ದೇಶದ ಆರ್ಥಿಕ ಪ್ರಗತಿಗೆ ಕೈಗಾರಿಕೆಗಳ ಕೊಡುಗೆ ಅನನ್ಯ

KannadaprabhaNewsNetwork |  
Published : Jul 30, 2025, 12:45 AM IST
ಬೆಂ.ಗ್ರಾ ಜಿಲ್ಲಾಡಳಿತ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಆರಂಭವಾದ ಎರಡು ದಿನಗಳ ಕಾರ್ಯಾಗಾರವನ್ನು ಸಚಿವ ಕೆ.ಎಚ್.ಮುನಿಯಪ್ಪ ಉದ್ಘಾಟಿಸಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ದೇಶದ ಪ್ರಗತಿಗೆ ಅನ್ನದಾತರಾದ ಕೃಷಿಕರು ಅತ್ಯಂತ ಮುಖ್ಯ. ಅದೇ ರೀತಿ ದೇಶದ ಆರ್ಥಿಕ ಅಭಿವೃದ್ಧಿಗೆ ಕೈಗಾರಿಕೆಗಳು ಮುಂಚೂಣಿ ಮಹತ್ವವನ್ನು ಪಡೆದಿವೆ ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ದೊಡ್ಡಬಳ್ಳಾಪುರ: ದೇಶದ ಪ್ರಗತಿಗೆ ಅನ್ನದಾತರಾದ ಕೃಷಿಕರು ಅತ್ಯಂತ ಮುಖ್ಯ. ಅದೇ ರೀತಿ ದೇಶದ ಆರ್ಥಿಕ ಅಭಿವೃದ್ಧಿಗೆ ಕೈಗಾರಿಕೆಗಳು ಮುಂಚೂಣಿ ಮಹತ್ವವನ್ನು ಪಡೆದಿವೆ ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ಬೆಂ.ಗ್ರಾ ಜಿಲ್ಲಾಡಳಿತ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಎಂ.ಎಸ್.ಎಂ.ಇ ಪ್ರಗತಿ ವೇಗವರ್ಧನೆ ಯೋಜನೆ ಅಡಿಯಲ್ಲಿ ಸೂಕ್ಷ್ಮ,ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ತಂತ್ರಜ್ಞಾನ ಚಿಕಿತ್ಸಾಲಯ - ಏರೋಸ್ಪೇಸ್ ಕ್ಲಸ್ಟರ್ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ದೇಶದಲ್ಲಿ ಕೈಗಾರಿಕೀಕರಣದಿಂದ ದೇಶದ ಆರ್ಥಿಕ ಅಭಿವೃದ್ಧಿ ಆಗುತ್ತಿದೆ. ಅದೇ ರೀತಿ ಜನರ ತಲಾದಾಯ ಹೆಚ್ಚುತ್ತಿದೆ. ನಾನು ಕೇಂದ್ರದಲ್ಲಿ ಮಂತ್ರಿಯಾಗಿದ್ದಾಗ ಇಡೀ ದೇಶದಾದ್ಯಂತ ಸುಮಾರು 20 ಟೆಕ್ನಾಲಜಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿದ್ದೆ, ಹತ್ತನೇ ತರಗತಿ ಉತ್ತೀರ್ಣರಾದವರಿಂದ ಉನ್ನತ ಶಿಕ್ಷಣ ಪಡೆದವರಿಗೆ ಅವರ ಶೈಕ್ಷಣಿಕ ಮಟ್ಟದ ಆಧಾರದ ಮೇಲೆ ಅಥವಾ ಅವರಿಗೆ ಅನುಕೂಲವಾಗುವ ತರಬೇತಿಯನ್ನು ನೀಡಲಾಗುತ್ತಿತ್ತು. ಅದರಲ್ಲಿ ಸುಮಾರು ಶೇ.85 ಅಭ್ಯರ್ಥಿಗಳಿಗೆ ಕೆಲಸ ದೊರೆತಿದೆ ಎಂದು ಹೇಳಿದರು.

ಇಂಡಿಯನ್ ಸೈನ್ಸ್ ಮತ್ತು ಟೆಕ್ನಾಲಜಿಯಲ್ಲಿ ನಮ್ಮ ದೇಶ ಬಹಳ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ, ಈ ರೀತಿಯ ಕಾರ್ಯಗಾರವಾಗಲಿ ಅಥವಾ ನಮ್ಮ ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬರೂ ಸಹ ಬಳಸಿಕೊಳ್ಳಬೇಕು, ಅದರಲ್ಲೂ ಯುವಕರ ಭವಿಷ್ಯ ಉಜ್ವಲವಾಗಲು ನಾವು ಸದಾ ಶ್ರಮಿಸುತ್ತೇವೆ ಎಂದರು.

ಕೈಗಾರಿಕಾ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆ ಇದ್ದಲ್ಲಿ ಜಿಲ್ಲಾ ಕೈಗಾರಿಕಾ ಇಲಾಖೆಗೆ ತಿಳಿಸಿ ಪರಿಹರಿಸಲಾಗುವುದು. ಕೈಗಾರಿಕಾ ಕೇಂದ್ರಗಳು ಅಭಿವೃದ್ಧಿ ಆದರೆ ದೇಶದ ಆರ್ಥಿಕ ಪರಿಸ್ಥಿತಿ ಬೆಳೆಯುತ್ತದೆ. ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಹೆಚ್ಚಿನ ಮಾಹಿತಿ ಪಡೆಯಲು ಸಂಬಂಧಪಟ್ಟ ಅಧಿಕಾರಿಗಳನ್ನು ಅಥವಾ ನೇರವಾಗಿ ನನ್ನನು ಸಂಪರ್ಕಿಸಿ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೈಗಾರಿಕಾ ಕ್ಷೇತ್ರ ಹೆಚ್ಚು ಅಭಿವೃದ್ಧಿ ಆಗುತ್ತಿದೆ. ಮುಂದಿನ 20 ವರ್ಷಗಳವರೆಗೆ ಕೈಗಾರಿಕೆಗಳಿಗೆ ವಿದ್ಯುತ್ ಪೂರೈಕೆ ಸಮರ್ಪಕವಾಗಿ ಪೂರೈಕೆ ಆಗಬೇಕಿದೆ. ಹೀಗಾಗಿ ಮುಂದಿನ ಯೋಜನೆಗೆ ಇಂಧನ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ ಅವರು ಮಾತನಾಡಿ, ಕರ್ನಾಟಕದಲ್ಲಿ ಕೈಗಾರಿಕೆಗಳು ಹೆಚ್ಚಿನ ಮಟ್ಟದಲ್ಲಿ ಬೆಳೆದು ನಿಂತಿವೆ ಇದರ ಜೊತೆಯಲ್ಲಿ ಸಣ್ಣ ಉದ್ದಿಮೆಗಳು ಹೆಚ್ಚು ಬೆಳೆದು ಉದ್ಯೋಗಗಳು ಹೆಚ್ಚಾಗಲಿ, ಉದ್ಯೋಗಗಳನ್ನು ಸೃಷ್ಟಿ ಮಾಡುವ ಉದ್ಯಮಗಳ ಉತ್ತೇಜನ ನೀಡುವುದರ ಮೂಲಕ ನಿರುದ್ಯೋಗ ನಿವಾರಣೆಗೆ ಉತ್ತೇಜಿಸುತ್ತದೆ. ಸಣ್ಣ ಉದ್ದಮೆ ಮತ್ತು ಕೈಗಾರಿಕೆಗಳಲ್ಲಿ ತೊಂದರೆಯಾದರೆ ಕೂಡಲೇ ಅಧಿಕಾರಿಗಳನ್ನು ಸಂಪರ್ಕಿಸಲು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ರಾಜಣ್ಣ, ಉಪಾಧ್ಯಕ್ಷರಾದ ನಾರಾಯಣ ಸ್ವಾಮಿ, ವಿಶ್ವನಾಥಪುರ ಗ್ರಾಮ ಪಂಚಾಯತಿ ಅಧ್ಯಕ್ಷ ವೆಂಕಟಮ್ಮ, ಉಪಾಧ್ಯಕ್ಷರಾದ ಮಂಗಳಮ್ಮ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್ ನಟರಾಜ್, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ನರೇಂದ್ರ ಬಾಬು ಎನ್, ಉಪನಿರ್ದೇಶಕರಾದ ಪುಷ್ಪಲತಾ, ದಾಬಸ್ ಪೇಟೆ ಕೈಗಾರಿಕ ಸಂಘದ ಅಧ್ಯಕ್ಷ ಎಸ್.ಕಂಟಪ್ಪ, ಸ್ಥಳೀಯ ಮುಖಂಡರು ಹಾಗೂ ಕೈಗಾರಿಕಾ ಉದ್ಯಮಿಗಳು ಉಪಸ್ಥಿತರಿದ್ದರು.29ಕೆಡಿಬಿಪಿ7-

ಬೆಂ.ಗ್ರಾ ಜಿಲ್ಲಾಡಳಿತ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಆರಂಭವಾದ ಎರಡು ದಿನಗಳ ಕಾರ್ಯಾಗಾರವನ್ನು ಸಚಿವ ಕೆ.ಎಚ್.ಮುನಿಯಪ್ಪ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ