ಟಿಎಪಿಸಿಎಂಎಸ್ ಪ್ರಗತಿಗೆ ಸಹಕಾರ ರತ್ನಗಳ ಕೊಡುಗೆ ಅಪಾರ

KannadaprabhaNewsNetwork |  
Published : Oct 22, 2026, 01:30 AM IST
ಫೋಟೋ: 21 ಹೆಚ್‌ಎಸ್‌ಕೆ 1ಹೊಸಕೋಟೆ ನಗರದ ಕೆ ಆರ್. ರಸ್ತೆಯಲ್ಲಿರುವ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ  ಆವರಣದಲ್ಲಿ ಆಯುಧ ಪೂಜೆ ಪ್ರಯುಕ್ತ ಸಂಘದ ಉಪಾಧ್ಯಕ್ಷ ಮುತ್ಕೂರು ಮುನಿರಾಜು ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಹೊಸಕೋಟೆ: ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಸಹಕಾರ ರತ್ನ ಪುರಸ್ಕೃತ ದಿ.ಕೋಡಿಹಳ್ಳಿ ಸೊಣ್ಣಪ್ಪ ಸೇರಿದಂತೆ ಹಲ ಹಿರಿಯರ ಪರಿಶ್ರಮ, ದೂರದೃಷ್ಟಿ ಹಾಗೂ ಸಹಕಾರದಿಂದ ಹಂತಹಂತವಾಗಿ ಅಭಿವೃದ್ಧಿ ಹೊಂದಿ ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯಲ್ಲಿ ಹೊಸ ಮೈಲುಗಲ್ಲನ್ನು ಸೃಷ್ಟಿಸಿದೆ ಎಂದು ಟಿಎಪಿಸಿಎಂಎಸ್ ಉಪಾಧ್ಯಕ್ಷ ಮುತ್ಕೂರು ಮುನಿರಾಜು ತಿಳಿಸಿದರು

ಹೊಸಕೋಟೆ: ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಸಹಕಾರ ರತ್ನ ಪುರಸ್ಕೃತ ದಿ.ಕೋಡಿಹಳ್ಳಿ ಸೊಣ್ಣಪ್ಪ ಸೇರಿದಂತೆ ಹಲ ಹಿರಿಯರ ಪರಿಶ್ರಮ, ದೂರದೃಷ್ಟಿ ಹಾಗೂ ಸಹಕಾರದಿಂದ ಹಂತಹಂತವಾಗಿ ಅಭಿವೃದ್ಧಿ ಹೊಂದಿ ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯಲ್ಲಿ ಹೊಸ ಮೈಲುಗಲ್ಲನ್ನು ಸೃಷ್ಟಿಸಿದೆ ಎಂದು ಟಿಎಪಿಸಿಎಂಎಸ್ ಉಪಾಧ್ಯಕ್ಷ ಮುತ್ಕೂರು ಮುನಿರಾಜು ತಿಳಿಸಿದರು.

ನಗರದ ಟಿಎಪಿಸಿಎಂಸ್ ಆವರಣದಲ್ಲಿ ಆಯೋಜಿಸಿದ್ದ ಆಯುಧ ಪೂಜೆ, ವಿಜಯದಶಮಿ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಹಕಾರ ಸಂಘವೊಂದನ್ನು ಅಭಿವೃದ್ಧಿ ಪಡಿಸುವುದು ಸುಲಭದ ಕೆಲಸವಲ್ಲ. ಅದಕ್ಕೆ ನಿರಂತರ ಪರಿಶ್ರಮ, ದೂರದೃಷ್ಟಿ ಹಾಗೂ ಹಿರಿಯರ ಮಾರ್ಗದರ್ಶನ ಅಗತ್ಯ. ಈ ನಿಟ್ಟಿನಲ್ಲಿ 1949ರಲ್ಲಿ ಪ್ರಾರಂಭವಾದ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ರೈತರು ಹಾಗೂ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದೆ. ಸಂಘದ ಅಭಿವೃದ್ಧಿಗೆ ಅಗತ್ಯ ಯೋಜನೆಗಳು ಹಾಗೂ ಅನುದಾನ ಒದಗಿಸುವಲ್ಲಿ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಹಾಗೂ ಹಾಲಿ ಶಾಸಕ ಶರತ್ ಬಚ್ಚೇಗೌಡ ಸೇರಿದಂತೆ ಹಲ ನಾಯಕರ ಪಾತ್ರ ಮಹತ್ವದ್ದಾಗಿದೆ. ಇದರಿಂದ ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಅಭಿವೃದ್ಧಿಗೆ ಸಾಧ್ಯವಾಯಿತು ಎಂದು ಹೇಳಿದರು.

ಸಂಘದ ಬೆಳವಣಿಗೆಯಲ್ಲಿ ಮುಖ್ಯವಾಗಿ ಸಂಘದಲ್ಲಿ 15 ವರ್ಷ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದಿ.ಕೋಡಿಹಳ್ಳಿ ಸೊಣ್ಣಪ್ಪನವರು ಸಂಘದ ಅಭಿವೃದ್ಧಿಗೆ ಶ್ರಮಿಸಿದ್ದರು. ಅವರ ಅಧಿಕಾರಾವಧಿಯಲ್ಲಿ ಸರ್ಕಾರದಿಂದ ಸಂಘಕ್ಕೆ ಸುಮಾರು ೩೦ ಗುಂಟೆ ಜಮೀನು ಮಂಜೂರು ಮಾಡಿಸಿಕೊಳ್ಳಲಾಗಿತ್ತು. ಅಲ್ಲದೆ, ಅಂಗಡಿ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆ ಆದಾಯ ಬರುವ ವ್ಯವಸ್ಥೆ ಕಲ್ಪಿಸುವ ಮೂಲಕ ಸಂಘದ ಆರ್ಥಿಕ ಸದೃಢತೆಗೆ ಅಡಿಪಾಯ ಹಾಕಿದ್ದರು ಎಂದು ಸ್ಮರಿಸಿದರು.

ಟಿಎಪಿಸಿಎಂಎಸ್ ನಿರ್ದೇಶಕ ಆನಂದಾಚಾರಿ ಮಾತನಾಡಿ ಪ್ರಸ್ತುತ ಮಾರುಕಟ್ಟೆ ವ್ಯವಸ್ಥೆಯಲ್ಲಿ ತೀವ್ರ ಸ್ಪರ್ಧೆ ಉಂಟಾಗಿರುವ ನಡುವೆಯೂ ಹೊಸಕೋಟೆ ಟಿಎಪಿಸಿಎಂಸ್ ತಾಲೂಕಿನಲ್ಲಿ 6 ಶಾಖೆಗಳನ್ನು ಹೊಂದಿದ್ದು ಉತ್ತಮವಾಗಿ ಕೆಲಸ ಮಾಡುತ್ತಿದೆ. ಸಹಕಾರಿ ಸಂಘ ಎಂದರೆ ಅದು ಸಾಮಾನು ನಾಗರೀಕರ ಸಂಘ. ಆದ್ದರಿಂದ ಪ್ರತಿಯೊಬ್ಬ ನಾಗರೀಕರು ಸಹಕಾರಿ ಸಂಘಗಳ ಜನತಾ ಬಜಾರ್‌ನಲ್ಲಿ ವ್ಯಾಪಾರ ವಹಿವಾಟು ನಡೆಸಿ ಅಭಿವೃದ್ಧಿಗೆ ಸಹಕರಿಸಬೇಕು. ಗುಣಮಟ್ಟದ ಆಹಾರ ಪದಾರ್ಥಗಳು, ದಿನಸಿ ಸಾಮಾಗ್ರಿಗಳು, ಗೃಹಪಯೋಗಿ ವಸ್ತುಗಳು, ಬಟ್ಟೆಗಳು, ಪಾದರಕ್ಷೆಗಳು, ಕ್ರಿಮಿನಾಶಗಳು, ಹಾರ್ಡ್ವೇರ್ ವಸ್ತುಗಳು ಒಂದೇ ಕಡೆ ಲಭ್ಯವಾಗಲಿದೆ. ಗ್ರಾಹಕರು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಟಿಎಪಿಸಿಎಂಎಸ್ ಸಿಇಒ ಸೋಮಣ್ಣ, ಸಹಾಯಕ ವ್ಯವಸ್ತಾಪಕ ಸೋಮಶೇಖರ್ ಸೇರಿದಂತೆ ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗ ಹಾಜರಿದ್ದರು.

ಫೋಟೋ: 21 ಹೆಚ್‌ಎಸ್‌ಕೆ 1

ಹೊಸಕೋಟೆಯ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆವರಣದಲ್ಲಿ ಆಯುಧಪೂಜೆ ಪ್ರಯುಕ್ತ ಸಂಘದ ಉಪಾಧ್ಯಕ್ಷ ಮುತ್ಕೂರು ಮುನಿರಾಜು ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಟುಂಬ ಸುಸೂತ್ರವಿರಲು ಸದಸ್ಯರಲ್ಲಿ ಬಾಂಧವ್ಯ ಮುಖ್ಯ
ಬಾಲಕೃಷ್ಣ ಸಚಿವರಾದ ಬಳಿಕ ಕ್ಷೇತ್ರಕ್ಕೆ ಹೆಚ್ಚು ಅನುದಾನ