ಕನ್ನಡಪ್ರಭ ವಾರ್ತೆ ಮೊಳಕಾಲ್ಮೂರು
ಪಟ್ಟಣದ ತಾಲೂಕು ಆಡಳಿತದಿಂದ, ಜ್ಯೂನಿಯರ್ ಕಾಲೇಜು ಅವರಣದಲ್ಲಿ ಸೋಮವಾರ ನಡೆದ 77ನೇ ಗಣ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ದೇಶವು ಸ್ವಾತಂತ್ರ್ಯ ಪಡೆದರೂ ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನದ ಸುಭದ್ರವಾದ ಭಾರತ ನಿರ್ಮಾಣಕ್ಕೆಅಡಿಪಾಯ ಒದಗಿಸಿದೆ. 1950 ಜ.26 ರಂದು ಜಾರಿಗೆ ಬಂದ ಸಂವಿಧಾನದಿಂದ ಭಾರತವು ತನ್ನನ್ನು ತಾನು ಸಾರ್ವಭೌಮ, ಪ್ರಜಾಪ್ರಭುತ್ವಗಣರಾಜ್ಯವೆಂದು ಘೋಷಿಸಿಕೊಂಡಿತು.ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು. ಕಾನೂನುಗಳು ಮತ್ತು ಹಕ್ಕುಗಳ ರಕ್ಷಣೆ ಮಾಡಬೇಕು ಎಂದರು.
ಮಕ್ಕಳಿಗೆ ವಿದ್ಯೆಯ ಜತೆಗೆ ಸಂಸ್ಕಾರದ ಶಿಕ್ಷಣ ನೀಡಬೇಕು. ಮಕ್ಕಳು ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಓದಿ ವಿದ್ಯಾವಂತರಾಗುವ ಮೂಲಕ ತಾಲೂಕನ್ನು ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸಲು ಪಣ ತೊಡಬೇಕು ಎಂದರು.ತಹಸೀಲ್ದಾರ್ ಜಗದೀಶ್ ಮಾತನಾಡಿ, ಗಣತಂತ್ರ ವ್ಯವಸ್ಥೆ ಬಲಗೊಳ್ಳುವಲ್ಲಿ ಭಾರತ ಸಂವಿಧಾನ ಇಡೀ ವಿಶ್ವದಲ್ಲಿ ಶ್ರೇಷ್ಠತೆ ಪಡೆದಿದೆ.ಸಂವಿಧಾನ ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸಿದೆ.ವಿಕಸಿತ ಭಾರತ ಪರಿಕಲ್ಪನೆಯಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ.ಈ ನೆಲದಲ್ಲಿ ಬದುಕುವ ಪ್ರತಿಯೊಬ್ಬರು ಸಂವಿಧಾನದ ಮಹತ್ವವನ್ನು ಅರಿತುಕೊಂಡು ಸಾಮರಸ್ಯ ಸಹಬಾಳ್ವೆಯಿಂದ ಬಾಳಬೇಕು ಎಂದರು.
ಇದೇ ವೇಳೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ನಾಲ್ಕು ಮಕ್ಕಳಿಗೆ ಲ್ಯಾಪ್ ಟ್ಯಾಪ್ ಕೊಳ್ಳಲು 50 ಸಾವಿರ ಚೆಕ್ ವಿತರಿಸಲಾಯಿತು.ಅಲ್ಲದೆ ವಿವಿಧ ಗ್ರಾಮಗಳ 8 ಶಾಲೆಗಳಿಗೆ ಯುವ ಜನ ಮತ್ತು ಕ್ರೀಡಾ ಇಲಾಖೆಯಿಂದ ನೀಡಿರುವ ಕ್ರೀಡಾ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.ದೇಶ ಭಕ್ತಿ ಬಿಂಬಿಸುವಂತ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಗಮನ ಸೆಳೆಯಿತು.ಈ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹನುಮಂತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ಮಲಾ ದೇವಿ.ಸಿಪಿಐ ನಾಗರಾಜ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಿಂಗರಾಜ, ಕಸಾಪ ಅಧ್ಯಕ್ಷ ಜಿಂಕಾ ಶ್ರೀನಿವಾಸ, ವಕೀಲರ ಸಂಘದ ಅಧ್ಯಕ್ಷ ವಸಂತ ಕುಮಾರ್, ಎಂ.ಸಿ ದೇವಯ್ಯ, ಅಯ್ಯಣ್ಣ, ವಕೀಲರಾದ ತಿಮ್ಮಣ್ಣ, ಶಿವಣ್ಣ, ರಾಜಶೇಖರ ನಾಯಕ, ಬಿ.ಟಿ.ನಾಗಭೂಷಣ, ಕೊಂಡಾಪುರ ಪರಮೇಶ, ಶಾಸಕರ ಆಪ್ತ ಸಹಾಯಕ ಶ್ರೀಕಾಂತ್ ಇದ್ದರು.