ಬರ ನಿಭಾಯಿಸುವಲ್ಲಿ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲ

KannadaprabhaNewsNetwork |  
Published : Nov 10, 2023, 01:00 AM ISTUpdated : Nov 10, 2023, 01:01 AM IST
9ಕೆಆರ್ ಎಂಎನ್‌ 5.ಜೆಪಿಜಿಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ರಾಮನಗರ: ರಾಜ್ಯದಲ್ಲಿ ತೀವ್ರ ಬರ ಸ್ಥಿತಿ ನಿರ್ಮಾಣವಾಗಿದ್ದು, 216 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಇಂತಹ ಸಂಕಷ್ಟ ಪರಿಸ್ಥಿತಿಯನ್ನು ನಿಭಾಯಿಸಬೇಕಾದ ಸಚಿವರು ತೆಲಂಗಾಣದ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು.

ರಾಮನಗರ: ರಾಜ್ಯದಲ್ಲಿ ತೀವ್ರ ಬರ ಸ್ಥಿತಿ ನಿರ್ಮಾಣವಾಗಿದ್ದು, 216 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಇಂತಹ ಸಂಕಷ್ಟ ಪರಿಸ್ಥಿತಿಯನ್ನು ನಿಭಾಯಿಸಬೇಕಾದ ಸಚಿವರು ತೆಲಂಗಾಣದ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು.

ರಾಮನಗರ ತಾಲೂಕಿನ ಹಲವು ಗ್ರಾಮಗಳಲ್ಲಿ ಬರ ಅಧ್ಯಯನ ನಡೆಸಿದ ನಂತರ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

ರಾಜ್ಯದ 39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬರ ಆವರಿಸಿದೆ. ಇಂತಹ ಸ್ಥಿತಿಯಲ್ಲಿ ಅಧ್ಯಯನ ಮಾಡುವ ಸಂಬಂಧ ಭಾರತೀಯ ಜನತಾ ಪಾರ್ಟಿಯು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಈಶ್ವರಪ್ಪ ಹಾಗೂ ನವೀನ್ ಕುಮಾರ್ ಕಟೀಲ್ ಸೇರಿದಂತೆ 17 ತಂಡಗಳು ರಾಜ್ಯದ 31 ಜಿಲ್ಲೆಗಳ ಬರ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದರು.

ಅದೇ ರೀತಿ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಂಡ ಬರ ಪರಿಶೀಲನೆ ಅಧ್ಯಯನ ಮಾಡಿದೆ. ತಾಲೂಕಿನಲ್ಲಿ ತೀವ್ರ ಬರ ಇರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದರು.

ಇದೇ ಮೊದಲ ಬಾರಿಗೆ ವಿಪಕ್ಷದ ಸದಸ್ಯರು ಬರ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದಾರೆ. ನಮ್ಮ ತಂಡ ಅಧ್ಯಯನ ಮಾಡಲು ಶುರು ಮಾಡಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಪರಿಸ್ಥಿತಿ ನಿರ್ವಹಣೆಗಾಗಿ 324 ಕೋಟಿ ಹಣ ಬಿಡುಗಡೆ ಮಾಡಿದೆ. ಆದರೆ, ಈವರೆಗೆ ಆ ಹಣ ಬಿಡುಗಡೆಯಾಗಿಲ್ಲ. ಸರ್ಕಾರ ಗೋಶಾಲೆ ತೆರೆಯಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ನೀರು, ಮೇವುಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಬರ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ರೈತರ ಪರವಾಗಿ ಕೆಲಸ ಮಾಡಬೇಕು. ಕಿಸಾನ್ ಸಮ್ನಾನ್ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ರೈತರ ಖಾತೆಗೆ 6 ಸಾವಿರ ರು. ನೀಡಿತ್ತು. ಬಿ.ಎಸ್.ಯಡಿಯೂರಪ್ಪ ಸರ್ಕಾರ 6 ಸಾವಿರ ಜತೆಗೆ ಹೆಚ್ಚುವರಿಯಾಗಿ 4 ಸಾವಿರ ಹಣ ಸೇರಿಸಿ ಒಟ್ಟು 10 ಸಾವಿರ ನೀಡಿದ್ದರು. ಆ ಮೂಲಕ ರೈತರ ಕಲ್ಯಾಣಕ್ಕೆ ಶ್ರಮಿಸಿದ್ದರು ಎಂದು ಹೇಳಿದರು.

ಸರ್ಕಾರ ವಿಫಲ:

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆಯುತ್ತಿದೆ. ಆದರೂ ಸರ್ಕಾರ ಇನ್ನು ಟೆಕಾಫ್ ಆಗಿಲ್ಲ. ಈ ಹಿಂದೆ ಎಂದೂ ಕಂಡರಿಯದ ಬರ ಆವರಿಸಿದೆ. ಇದನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ ರಾಜ್ಯದ 9.50 ಲಕ್ಷ ಕುಟುಂಬಗಳಿಗೆ ಇನ್ನು ಹಣ ಬಿಡುಗಡೆಯಾಗಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಉಚಿತವಾಗಿ ಅಕ್ಕಿ ನೀಡುತ್ತಿದೆ. ಬಡಕುಟುಂಬದ ಪ್ರತಿ ಮನೆಯ ಸದಸ್ಯನಿಗೆ ಐದು ಕೆಜಿ ಅಕ್ಕಿ ನೀಡುತ್ತಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ರೈತ ಮುಖಂಡ ಸತೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ಪ್ರಧಾನ ಕಾರ್ಯದರ್ಶಿ ರುದ್ರದೇವರು, ಮುಖಂಡರಾದ ನಾಗೇಶ್, ಕಿಶನ್, ಶಿವಾನಂದ, ಚಂದನ್ ಮೋರೆ ಇತರರಿದ್ದರು.

ಕೋಟ್ ...............

ಬರಪರಿಸ್ಥಿತಿ ನಿರ್ವಹಣೆಗೆ ರಾಜ್ಯ ಸರ್ಕಾರ 10 ಸಾವಿರ ಕೋಟಿ ಬಿಡುಗಡೆ ಮಾಡಬೇಕು. ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಬಾರದು. ಇಲ್ಲವಾದರೆ ರೈತರೊಂದಿಗೆ ಸೇರಿ ವಿಧಾನಸೌಧ ಮುತ್ತಿಗೆ ಹಾಕಲಾಗುವುದು.

- ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ

9ಕೆಆರ್ ಎಂಎನ್‌ 5.ಜೆಪಿಜಿ

ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ