ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿವಿಧ ಇಂಜಿನಿಯರಿಂಗ್ ವಿಭಾಗಕ್ಕೆ ಪ್ರವೇಶಾತಿ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಯುವಶಕ್ತಿ ಗಾಂಧೀ ಮಾರ್ಗದ ಮೂಲಕ ನಡೆಸುತ್ತಿರುವ ಹೋರಾಟಗಳು, ಸರ್ಕಾರಗಳನ್ನು ಎಚ್ಚರಿಸುವ ಹಾಗೂ ವ್ಯವಸ್ಥೆಯನ್ನು ಅಲುಗಾಡಿಸುವಲ್ಲಿ ಯಶಸ್ವಿಯಾಗಿವೆ. ಮಹಾಭಾರತ ಮತ್ತು ರಾಮಾಯಣಗಳು ಎಲ್ಲಿಯವರೆಗೆ ಪ್ರಸ್ತುತವಾಗಿರುತ್ತವೆಯೋ, ಅಲ್ಲಿಯವರೆಗೆ ಗಾಂಧೀ ಮಾರ್ಗವೂ ಪ್ರಸ್ತುತವಾಗಿರುತ್ತದೆ ಎಂದರು.
ಶಿಕ್ಷಣ ಪಡೆದವರಿಂದಲೇ ವ್ಯವಸ್ಥೆಗೆ ಸವಾಲುಗಳು ಎದುರಾಗುತ್ತಿರುವುದು ವಿಷಾದನೀಯ. ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು, ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುತ್ತವೆ. ಹೀಗಾಗಿ ಯುವಕರು ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ನೈತಿಕತೆಯನ್ನು ಜೀವನದ ಮೌಲ್ಯಗಳನ್ನಾಗಿಸಿಕೊಂಡು, ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು.ಸುಶಿಕ್ಷಿತರಾಗುವುದರ ಜೊತೆಗೆ ಸುಸಂಸ್ಕೃತರಾಗಬೇಕು. ಪೋಷಕರ ಆಶಯಗಳನ್ನು ಸದಾ ಗೌರವಿಸುವುದರೊಂದಿಗೆ, ಜ್ಞಾನಕ್ಕಿಂತಲೂ ಮಿಗಿಲಾದ ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡಿ, ಸಮಾಜಕ್ಕೆ ಬೆಳಕಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಶಿಕ್ಷಣವು ಕೇವಲ ಕೊಠಡಿಯ ಕಲಿಕೆಗೆ ಸೀಮಿತವಾಗದೆ, ಪ್ರಯೋಗ, ಸಂಶೋಧನೆ ಹಾಗೂ ಆವಿಷ್ಕಾರದ ಮೂಲಕ ವಿಸ್ತರಿಸಬೇಕು. ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರಯೋಗಾಲಯದ ಅನುಭವಕ್ಕೆ ಹೆಚ್ಚಿನ ಮಹತ್ವ ನೀಡಿ, ಆವಿಷ್ಕಾರಿ ಮನೋಭಾವದೊಂದಿಗೆ ಕಲಿಯುವುದನ್ನು ರೂಢಿಸಿಕೊಳ್ಳಬೇಕು. ಅದುವೇ ವೃತ್ತಿಪರ ಶಿಕ್ಷಣದ ಮುಖ್ಯ ಲಕ್ಷಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಎಂ.ಎಸ್ ಅನಂತದತ್ತಾ, ಎಂ.ಆರ್.ಸೀತಾಲಕ್ಷ್ಮೀ, ಜಿ.ಎನ್.ಸುಧೀರ್, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
....ಬಾಕ್ಸ್....
ಕಾಲೇಜಿಗೆ ಹೊಸ ಹೆಜ್ಜೆಯಿಟ್ಟ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು, ಅಂತಿಮ ವರ್ಷದ ಎಐ ವಿದ್ಯಾರ್ಥಿಗಳು ನಿರ್ಮಿಸಿದ ರೋಬೋ ಆತ್ಮೀಯವಾಗಿ ಸ್ವಾಗತಿಸಿತು.
ಪೊಟೋ
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ವಿವಿಧ ಇಂಜಿನಿಯರಿಂಗ್ ವಿಭಾಗಕ್ಕೆ ಪ್ರವೇಶಾತಿ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರೂಪಿಸಿದ್ದ ನಾವೀನ್ಯ ಯೋಜನೆಗಳ ಪ್ರಾತ್ಯಕ್ಷಿಕೆಯನ್ನು ಅತಿಥಿಗಳು ವೀಕ್ಷಿಸಿದರು.