ಎಲ್ಲರ ಸಹಕಾರದಿಂದ ಸಮ್ಮೇಳ ಯಶಸ್ವಿ

KannadaprabhaNewsNetwork |  
Published : Jan 01, 2026, 02:15 AM IST
್ಿ್ಿ್ಿ | Kannada Prabha

ಸಾರಾಂಶ

ನಗರದಲ್ಲಿ ಎರಡು ದಿನಕಾಲ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದೆ. ಯಶಸ್ಸಿಗೆ ಶ್ರಮಿಸಿ, ಸಹಕರಿಸಿದವರನ್ನು ಅಭಿನಂದಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪನವರು, ಮುಂದೆಯೂ ಕನ್ನಡದ ಕಾರ್ಯಗಳಿಗೆ ಇದೇ ರೀತಿ ಕೈ ಜೋಡಿಸುವಂತೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ, ತುಮಕೂರುನಗರದಲ್ಲಿ ಎರಡು ದಿನಕಾಲ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದೆ. ಯಶಸ್ಸಿಗೆ ಶ್ರಮಿಸಿ, ಸಹಕರಿಸಿದವರನ್ನು ಅಭಿನಂದಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪನವರು, ಮುಂದೆಯೂ ಕನ್ನಡದ ಕಾರ್ಯಗಳಿಗೆ ಇದೇ ರೀತಿ ಕೈ ಜೋಡಿಸುವಂತೆ ಮನವಿ ಮಾಡಿದರು. ಬುಧವಾರ ನಗರದ ಕನ್ನಡ ಭವನದಲ್ಲಿ ವಿವಿಧ ಸಂಘಸಂಸ್ಥೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನವು ಕನ್ನಡಿಗರನ್ನು ಒಟ್ಟುಗೂಡಿಸುವ, ಕನ್ನಡ ಭಾಷೆ ಬೆಳೆಸುವ, ಕನ್ನಡ ಸಂಸ್ಕೃತಿ ಮೆರೆಸುವ ಹಬ್ಬವಾಗಬೇಕು. ಎಲ್ಲಾ ಕನ್ನಡ ಮನಸ್ಸುಗಳು ಕೈ ಜೋಡಿಸಿದಾಗ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ ಎಂದರು.ವಿಶೇಷವಾಗಿ ಜಿಲ್ಲಾಡಳಿತ, ಜಿಲ್ಲಾ ಸಚಿವರು, ಶಾಸಕರು, ವಿವಿಧ ಇಲಾಖೆ ಅಧಿಕಾರಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಶಾಲಾಕಾಲೇಜುಗಳು, ಪರಿಷತ್ತಿನ ಪದಾಧಿಕಾರಿಗಳು ಜೊತೆಯಾಗಿ ಸಹಕರಿಸಿದರು. ಕನ್ನಡಕ್ಕಾಗಿ ಎಲ್ಲರೂ ಒಗ್ಗೂಡಬೇಕು. ಸಮುದಾಯಗಳಲ್ಲಿ, ವ್ಯವಹಾರಗಳಲ್ಲಿ ಕನ್ನಡವನ್ನು ಬಳಸುವ ಮೂಲಕ ನಾವು ಕನ್ನಡ ಬೆಳೆಸುವ ಕಾರ್ಯಕ್ಕೆ ಕೊಡುಗೆ ನೀಡಬೇಕು ಎಂದು ಕೆ.ಎಸ್.ಸಿದ್ಧಲಿಂಗಪ್ಪ ಹೇಳಿದರು.ಜಿಲ್ಲಾ ಕನ್ನಡ ಸೇನೆ ಅಧ್ಯಕ್ಷ ಡಾ.ಧನಿಯಾಕುಮಾರ್ ಮಾತನಾಡಿ, ಈ ಬಾರಿಯ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲಾ ಜಾತಿ, ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರೆಲ್ಲಾ ಒಟ್ಟಾಗಿ ದುಡಿದ ಫಲವಾಗಿ ಸಮ್ಮೇಳನ ಯಶಸ್ವಿಯಾಯಿತು. ಸಮ್ಮೇಳನದ ಗೋಷ್ಠಿಗಳೂ ಕನ್ನಡ ಜಾಗೃತಿಗೆ ಉಪಯುಕ್ತವಾಗಿದ್ದವು. ಮುಂದೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡಪರ ಸಂಘಟನೆಗಳು ಜೊತೆಗೂಡಿ ವಿದ್ಯಾರ್ಥಿಗಳನ್ನು ಮೊಬೈಲ್ ಮೋಹದಿಂದ ಮುಕ್ತಗೊಳಿಸುವ ಅಭಿಯಾನ ಆರಂಭಿಸಬೇಕು ಎಂದು ಸಲಹೆ ಮಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಕಂಟಲಗೆರೆ ಸಣ್ಣಹೊನ್ನಯ್ಯ, ರಾಜಶೇಖರ್, ತುಮಕೂರು ತಾಲೂಕು ಅಧ್ಯಕ್ಷ ಬೆಳ್ಳಾವಿ ಶಿವಕುಮಾರ್, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ರಾಜ್ಯ ಕಲಾವಿದರ ಒಕ್ಕೂಟದ ಅಧ್ಯಕ್ಷ ವೀರೇಶ್ ಗುಬ್ಬಿ, ಶ್ರಮಜೀವಿ ಬೀದಿಬದಿ ವ್ಯಾಪಾರಿಗಳ ಸಂಘದ ರಾಜ್ಯಾಧ್ಯಕ್ಷ ಎಂ.ಗೋಪಿ, ಮಹಿಳಾ ಘಟಕದ ಅಧ್ಯಕ್ಷೆ ರಮ್ಯಾ, ಅಂಬೇಡ್ಕರ್ ಪ್ರಚಾರ ಸಮಿತಿ ಮುಖಂಡರಾದ ರಾಮಚಂದ್ರರಾವ್, ಶಬ್ಬೀರ್ ಅಹ್ಮದ್, ಮುಖಂಡರಾದ ಗುರುರಾಘವೇಂದ್ರ, ಆದಿಲ್ ಬಾಷಾ, ನಟರಾಜಶೆಟ್ಟಿ, ಬೆಸ್ಟೆಕ್ಸ್ ರಾಮರಾಜು, ರಫಿಕ್ ಅಹ್ಮದ್, ನಳಿನಾ, ವಿಜಯಲಕ್ಷ್ಮಿ, ಮಂಜುಳಾ ಮೊದಲಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ