ಹೊಸಕೋಟೆ: ದೇಶದಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ತನ್ನದೇ ಆದ ಇಚ್ಛೆಯಂತೆ ಸ್ವತಂತ್ರವಾಗಿ ಬದುಕುವ ಹಕ್ಕನ್ನ ಕೊಟ್ಟಿದ್ದು ಅಂಬೇಡ್ಕರ್ ರಚಿಸಿರುವ ಸಂವಿಧಾನ ಎಂದು ಗ್ರಾಪಂ ಅಧ್ಯಕ್ಷ ರಾಮಣ್ಣ ತಿಳಿಸಿದರು.
ಗ್ರಾಪಂ ಸದಸ್ಯ ಅಭಿಮಾನಿ ಮುನಿರಾಜು ಮಾತನಾಡಿ, ಪ್ರಮುಖವಾಗಿ ಮಹಿಳಾ ಮೀಸಲಾತಿ ಕೊಟ್ಟು ಮಹಿಳೆಯರನ್ನ ಸಮಾಜದ ಮುಖ್ಯ ವಾಹಿನಿಗೆ ತಂದಂತಹ ಕೀರ್ತಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಸಲ್ಲಬೇಕು ಎಂದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಮುನಿರಾಜು ಮಾತನಾಡಿ, ತಮ್ಮಿಚ್ಚೆಯಂತೆ ರೀತಿ ಬದುಕುವ ಹಕ್ಕನ್ನು ಕೊಟ್ಟಿರುವ ಸಂವಿಧಾನ ನಮ್ಮ ಭಾರತ ದೇಶದ ಸಂವಿಧಾನ ಆಗಿದೆ. ಆದ್ದರಿಂದ ದೇಶದ ಪ್ರತಿಯೊಂದು ಮನೆಯಲ್ಲಿ ಸಂವಿಧಾನದ ಪುಸ್ತಕ ಇಟ್ಟು ಓದುವ ಮೂಲಕ ಸಂವಿಧಾನಕ್ಕೆ ಗೌರವ ಸಲ್ಲಿಸುವ ಕಾರ್ಯ ಆಗಬೇಕು. ಆಗ ಮಾತ್ರ ಭಾರತೀಯರಾದ ನಾವು ಅಂಬೇಡ್ಕರ್ ಅವರ ಋಣ ತೀರಿಸಿದಂತಾಗುತ್ತದೆ ಎಂದರು.ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಸಿದ್ದರಾಜು, ಗ್ರಾಪಂ ಉಪಾಧ್ಯಕ್ಷ ಶ್ರೀನಿವಾಸ್, ಪಿಡಿಒ ಮುನಿರಾಜು, ದಲಿತಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಚಿನ್ನಸ್ವಾಮಿ, ಗ್ರಾಪಂ ಸದಸ್ಯರಾದ ಅಭಿಮಾನಿ ಮುನಿರಾಜು, ಫಸ್ಸಿ, ಮುಖಂಡ ಖಾಜಿ ಹೊಸಹಳ್ಳಿ ಶಿವಕುಮಾರ್, ದಸಂಸ ಕರ್ನಾಟಕ ಜಿಲ್ಲಾ ಸಂಚಾಲಕ ಲೋಕೇಶ್ ಹಾಜರಿದ್ದರು.ಫೋಟೋ : 4 ಹೆಚ್‌ಎಸ್‌ಕೆ 1
ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಖಾಜಿ ಹೊಸಹಳ್ಳಿಯಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಗ್ರಾಪಂ ಅಧ್ಯಕ್ಷ ರಾಮಣ್ಣ ಚಾಲನೆ ನೀಡಿದರು.