶಕ ಡಾ.ರಂಗಪ್ಪ, ಭೂದಾಖಲೆಗಳ ಸಹಾಯಕ ನಿರ್ದೇಶಕ ನಿರೋಷ ಇದ್ದರು.----------
ಪೋಟೋ: 31ಸಿಟಿಡಿ1: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮೊಳಕಾಲ್ಮುರು ತಾಲೂಕಿನ ತುಮಕೂರ್ಲಹಳ್ಳಿಯಿಂದ ಚಿಕ್ಕೊಬನಹಳ್ಳಿವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದರು.-----