ಹಗರಿಬೊಮ್ಮನಹಳ್ಳಿ: ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರನ್ನು ನಿರಂತರ ನಿರ್ಲಕ್ಷಿಸಿ ಮುಖ್ಯವಾಹಿನಿಯಿಂದ ದೂರ ತಳ್ಳುವ ಕೆಲಸ ಮಾಡಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಲ್ಲಾಹುಣಿಸಿ ರಾಮಣ್ಣ ಬೇಸರ ವ್ಯಕ್ತಪಡಿಸಿದರು.
ಸಫಾಯಿ ಕರ್ಮಚಾರಿ ನಿಗಮದ ಮಾಜಿ ಅಧ್ಯಕ್ಷ ಜಗದೀಶ ಹಿರೇಮನಿ ಮಾತನಾಡಿ, ಸರ್ವಜನಾಂಗ ನೆಮ್ಮದಿಯ ಬದುಕು ಕಂಡುಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಸಂವಿಧಾನ ಸಮ್ಮಾನ್ ಮೂಲಕ ಸಂವಿಧಾನ ಜಾಗೃತಿ ಮೂಡಿಸುತ್ತಿದೆ. ಕಾಂಗ್ರೆಸ್ ಪಕ್ಷ ತಮ್ಮ ಸ್ವಾರ್ಥಕ್ಕಾಗಿ ಅಂಬೇಡ್ಕರ್ ಅವರ ಜಗತ್ಪ್ರಸಿದ್ದ ಸಂವಿಧಾನವನ್ನು ೭೫ಬಾರಿ ತಿದ್ದುಪಡಿ ಮಾಡಿದ್ದಾರೆ.
ಇಂದಿರಾಗಾಂಧಿಯವರು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಅರಾಜಕತೆಯುಂಟು ಮಾಡಿದ್ದರು. ದೇಶದ ಹಿತದೃಷ್ಠಿಯಿಂದ ಬಿಜೆಪಿಯವರು ಸಂವಿಧಾನವನ್ನು ೮ಬಾರಿ ತಿದ್ದುಪಡಿ ಮಾಡಿದ್ದಾರೆ. ಸಂವಿಧಾನ ಕುರಿತು ವಿದ್ಯಾರ್ಥಿಗಳಿಗೆ ಭಾಷಣ, ಪ್ರಬಂಧ ಸ್ಪರ್ದೇಯನ್ನು ಏಕಕಾಲಕ್ಕೆ ಏರ್ಪಡಿಸಲಾಗುವುದು. ದೇಶದ ೧ಕೋಟಿಗೂ ಅಧಿಕ ಜನರು ಸಂವಿಧಾನ ಪೀಠಿಕೆ ಪಠಣ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಸಂವಿಧಾನದ ಜಾಗೃತಿ ಮಾಡಿಸಲಾಗುವುದು ಎಂದರು.ಇದೇ ವೇಳೆ ಸಂವಿಧಾನ ಪೀಠಿಕೆಯನ್ನು ಹರಪನಹಳ್ಳಿಯ ಲಿಂಬ್ಯಾನಾಯ್ಕ ಬೋಧಿಸಿದರು.ಈ ಸಂಧರ್ಭದಲ್ಲಿ ಬಿಜೆಪಿ ಮಾಜಿ ವಿಧಾನಪರಿಷತ್ ಸದಸ್ಯ ಅಮರನಾಥ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನೌಡ್ರು, ಜಿಲ್ಲಾ ಉಪಾಧ್ಯಕ್ಷ ಭದ್ರವಾಡಿ ಚಂದ್ರಶೇಖರ, ಮಂಡಲ ಅಧ್ಯಕ್ಷ ಬೆಣಕಲ್ ಪ್ರಕಾಶ್, ಮರಿಯಮ್ಮನಹಳ್ಳಿ ಕೃಷ್ಣನಾಯ್ಕ, ಬಿಜೆಪಿ ರಾಜ್ಯ ವೃತ್ತಿ ಪ್ರಕೋಷ್ಠ ಸದಸ್ಯ ಗುಳಿಗಿ ವೀರೇಂದ್ರಕುಮಾರ, ರಾಜ್ಯ ಪಂಚಮಸಾಲಿ ಸಮಾಜದ ಯುವ ಘಟಕದ ಅಧ್ಯಕ್ಷ ಕಿಚಡಿ ಕೊಟ್ರೇಶ, ಅಯ್ಯಾಳಿ ತಿಮ್ಮಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ನರೇಗಲ್ ಕೊಟ್ರೇಶ, ಮಲ್ಲಿಕಾರ್ಜುನ, ಕೆಚ್ಚಿನಬಂಡಿ ಹನುಮಂತಪ್ಪ, ಈಟಿ ಲಿಂಗರಾಜ, ಗೌರಿಪುರ ಮಂಜುನಾಥ, ಕೂಡ್ಲಿಗಿ ದುರುಗೇಶ್, ದಶಮಾಪುರ ಮರಿಯಪ್ಪ, ಗುಂಡ ಕೃಷ್ಣ, ಭದ್ರಿನಾಥಶೆಟ್ಟಿ, ಮಾದೂರು ಮಹೇಶ್, ಉಪ್ಪಾರಗಟ್ಟಿ ಬುಳ್ಳಪ್ಪ, ಪ್ರಭಾಕರ ಇತರರಿದ್ದರು. ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜೀವರೆಡ್ಡಿ ನಿರ್ವಹಿಸಿದರು.
ಹಗರಿಬೊಮ್ಮನಹಳ್ಳಿ ಪಟ್ಟಣದ ಕನ್ನಿಕಾ ಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ಸಂವಿಧಾನ ಸನ್ಮಾನ ಅಭಿಯಾನ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಲ್ಲಾಹುಣಿಸಿ ರಾಮಣ್ಣ ಮಾತನಾಡಿದರು.