ಕನ್ನಡಪ್ರಭ ವಾರ್ತೆ ಬಾಗಲಕೋಟೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಸರ್ಕಾರ ಕೇವಲ ಪತ್ರಿಕೆಗಳ ಮುಖಪುಟದಲ್ಲಿ ಜಾಹೀರಾತು ನೀಡಿವ ಮೂಲಕ ಆಳ್ವಿಕೆ ನಡೆಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ವೀರಣ್ಣ ಚರಂತಿಮಠ ವಾಗ್ದಾಳಿ ನಡೆಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಸರ್ಕಾರ ಕೇವಲ ಪತ್ರಿಕೆಗಳ ಮುಖಪುಟದಲ್ಲಿ ಜಾಹೀರಾತು ನೀಡಿವ ಮೂಲಕ ಆಳ್ವಿಕೆ ನಡೆಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ವೀರಣ್ಣ ಚರಂತಿಮಠ ವಾಗ್ದಾಳಿ ನಡೆಸಿದರು.ನಗರದಲ್ಲಿ ಗುರುವಾರ ಬಿಜೆಪಿಯಿಂದ ಕಾಂಗ್ರೆಸ್ ಸರ್ಕಾರದ ಆರ್ಥಿಕ ದಿವಾಳಿ ನೀತಿಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಸರ್ಕಾರ ಯಾವುದೇ ಹಣವನ್ನು ಘೋಷಣೆ ಮಾಡುವ ಮುನ್ನ ಹಣಕಾಸು ಸ್ಥಿತಿಗತಿಯನ್ನು ಗಮನಿಸಬೇಕು. ಈಗ ಸರ್ಕಾರ ಸ್ಥಿತಿಗತಿ ಏನಾಗಿದೆ ಎಲ್ಲರೂ ಗಮನಿಸಬೇಕಾಗಿದೆ. ಸರ್ಕಾರ ಸುಮ್ಮನೆ ನಾವು ಪ್ರೀ ಕೊಡುತ್ತೇವೆ ಎಂದು ಹೇಳುತ್ತಿದೆ. ಸರ್ಕಾರ ಜನರಿಗೆ ನೀಡುತ್ತಿರುವ ಅನೇಕ ಸವಲತ್ತುಗಳನ್ನು ಕಡಿತಗೊಳಿಸಿದೆ. ರಾಜ್ಯದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿಲ್ಲ. ಸುಳ್ಳು ಹೇಳುವುದು ಜಾಹೀರಾತು ಮೂಲಕ ಸರ್ಕಾರ ನಡೆಯುತ್ತಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಡಂಬಾಚಾರ ಮಾಡುವ ಮೂಲಕ ಬರೀ ಘೋಷಣೆಗಳನ್ನು ಮಾಡುತ್ತಿದ್ದಾರೆ. ಸರ್ಕಾರ ಕೂಡಲೇ ರಾಜೀನಾಮೆ ನೀಡಿದರೆ ಜನರಿಗೆ ಒಳ್ಳೆಯದು ಆಗುವುದು ಎಂದರು.ಕರ್ನಾಟಕವನ್ನು ಸಾಲದ ಸುಳಿಗೆ ಸಿಲುಕಿಸಿದೆ. ಇನ್ನೂ ಒಂದು ವರ್ಷ ಅವಧಿಯಲ್ಲಿ ಎಷ್ಟು ಸಾಲ ಮಾಡುತ್ತಾರೆ ನೋಡಬೇಕು. ರೈತರ ಹೊಲಗಳಿಗೆ ಸಮಪರ್ಕವಾಗಿ ವಿದ್ಯುತ್ ಪೂರೈಸುತ್ತಿಲ್ಲ ಕೇವಲ 4 ಗಂಟೆ ಕಾಲ ಪೂರೈಸುತ್ತಿದೆ ಎಂದರು.
ಪ್ರತಿಭಟನೆಯಲ್ಲಿ ಮುಖಂಡರು ಚೊಂಬು ಪ್ರದರ್ಶನ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ರಾಜು ನಾಯ್ಕರ್, ಮಲ್ಲಯ್ಯ ಮೂಗನೂರಮಠ, ಬಸವರಾಜ ಯಂಕಂಚಿ, ಸುರೇಶ ಕೊಣ್ಣೂರ, ಶಶಿಕಲಾ ಮಜ್ಜಗಿ, ಸತ್ಯನಾರಾಯಣ ಹೇಮಾದ್ರಿ, ಶ್ರೀನಾಥ ಸಜ್ಜನ, ಬಸವರಾಜ ಹುನಗುಂದ, ಶಿವಾನಂದ ಟವಳಿ, ದುಂಡಪ್ಪ ಏಳಮ್ಮಿ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.