ಕನ್ನಡಪ್ರಭ ವಾರ್ತೆ ಬೀರೂರು
ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಭಾರತದ ಸಂವಿಧಾನವು ಸರ್ವರಿಗೂ ಸಮಬಾಳು-ಸಮಪಾಲು ನೀಡಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಜಿ.ಪ್ರಕಾಶ್ ಹೇಳಿದರು.ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಪುರಸಭೆ ಆಯೋಜಿಸಿದ್ದ ಸಂವಿಧಾನ ಸರ್ಪಣಾ ದಿನದ ಅಂಗವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ, ಸಂವಿಧಾನದ ಗ್ರಂಥಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟ್ರಕ್ಕೆ ಸಂವಿಧಾನ ರ್ಪಣೆಗೊಂಡಿರುತ್ತದೆ. ಇದರಿಂದ ದೇಶದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ನಂಬಿಕೆ, ರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನ-ಮಾನ ಮತ್ತು ಅವಕಾಶಗಳ ಸಮಾನತೆಯ ಅವಕಾಶ ಲಭಿಸಿದೆ ಎಂದರು.ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ವೈ.ಎಂ.ಲಕ್ಷ್ಮಣ್ ಮಾತನಾಡಿ, ಸರ್ಕಾರ ಸಂವಿಧಾನದ ಮೂಲಕ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳ ಅಧಿಕಾರದ ವ್ಯಾಖ್ಯಾನ ಮಾಡುತ್ತದೆ. ಪ್ರಜೆಗಳ ಹಕ್ಕು ಮತ್ತು ಕರ್ತವ್ಯಗಳನ್ನು ನಿರ್ದಿಷ್ಟಪಡಿಸುತ್ತದೆ. ಎಲ್ಲಾ ಕಾನೂನಿಗಿಂತ ಸಂವಿಧಾನವೇ ಮಿಗಿಲು. ಹೀಗಾಗಿ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕಾನೂನು ರೂಪಿಸಲು ಸಾಧ್ಯವಿಲ್ಲ ಎಂದರು.
ಭಾರತವನ್ನು ಸಾರ್ವಭೌಮ, ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ಗಣತಂತ್ರ ದೇಶ ಎಂದು ಸಂವಿಧಾನದಲ್ಲಿ ಘೋಷಿಸಲಾಗಿದೆ. ಇಲ್ಲಿರುವ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಒದಗಿಸಲಾಗಿದೆ. ಭಾರತದ ಸಂವಿಧಾನವನ್ನು ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ ಎಂದರು.ಸಂವಿಧಾನ ರಚನಾ ಸಭೆಯಲ್ಲಿ 250ಕ್ಕೂ ಹೆಚ್ಚು ಸದಸ್ಯರು ಇದ್ದರಾದರೂ ಇದರ ಪ್ರಮುಖ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರಾಗಿದ್ದಾರೆ. ಹೀಗಾಗಿ, ಅವರನ್ನ ಸಂವಿಧಾನ ರ್ತೃ ಎಂದು ಹೇಳಲಾಗುತ್ತದೆ. ಜನಸಾಮಾನ್ಯರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ದಿನವನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.
ಕಾರ್ಯಕ್ರಮಕ್ಕು ಮುನ್ನ ಸಂವಿಧಾನದ ಪೀಠಿಕೆಯನ್ನು ಬೋದಿಸಲಾಯಿತು.ಪುರಸಭೆ ಪರಿಸರ ಅಭಿಯಂತರ ನೂರುದ್ದೀನ್, ವೀಣಾ, ಸಿಬ್ಬಂದಿ ಗಿರಿರಾಜ್, ಶಿಲ್ಪ, ಪ್ರದೀಪ್, ಜಯಮ್ಮ, ಸ್ವರೂಪ, ರೇಣುಕಾ, ಪೌರ ಕಾರ್ಮಿಕರು ಇದ್ದರು.