ಕುಷ್ಟಗಿ: ಬಸವಣ್ಣನ ವಚನ ಕಾಯಕವೇ ಕೈಲಾಸ ಎಂಬ ನಾಣ್ಣುಡಿಯಂತೆ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ಪಟ್ಟಣದ ಸ್ವಚ್ಛತೆಗೆ ಪೌರ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಪೌರ ಕಾರ್ಮಿಕರ ದಿನಾಚರಣೆಯ ಮೂಲಕ ಗೌರವಿಸುವುದರ ಜತೆಗೆ ಬೇಡಿಕೆಯಾದ ಮನೆ ನಿರ್ಮಾಣದ ಕನಸನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ಮಾಡಲಾಗುತ್ತದೆ. ಈಗಾಗಲೆ ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು ಶೀಘ್ರದಲ್ಲಿ ಕೆಲಸವಾಗಲಿದೆ. ಪುರಸಭೆ ಅಧಿಕಾರಿಗಳು ಸರ್ಕಾರದಿಂದ ಬರುವಂತಹ ಎಲ್ಲ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಮುಖ್ಯವಾಹಿನಿಗೆ ಬರುವಂತೆ ನೋಡಿಕೊಳ್ಳಿ. ಮಕ್ಕಳಿಗೆ ಉತ್ತಮ ಭವಿಷ್ಯ ಕಟ್ಟಿಕೊಡಬೇಕು ಎಂದರು.
ಪುರಸಭೆ ಸದಸ್ಯ ಖಾಜಾಮೈನುದ್ದಿನ್ ಮುಲ್ಲಾ, ಪುರಸಭೆ ಮುಖ್ಯಾಧಿಕಾರಿ ವೆಂಕಣ್ಣ ಬೀಳಗಿ, ಪುರಸಭೆ ಸದಸ್ಯ ವಸಂತ ಮೇಲಿನಮನಿ ಮಾತನಾಡಿದರು. ಪುರಸಭೆ ಅಧ್ಯಕ್ಷ ಮಹಾಂತೇಶ ಕಲಬಾವಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಾಜೇಶ ಪತ್ತಾರ, ಬಸವರಾಜ ಬುಡಕುಂಟಿ, ಅಂಬಣ್ಣ ಭಜಂತ್ರಿ, ಜೆಜೆ ಆಚಾರ, ಚಂದ್ರಶೇಖರ ಚೋಳಿನ್, ಹನಮಂತಪ್ಪ ಬಂಡಿವಡ್ಡರ, ಇಮಾಂಬಿ ಕಲಬುರಗಿ, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಶಾಂತಪ್ಪ, ಪ್ರಾಣೇಶ ಬಳ್ಳಾರಿ ಸೇರಿದಂತೆ ಪುರಸಭೆ ಸಿಬ್ಬಂದಿಗಳು ಇದ್ದರು.ಜಾನಪದ ಕಲಾವಿದ ಶರಣಪ್ಪ ವಡಗೇರಿ ಕಲಾತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಶಿಕ್ಷಕ ನಟರಾಜ ಸೋನಾರ ನಿರ್ವಹಿಸಿದರು. ಕಾರ್ಯಕ್ರಮಕ್ಕೂ ಮುಂಚೆ ಪೌರಕಾರ್ಮಿಕರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.