ಲಕ್ಷ್ಮೇಶ್ವರ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಬಡವರ ಶೋಷಣೆ ಮಾಡುವ ಮೂಲಕ ಬಡವರ ರಕ್ತ ಹೀರುತ್ತಿದೆ. ಮೋದಿ ಜನಪರ ಆಡಳಿತ ನೋಡಿ ಸಹಿಸಲಾಗದೆ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಆಡಳಿತ ಹಾಗೂ ದೂರದೃಷ್ಟಿಯ ಫಲವಾಗಿ ಭಾರತವು ವಿಶ್ವದ ಅತ್ಯಂತ ಪ್ರಭಾವಶಾಲಿ ರಾಷ್ಟ್ರವಾಗಿ ಬೆಳೆಯುತ್ತಿರುವ ಬಗ್ಗೆ ಜಗತ್ತು ಕೊಂಡಾಡುತ್ತಿರುವಾಗ ನಮ್ಮ ವಿರೋಧ ಪಕ್ಷಗಳು ಸುಳ್ಳು ಭರವಸೆ ನೀಡುವ ಮೂಲಕ ಜನರಿಗೆ ಮೋಸ ಮಾಡುತ್ತಿವೆ. ಬಿಜೆಪಿ 10 ವರ್ಷಗಳಲ್ಲಿ ಮಾಡಿದ ಸಾಧನೆಗಳು ದೇಶದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ ಎಂದರು.
ಈ ವೇಳೆ ಶಾಸಕ ಡಾ.ಚಂದ್ರು ಲಮಾಣಿ, ಬಿಜೆಪಿ ಮಂಡಲ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ನಿಂಬಣ್ಣ ಮಡಿವಾಳರ, ಶರಣು ಸಿಂದಗಿ, ಶಿವಾನಂದ ಹೊಸಮನಿ, ಬಸಪ್ಪ ಹೊಸಮನಿ, ವೀರಣ್ಣ ಬಳೂಟಗಿ ಇದ್ದರು.