ಸಂವಿಧಾನ ಭಾರತೀಯರ ಹಕ್ಕುಗಳ ರಕ್ಷಾ ಕವಚ

KannadaprabhaNewsNetwork |  
Published : Nov 27, 2026, 01:15 AM IST
ಮಧುಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಪ್ರಾಂಶುಪಾಲ ಪ್ರೊ.ಗೋವಿಂದರಾಯ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.  | Kannada Prabha

ಸಾರಾಂಶ

ಭ್ರಾತೃತ್ವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವಂತವಾಗಿಡುವ ಆಶಯಗಳ ಸಾಕಾರ ಸಾಧನ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಗೋವಿಂದರಾಯ ಎಂ ತಿಳಿಸಿದರು. ಗುರುವಾರ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ

ಕನ್ನಡಪ್ರಭ ವಾರ್ತೆ ಮಧುಗಿರಿ

ಭಾರತದ ಸಂವಿಧಾನ ಕೇವಲ ನೀತಿ ನಿರೂಪಣೆಯ ಗುಚ್ಛವಲ್ಲ, ಅದು ಕೋಟ್ಯಂತರ ಭಾರತೀಯರ ಹಕ್ಕುಗಳ ರಕ್ಷಾಕವಚ, ನಮ್ಮ ದೇಶದ ನಿಜಚೇತನ. ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಭರವಸೆ, ಸ್ವಾತಂತ್ರ್ಯ, ಭ್ರಾತೃತ್ವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವಂತವಾಗಿಡುವ ಆಶಯಗಳ ಸಾಕಾರ ಸಾಧನ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಗೋವಿಂದರಾಯ ಎಂ ತಿಳಿಸಿದರು.

ಗುರುವಾರ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂವಿಧಾನವು ನ್ಯಾಯದ ಭರವಸೆ, ದುರ್ಬಲರಿಗೆ ಧೈರ್ಯ, ಶೋಷಿತರಿಗೆ ಸಮಾನತೆಯ ಹಕ್ಕು ಹಾಗೂ ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಅವಕಾಶ ನೀಡುತ್ತಿರುವ ಕಾನೂನಾತ್ಮಕ ದಾರಿದೀಪ ಎಂದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ನಾಗರಾಜು ಮಾತನಾಡಿ, ಭವಿಷ್ಯದ ಮಕ್ಕಳಿಗೆ ಸಂವಿಧಾನಾತ್ಮಕ ಭಾರತವನ್ನು ಜತನವಾಗಿ ಕಾಪಿಡಬೇಕು. ಸ್ವಾತಂತ್ರ್ಯ, ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ಮೌಲ್ಯಗಳ ಮೇಲೆ ನಿಂತ ಸಾಮರಸ್ಯ ಭಾರತವನ್ನು ಹಸ್ತಾಂತರಿಸಬೇಕು.ಇದಕ್ಕಾಗಿ ಸಂವಿಧಾನವನ್ನು ಜತನವಾಗಿ ಕಾಪಾಡಬೇಕು ಎಂದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ್ ಬುಡಸನಹಳ್ಳಿ ಮಾತನಾಡಿ, ಸಂವಿಧಾನವನ್ನು ರಕ್ಷಿಸುವುದು ಎಂದರೆ ಭಾರತದ ಪ್ರಜಾಪ್ರಭುತ್ವವನ್ನು, ಭಾರತದ ವಿವಿಧತೆಯನ್ನು ಮತ್ತು ಪ್ರತಿಯೊಬ್ಬ ಭಾರತೀಯನ ಹಕ್ಕುಗಳನ್ನು ರಕ್ಷಿಸುವುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕಾರ್ಯದರ್ಶಿ ಮಂಜುನಾಥ್ ಬಿ, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ರಂಜಿತ, ಡಾ.ಲತಾ ಸಿ.ವಿ, ಡಾ.ದುರ್ಗಪ್ಪ, ರಾಮಮೂರ್ತಿ, ಗ್ರಂಥಪಾಲಕ ಮಂಜುನಾಥ್, ಡಾ.ರಂಗಸ್ವಾಮಯ್ಯ, ಮಿಸ್ಬಾ, ಶಿವಶಂಕರ್, ಕುಮಾರ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ದಿನವಿಡೀ ಕಾಯುವ ಬಡವರು
ಸಂವಿಧಾನ ಪ್ರತಿ ನಾಗರಿಕನ ಬದುಕಿಗೆ ದಾರಿದೀಪ: ದಿನೇಶ್