ಕನ್ನಡಪ್ರಭ ವಾರ್ತೆ ಟೇಕಲ್
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರಿಗಾಗಿ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳು ಯಾವುದೇ ಅಡೆತಡೆಗಳಿಲ್ಲದೆ ಮುಂದುವರೆಯುತ್ತಿವೆ. ಇದರ ಜೊತೆಗೆ ಮುಂದೆ ೬ನೇ ಗ್ಯಾರಂಟಿ ಜಾರಿಗೆ ತರಲು ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಅವರು ಇಂದು ಮಾಲೂರು ತಾಲೂಕು ಟೇಕಲ್‌ನಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ತಾಲೂಕಿನಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳು
ಶ್ರೀಮಂತರನ್ನು ಶ್ರೀಮಂತರನ್ನಾಗಿ ಮಾಡುವುದು ಬಿಜೆಪಿ ಉದ್ದೇಶ. ಆದರೆ ಕಾಂಗ್ರೆಸ್ ಸಿದ್ದಾಂತ ಬಡವರನ್ನು ಆರ್ಥಿಕವಾಗಿ ಮುಂದುವರೆಯಲು ಯೋಜನೆಗಳನ್ನು ರೂಪಿಸಿ ಸಹಾಯವನ್ನು ಮಾಡುವುದು. ಮಾಲೂರು ತಾಲ್ಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಯಲ್ಲಿ ಅಂದಾಜು ೪೦ ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿದ್ದು ಅಂದಾಜು ೧೦ ಕೋಟಿಯಷ್ಟು ಹಣ ಪ್ರತಿ ತಿಂಗಳು ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದರು.ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಸಂವಿಧಾನ ತಿದ್ದುಪಡಿ ಬಗ್ಗೆ ಮಾತನಾಡಿರುವುದನ್ನು ಖಂಡಿಸಿ ಇಲ್ಲಿಯ ಸಂಸದ ಮುನಿಸ್ವಾಮಿರವರು ಪ್ರತಿಕ್ರಿಯೆ ನೀಡಬೇಕಾಗಿತ್ತು. ಸಂವಿಧಾನ ಎಲ್ಲಾ ಭಾರತೀಯರು ಅನ್ವಯಿಸುತ್ತದೆ. ಒಂದು ಪಕ್ಷಕ್ಕೆ ಒಬ್ಬ ವ್ಯಕ್ತಿ ಸ್ವಇಚ್ಛೆಯಿಂದ ತಿದ್ದುಪಡಿ ಮಾಡಲು ಅವಕಾಶವಿಲ್ಲ ಎಂದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ದೊರಕಿಸಲು ಮಹಿಳೆಯರು ವಿಶೇಷವಾಗಿ ಆಸಕ್ತಿ ತೋರಬೇಕೆಂದರು.ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲಶಾಸಕ ಕೆ.ವೈ.ನಂಜೇಗೌಡರು ಮಾತನಾಡಿ, ಕಾಂಗ್ರೇಸ್ ಸರ್ಕಾರದ ಯೋಜನೆಗಳ ಬಗ್ಗೆ ವಿರೋಧ ಪಕ್ಷದವರು ಟೀಕಿಸಿ ಅಭಿವೃದ್ಧಿ ಕಾರ್ಯಗಳಿಗೆ ಮನ್ನಣೆ ನೀಡದೆ ಸರ್ಕಾರಕ್ಕೆ ಬಂದು ಸಂಪನ್ಮೂಲವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ. ಈ ಯೋಜನೆಗಳು ಲೋಕಸಭಾ ಚುನಾವಣೆ ನಂತರ ಸ್ಥಗಿತಗೊಳಿಸುತ್ತಾರೆ ಎಂದು ಆರೋಪಿಸುತ್ತಿದ್ದಾರೆ. ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ, ಯಾರು ಆತಂಕಪಡುವುದು ಬೇಡ ಎಂದು ಭರವಸೆ ನೀಡಿದರು.
ಈಗ ಚುನಾವಣೆ ಸಂದರ್ಭದಲ್ಲಿ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮಗಳಲ್ಲಿ ಮೋದಿ ಗ್ಯಾರಂಟಿ ಎಂಬ ಜಾಹೀರಾತು ಪ್ರಸಾರಗೊಳ್ಳುತ್ತಿದೆ. ಗ್ಯಾರಂಟಿ ಯೋಜನೆ ಫಲಾನುಭವಿಗೆ ತಲುಪಿದೆಯೆ ಎಂದು ಪ್ರಶ್ನಿಸಿದರು.ಕಾಂಗ್ರೆಸ್ ಗೆಲ್ಲಿಸಲು ಶ್ರಮಿಸುವೆ
ಮುಂದಿನ ದಿನಗಳಲ್ಲಿ ಪ್ರತಿ ಹಳ್ಳಿಗಳಲ್ಲಿಯೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಯೋಜನೆಗಳನ್ನು ಜಾರಿಗೊಳಿಸಲು ಪ್ರಯತ್ನಿಸುತ್ತೇನೆ. ನನ್ನನ್ನು ಈ ತಾಲ್ಲೂಕಿನ ಮತದಾರರು ಅಲ್ಪ ಮತಗಳಿಂದ ಆಯ್ಕೆ ಮಾಡಿದ್ದರು ನಾನು ಯಾವುದನ್ನು ಲೆಕ್ಕಿಸದೇ ಜನರಿಗೆ ಬೇಕಾದ ಅನುಕೂಲಗಳ ಸರ್ಕಾರದ ಗಮನ ಸೆಳೆಯುತ್ತಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಹೆಚ್ಚು ಮತಗಳನ್ನು ದೊರಕಿಸಿಕೊಡಲು ಶ್ರಮಿಸುತ್ತೇನೆ ಎಂದರು. ಫಲಾನುಭವಿಗಳ ಸಮಾವೇಶದಲ್ಲಿ ೬ ಗ್ರಾ.ಪಂ.ವ್ಯಾಪ್ತಿಯ ಫಲಾನುಭವಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಮಾಜಿ ಜಿ.ಪಂ.ರತ್ನಮ್ಮನಂಜೇಗೌಡ, ಇಒ ವೀಣಾ, ಯುವ ಕಾಂಗ್ರೇಸ್ ಮುಖಂಡ ಸುನಿಲ್‌ನಂಜೇಗೌಡ, ಕೆ.ಜಿ.ಹಳ್ಳಿ ಗ್ರಾ.ಪಂ.ಅಧ್ಯಕ್ಷ ಎಸ್.ಆರ್.ಯಲ್ಲಪ್ಪ, ಉಪಾಧ್ಯಕ್ಷೆ ಮಮತಶಶಿಧರ, ಟೇಕಲ್ ಗ್ರಾ.ಪಂ.ಅಧ್ಯಕ್ಷ ಎಸ್.ಸಂದೀಪ್, ಕೊಂಡಶೆಟ್ಟಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಅರ್ಚನಶ್ರೀನಿವಾಸ, ಅಂಗನವಾಡಿ, ಆಶಾ ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳು ಹಾಜರಿದ್ದರು.