ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಿಂದ ಆರಂಭವಾಗಿ ಈಗಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಡಳಿತದವರೆಗೂ ಸರ್ಕಾರ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಲು ವಿಫಲವಾಗಿದೆ ಎಂದು ಟೀಕಿಸಿದರು.
ಕಾಂಗ್ರೆಸ್‌ನಲ್ಲಿ ಕಳೆದ ಎರಡು ವರ್ಷಗಳಿಂದ ಅಧಿಕಾರ ಹಂಚಿಕೆ ವಿಚಾರದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಈಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡು ಎರಡು ತಿಂಗಳು ಕಳೆದಿದ್ದರೂ, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿ ಸಚಿವ ಸಂಪುಟದೊಳಗಿನ ಭಿನ್ನಾಭಿಪ್ರಾಯಗಳೇ ಹೆಚ್ಚಾಗಿ ಗೋಚರಿಸುತ್ತಿವೆ. ನಿರುದ್ಯೋಗ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಕೆಪಿಎಸ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಪಶುವೈದ್ಯಕೀಯ ಹುದ್ದೆಗಳ ನೇಮಕಾತಿಯಲ್ಲೂ ಅಕ್ರಮ ನಡೆದಿರುವ ಆರೋಪಗಳಿವೆ. ಈ ಕುರಿತು ಸರ್ಕಾರ ಹಾಗೂ ಸಂಬಂಧಿತ ಸಚಿವರು ಸಮರ್ಪಕ ಉತ್ತರವನ್ನು ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುವ ಅವಕಾಶವೂ ರಾಜ್ಯದಲ್ಲಿ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ ನಡೆಸಲಿದೆ. ಮುಖ್ಯಮಂತ್ರಿ ಹಾಗೂ ಸಚಿವ ಸಂತೋಷ್ ಲಾಡ್ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿರುವುದನ್ನು ಪ್ರಶ್ನಿಸಿದ ಅವರು, ಕಾಂಗ್ರೆಸ್‌ನ ನಿಲುವನ್ನು ಖಂಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಆ.13ರಿಂದ ಆರಂಭವಾಗಲಿರುವ ಹರ್ ಘರ್ ತಿರಂಗಾ ಅಭಿಯಾನ ರಾಜ್ಯಾದ್ಯಂತ ನಡೆಯಲಿದ್ದು, ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಈ ಸುದ್ದಿಗೋಷ್ಠಿಯಲ್ಲಿ ಅರವಿಂದ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಲ್ಲಿಕಾರ್ಜುನ ಮಾದಮ್ಮನವರ, ಬಿಜೆಪಿ ಮಹಾನಗರದ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಸಚಿನ್ ಕಡಿ ಮೊದಲಾದವರು ಉಪಸ್ಥಿತರಿದ್ದರು.