ಧರ್ಮದ ದಿಕ್ಸೂಚಿ ಬಾಳಿನ ಭಾಗ್ಯೋದಯಕ್ಕೆ ಅಡಿಪಾಯ : ರಂಭಾಪುರಿ ಶ್ರೀ

KannadaprabhaNewsNetwork |  
Published : May 10, 2025, 01:01 AM IST
ಚಿಕ್ಕಮಗಳೂರು ತಾಲೂಕಿನ ಮುಗುಳವಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಾಲಯದ ಪ್ರವೇಶೋತ್ಸವ ಅಂಗವಾಗಿ ಶುಕ್ರವಾರ ಜರುಗಿದ ಧರ್ಮ ಜಾಗೃತಿ ಸಮಾರಂಭವನ್ನು ಗ್ರಾಪಂ ಅಧ್ಯಕ್ಷೆ  ಶ್ರೀಮತಿ ಶೃತಿ ಉಮೇಶ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಮಾನವನ ಮನಸ್ಸು ಬುದ್ಧಿ ಮತ್ತು ಸದ್ವಿಚಾರಗಳು ಬೆಳೆದು ಬಂದಾಗ ಶ್ರೇಯಸ್ಸು ನಿಶ್ಚಿತ. ಆದರ್ಶ ಬದುಕಿಗೆ ಗುರು ಕಾರುಣ್ಯ ಧರ್ಮ ಶ್ರದ್ಧೆ ಅವಶ್ಯಕ. ಧರ್ಮದ ದಿಕ್ಸೂಚಿ ಮಾನವನ ಬಾಳಿನ ಭಾಗ್ಯೋದಯಕ್ಕೆ ಅಡಿಪಾಯ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ನುಡಿದರು.

ಮುಗುಳವಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಾಲಯದ ಪ್ರವೇಶೋತ್ಸವ, ಧರ್ಮ ಜಾಗೃತಿ ಸಭೆ,

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಮಾನವನ ಮನಸ್ಸು ಬುದ್ಧಿ ಮತ್ತು ಸದ್ವಿಚಾರಗಳು ಬೆಳೆದು ಬಂದಾಗ ಶ್ರೇಯಸ್ಸು ನಿಶ್ಚಿತ. ಆದರ್ಶ ಬದುಕಿಗೆ ಗುರು ಕಾರುಣ್ಯ ಧರ್ಮ ಶ್ರದ್ಧೆ ಅವಶ್ಯಕ. ಧರ್ಮದ ದಿಕ್ಸೂಚಿ ಮಾನವನ ಬಾಳಿನ ಭಾಗ್ಯೋದಯಕ್ಕೆ ಅಡಿಪಾಯ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ನುಡಿದರು.

ತಾಲೂಕಿನ ಮುಗುಳವಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಾಲಯದ ಪ್ರವೇಶೋತ್ಸವ ಅಂಗವಾಗಿ ಶುಕ್ರವಾರ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಆಧುನಿಕ ಜಗತ್ತಿನಲ್ಲಿ ಪ್ರಗತಿಪರ ವಿಚಾರಧಾರೆಗಳ ಹೆಸರಿನಲ್ಲಿ ಭಾರತೀಯ ಉತ್ಕೃಷ್ಟ ಸಂಸ್ಕೃತಿ ನಾಶಗೊಳ್ಳಬಾರದು. ಧರ್ಮ ಮತ್ತು ದೇಶ ಮನುಷ್ಯನ ಎರಡು ಕಣ್ಣು. ಧರ್ಮಶ್ರದ್ಧೆ ಸಾಮರಸ್ಯ ರಾಷ್ಟ್ರಾಭಿಮಾನ ಬೆಳೆಸುವ ಗುರಿ ಎಲ್ಲರದೂ ಆಗಬೇಕು. ರವಿಕಿರಣದಿಂದ ಪುಷ್ಪ ಅರಳುತ್ತದೆ. ಗುರು ಕರುಣ ಆತ್ಮವನ್ನು ಅರಳಿಸುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯರ ಧಾರ್ಮಿಕ ಮತ್ತು ಸಾಮಾಜಿಕ ಚಿಂತನಗಳು ಸಕಲರ ಬಾಳಿಗೆ ಬೆಳಕು ತೋರುತ್ತವೆ ಎಂದರು.

ಮುಗುಳವಳ್ಳಿ ಗ್ರಾಮದ ಸಕಲ ಸದ್ಭಕ್ತರ ಸಹಕಾರದಿಂದ ಭವ್ಯ ದಿವ್ಯ ಶ್ರೀ ವೀರಭದ್ರೇಶ್ವರ ದೇವಾಲಯ ನಿರ್ಮಿಸಿರುವುದು ಅತ್ಯಂತ ಸಂತೋಷ ಉಂಟು ಮಾಡುತ್ತದೆ. ಇದಕ್ಕಾಗಿ ಶ್ರಮಿಸಿದ ಎಲ್ಲ ಭಕ್ತರಿಗೆ ಶ್ರೀ ವೀರಭದ್ರೇಶ್ವರ ಸ್ವಾಮಿ ಶುಭವನ್ನು ಅನುಗ್ರಹಿಸಲೆಂದು ಶುಭ ಹಾರೈಸಿದರು.ಹುಲಿಕೆರೆ ವಿರೂಪಾಕ್ಷಲಿಂಗ ಶಿವಾಚಾರ್ಯರು, ಶಂಕರದೇವರಮಠದ ಚಂದ್ರಶೇಖರ ಶಿವಾಚಾರ್ಯರು, ಬೇರುಗಂಡಿ ಮಠದ ರೇಣುಕ ಮಹಂತ ಶಿವಾಚಾರ್ಯರು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು. ಫಲಹಾರಸ್ವಾಮಿ ಮಠದ ಮುರುಘೇಂದ್ರ ಶಿವಾಚಾರ್ಯರು ನೇತೃತ್ವ ವಹಿಸಿದ್ದರು. ಮುಗುಳವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೃತಿ ಉಮೇಶ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಎಚ್.ಡಿ.ತಮ್ಮಯ್ಯ, ನಯನಾ ಮೋಟಮ್ಮ, ವಿಧಾನ ಪರಿಷತ್‌ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಭೋಜೇಗೌಡ, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ವಿಧಾನ ಪರಿಷತ್‌ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ಎಂ.ಲೋಕೇಶ್, ಬಿ.ಎ.ಶಿವಶಂಕರ್, ಎಂ.ಎಸ್.ನಿರಂಜನ್, ಬಿ.ಎಚ್.ಹರೀಶ್, ಎ.ಎನ್.ಮಹೇಶ್, ಪ್ರೇಮಾ ಮಂಜುನಾಥ್, ಪುಷ್ಪಾ ಸೋಮಶೇಖರ್, ಎಂ.ಎಂ. ಪರಮೇಶ್ವರಪ್ಪ, ಎಚ್.ಸಿ.ಕಲ್ಕರುಡಪ್ಪ ಹಾಗೂ ದೇವಾಲಯ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು. ಮುಗುಳವಳ್ಳಿ ಎಂ.ಎನ್.ರೇಣುಕ ಕುಮಾರ್ ಪ್ರಾಸ್ತಾವಿಕ ನುಡಿ ಸಲ್ಲಿಸಿದರು. ಚೈತ್ರಾ ವಸಂತಕುಮಾರ್ ಬಿನ್ನವತ್ತಳೆ ವಾಚಿಸಿದರು. ಕಾರ್ಯದರ್ಶಿ ಎಂ.ಸಿ.ರುದ್ರೇಶ್ ಸ್ವಾಗತಿಸಿದರು. ಎಂ.ಕೆ.ಗಿರಿಜೇಶ ಮತ್ತು ಅಭಿನಯ ಪಶುಕುಮಾರ್ ನಿರೂಪಿಸಿದರು. ಬಿಂದು ಗಿರೀಶ್ ವಂದಿಸಿದರು.ಸಮಾರಂಭಕ್ಕೂ ಮುನ್ನ ಭವ್ಯ ಮೆರವಣಿಗೆ ಮೂಲಕ ಶ್ರೀ ರಂಭಾಪುರಿ ಜಗದ್ಗುರುಗಳನ್ನು ಬರಮಾಡಿಕೊಂಡರು. ನಂತರ ಲೋಕಕಲ್ಯಾಣಾರ್ಥವಾಗಿ ಶ್ರೀ ರಂಭಾಪುರಿ ಜಗದ್ಗುರು ಇಷ್ಟಲಿಂಗ ಮಹಾಪೂಜೆ ನೆರವೇರಿಸಿ ಭಕ್ತ ಸಂಕುಲಕ್ಕೆ ಶುಭ ಹಾರೈಸಿದರು. 9 ಕೆಸಿಕೆಎಂ 1ಚಿಕ್ಕಮಗಳೂರು ತಾಲೂಕಿನ ಮುಗುಳವಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಾಲಯದ ಪ್ರವೇಶೋತ್ಸವ ಅಂಗವಾಗಿ ಶುಕ್ರವಾರ ಜರುಗಿದ ಧರ್ಮ ಜಾಗೃತಿ ಸಮಾರಂಭವನ್ನು ಗ್ರಾಪಂ ಅಧ್ಯಕ್ಷೆ ಶೃತಿ ಉಮೇಶ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!