ಬಾಲಲೀಲಾ ಮಹಾಂತ ಶಿವಯೋಗಿ ಕೊಡುಗೆ ಅಪಾರ: ಬಸವಲಿಂಗ ಶ್ರೀಗಳು

KannadaprabhaNewsNetwork |  
Published : Jan 10, 2026, 02:30 AM IST
ಪುರಾಣ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಬಸವಲಿಂಗ ಶ್ರೀಗಳು ಆರ್ಶೀವಚನ ನೀಡಿದರು. | Kannada Prabha

ಸಾರಾಂಶ

ತೋಂಟದಾರ್ಯ ಮಠದ ತೇರು ಸಾಗುವುದನ್ನು ನೋಡುವುದೇ ಒಂದು ಭಾಗ್ಯ. ಅದರಂತೆ ಮನುಷ್ಯರು ತಮ್ಮ ಬದುಕಿನ ತೇರನ್ನು ಎಳೆಯುವಾಗ ಬಹಳಷ್ಟು ಜಾಗ್ರತೆ ವಹಿಸಬೇಕು.

ನರಗುಂದ: ಸಮಾಜದಲ್ಲಿ ಪರಿವರ್ತನೆ ತರುವಲ್ಲಿ ಬಾಲಲೀಲಾ ಮಹಾಂತ ಶಿವಯೋಗಿಗಳು ದೊಡ್ಡ ಕೊಡುಗೆ ನೀಡಿದ್ದಾರೆ. ಅಂಥವರು ನಮಗೆ ಸಿಕ್ಕಿದ್ದು ಅಪರೂಪದ ಬಂಗಾರದ ರತ್ನವೆಂದು ನವಲಗುಂದ ಗವಿಮಠದ ಬಸವಲಿಂಗ ಶ್ರೀಗಳು ತಿಳಿಸಿದರು.

ತಾಲೂಕಿನ ಶಿರೋಳ ಗ್ರಾಮದ ತೋಂಟದಾರ್ಯ ಜಾತ್ರಾ ಪ್ರಯುಕ್ತ ಕಳೆದ 20 ದಿನಗಳಿಂದ ನಡೆದ ಪ್ರವಚನದ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ತೋಂಟದಾರ್ಯ ಮಠದ ತೇರು ಸಾಗುವುದನ್ನು ನೋಡುವುದೇ ಒಂದು ಭಾಗ್ಯ. ಅದರಂತೆ ಮನುಷ್ಯರು ತಮ್ಮ ಬದುಕಿನ ತೇರನ್ನು ಎಳೆಯುವಾಗ ಬಹಳಷ್ಟು ಜಾಗ್ರತೆ ವಹಿಸಬೇಕು ಎಂದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶಗೌಡ ಪಾಟೀಲ ಮಾತನಾಡಿ, ತೋಂಟದಾರ್ಯ ಮಠವು ಧಾರ್ಮಿಕ ಮತ್ತು ಸಾಮಾಜಿಕ, ಶೈಕ್ಷಣಿಕ, ಕ್ಷೇತ್ರಗಳಲ್ಲಿ ತನ್ನದೇ ಛಾಪು ಮೂಡಿಸಿದೆ ಎಂದರು.

ಈ ಸಂದರ್ಭದಲ್ಲಿ ಶಾಂತಲಿಂಗ ಶ್ರೀಗಳು, ಮುದಿಯಪ್ಪಯ್ಯ ಸ್ವಾಮಿಗಳು, ತಾಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ವಿವೇಕ ಯಾವಗಲ್ಲ, ರೋಣ ಪುರಸಭೆ ಸದಸ್ಯ ಮಿಥುನಗೌಡ ಪಾಟೀಲ, ಜಿಲ್ಲಾ ಯುವ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಕೃಷ್ಣಗೌಡ ಪಾಟೀಲ, ಮುಧೋಳದ ಉದ್ಯಮಿ ರವಿ ಗಲಬಿ, ಡಾ. ರೋಹಿತಗೌಡ ಪಾಟೀಲ, ರಫೀಕ ತೋರಗಲ್ಲ, ರಾಜಶೇಖರಗೌಡ ಪಾಟೀಲ, ಜಾತ್ರೆ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಇದ್ದರು.ಇಂದು ಗುರುವಂದನಾ ಕಾರ್ಯಕ್ರಮ

ನರಗುಂದ: ತಾಲೂಕಿನ ಶಿರೋಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2002ನೇ ಸಾಲಿನಲ್ಲಿ ಎಸ್ಎಸ್ಎಲ್‌ಸಿ ವ್ಯಾಸಂಗ ಮುಗಿಸಿದ ವಿದ್ಯಾರ್ಥಿಗಳು ಜ. 10ರಂದು ಬೆಳಗ್ಗೆ 9 ಗಂಟೆಗೆ ಗುರುವಂದನಾ ಕಾರ್ಯಕ್ರಮ ಆಯೋಜಿಸಿದ್ದಾರೆ.

ಸಾನ್ನಿಧ್ಯವನ್ನು ಭೈರನಹಟ್ಟಿಯ ಶಾಂತಲಿಂಗ ಶ್ರೀಗಳು ಹಾಗೂ ಅಭಿನವ ಯಚ್ಚರ ಶ್ರೀಗಳು ವಹಿಸುವರು. ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ವಿ.ಕೆ. ಮರಿಗುದ್ದಿ, ಎಚ್.ವೈ. ಯಂಡಿಗೇರಿ, ವಿ.ಸಿ. ಸಾಲಿಮಠ, ಎಸ್.ಪಿ. ಬೀಡಿಕರ, ಎಸ್.ಎನ್. ತಿರಕನಗೌಡ್ರ, ಆರ್.ಎಲ್. ಪಾಟೀಲ, ಉಪನ್ಯಾಸಕ ಪ್ರಭಾಕರ ಉಳ್ಳಾಗಡ್ಡಿ ಹಾಗೂ ನಿವೃತ್ತ ಶಿಕ್ಷಕರು, ಶಿಕ್ಷಕಿಯರು ಭಾಗವಹಿಸುವರೆಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ