ಹಕ್ಕು ರಕ್ಷಣೆಯೇ ಸಂವಿಧಾನದ ಆಶಯ

KannadaprabhaNewsNetwork |  
Published : Nov 27, 2025, 01:02 AM IST
ಸಿಕೆಬಿ-1 ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಹಾಗೂ ಸಂಶೋದನಾ ಸಂಸ್ಥೆಯಲ್ಲಿ   ನಡೆದ 76 ನೇ ಸಂವಿಧಾನ ಸಮರ್ಪಣಾ ದಿನಾಚರಣೆಯಲ್ಲಿ ಡೀನ್ ಡಾ.ಎಂ.ಎಲ್.ಮಂಜುನಾಥ್ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ರವರ ಬಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿದರು | Kannada Prabha

ಸಾರಾಂಶ

ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ಸಂವಿಧಾನ ಜಾರಿಗೆ ಬಂದಾಗಿನಿಂದಲೇ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು ಈ ದಿನದ ವಿಶೇಷತೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಹಾಗೂ ಸಂಶೋದನಾ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ.ಎಂ.ಎಲ್.ಮಂಜುನಾಥ್ ತಿಳಿಸಿದರು.

ತಾಲೂಕಿನ ಅರೂರು ಬಳಿಯ ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ಬುಧವಾರ ನಡೆದ 76 ನೇ ಸಂವಿಧಾನ ಸಮರ್ಪಣಾ ದಿನಾಚರಣೆಯಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾಡಿದರು.

ಸರ್ವರಿಗೂ ಸಮಾನತೆ:

ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ಸಂವಿಧಾನ ಜಾರಿಗೆ ಬಂದಾಗಿನಿಂದಲೇ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು ಈ ದಿನದ ವಿಶೇಷತೆ ಎಂದರು.

ಹೈಕೋರ್ಟ್ ವಕೀಲ ಬಿ.ಲಕ್ಷ್ಮಿಣಾರಾಯಣ ಮಾತನಾಡಿ, ಭಾರತೀಯ ಸಂವಿಧಾನವು ಕರಡು ರಚನಾ ಸಭೆಯಲ್ಲಿ ಅಂಗೀಕಾರಗೊಂಡ ಐತಿಹಾಸಿಕ ದಿನವಿದು. ಸ್ವಾತಂತ್ರ್ಯ, ಸಮಾನತೆ, ಪ್ರಜಾಪ್ರಭುತ್ವ ಮತ್ತು ಘನತೆಯ ಬದುಕನ್ನು ಸಂವಿಧಾನದ ಮೂಲಕ ನೀಡಿದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬರನ್ನು ಇಂದು ಗೌರವದಿಂದ ಸ್ಮರಿಸಿ, ನಮಿಸಬೇಕು ಎಂದರು.

ಸಂವಿಧಾನ ಪೀಠಿಕೆ ಬೋಧನೆ:

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಪನ್ಮೂಲ ವ್ಯೆಕ್ತಿ ಹಾಗೂ ವಕೀಲ ಸಿ.ಆರ್. ನವೀನ್ ಕುಮಾರ್ ಸಂವಿಧಾನ ಪೀಠಿಕೆಯನ್ನು ಬೋಧಿಸಿ, ಸಂವಿಧಾನ ಪೀಟಿಕೆಯ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮೆಡಿಕಲ್ ಕಾಲೇಜಿನ ನೋಡಲ್ ಅಧಿಕಾರಿ ಡಾ.ರವೀಂದ್ರ. ವಿಭಾಗ ಮುಖ್ಯಸ್ಥರಾದ ಡಾ.ರಮೇಶ್,ಡಾ.ಸುನೀಲ್ ಜೋಷಿ, ಡಾ.ರವೀಂದ್ರ,ಸಹಾಯಕ ಪ್ರಾಧ್ಯಾಪಕರಾದ ಡಾ.ನರಸಿಂಹ, ಡಾ.ಬಸವರಾಜು, ಡಾ.ಚೈತ್ರರಾವ್, ಡಾ.ಜ್ಯೋತಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ಮಟ್ಟದ ಮಹಿಳಾ ಖೋ-ಖೋ: ಚಾಮರಾಜನಗರ ಚಾಂಪಿಯನ್ಸ್‌
ಮತದಾನ ಪ್ರತಿ ಪ್ರಜೆಯ ಧ್ವನಿಯಾಗಿದೆ: ಬೋರಮ್ಮ ಎಚ್‌.ಅಂಗಡಿ