ಕನ್ನಡಪ್ರಭ ವಾರ್ತೆ ವಿಜಯಪುರ ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಕೊಡುಗೆ ಅವಶ್ಯಕ. ಆ ನಿಟ್ಟಿನಲ್ಲಿ ಇಂತಹ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸಿ ಉತ್ತಮ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ನಿವೃತ್ತ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಕೊಡುಗೆ ಅವಶ್ಯಕ. ಆ ನಿಟ್ಟಿನಲ್ಲಿ ಇಂತಹ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸಿ ಉತ್ತಮ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ನಿವೃತ್ತ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರ ಸಹಯೋಗದಲ್ಲಿ ದತ್ತು ಗ್ರಾಮ ಅರಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಅರಕೇರಿ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎ.ಜಿ.ಮುಲ್ಲಾ ಮಾತನಾಡಿ, ಎನ್‌ಎಸ್‌ಎಸ್ ಶಿಬಿರದಾದ್ಯಂತ ಸ್ವಯಂಸೇವಕರ ಶಿಸ್ತು, ಸಾಮಾಜಿಕ ಜವಾಬ್ದಾರಿಗಳು ಮತ್ತು ಸಕ್ರಿಯ ಭಾಗವಹಿಸುವಿಕೆ ಅಲ್ಲದೆ ಅವರ ಪ್ರಾಮಾಣಿಕ ಪ್ರಯತ್ನಗಳು ಮತ್ತು ಸಮರ್ಪಣಾ ಮನೋಭಾವವನ್ನು ಶ್ಲಾಘಿಸಿದರು.
ಹಿಂದಿ ವಿಭಾಗದ ಮುಖ್ಯಸ್ಥೆ ಡಾ.ಮೀನಾಕ್ಷಿ ಪಾಟೀಲ ಮಾತನಾಡಿ, ನಿಜವಾದ ಸ್ವಯಂಸೇವಾ ಮನೋಭಾವ ಎಂದರೆ ಅದು ರಾಷ್ಟ್ರೀಯ ಸೇವಾ ಯೋಜನೆ, ಅಂತಹ ಶಿಬಿರದಲ್ಲಿ ಸ್ವಯಂಸೇವಕರು ನಿಸ್ವಾರ್ಥ ಸೇವೆಯ ಕಾರ್ಯನಿರ್ವಹಿಸಿದ್ದೀರಿ. ಶಿಬಿರದ ಸಮಯದಲ್ಲಿನ ಸೇವಾ ಮನೋಭಾವ, ನಾಯಕತ್ವ ಗುಣ ಮತ್ತು ಸಹಾನುಭೂತಿಯ ಮೌಲ್ಯವನ್ನು ಎಂದೆಂದಿಗೂ ಹಸಿರಾಗಿರುವಂತೆ ಪ್ರೇರೇಪಿಸಿದರು.
ರಾಷ್ಟ್ರೀಯ ಸೇವಾ ಯೋಜನೆ ಘಟಕ ಆಯೋಜಿಸಿ 7 ದಿನಗಳ ಸಂಪೂರ್ಣ ವರದಿವಾಚನ ಮಾಡಲಾಯಿತು. ಶಿಬಿರದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿಸಿದ ಸ್ವಯಂಸೇವಕರನ್ನು ಟ್ರೋಫಿ ಮತ್ತು ಪ್ರಶಸ್ತಿ ವಿತರಿಸಲಾಯಿತು. ವಿದ್ಯಾರ್ಥಿಗಳು ಶಿಬಿರದ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಎನ್‌ಎಸ್‌ಎಸ್ ಘಟಕ-1 ಮತ್ತು 2ರ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಮಿಲನ ರಾಠೋಡ, ಡಾ.ತರನ್ನುಮ್ ಜಬೀನಖಾನ್, ಡಾ.ಕೆ.ಮಹೇಶಕುಮಾರ, ಮಹಾವಿದ್ಯಾಲಯದ ಬೋಧಕ ಸಿಬ್ಬಂದಿ, ಸ್ವಯಂಸೇವಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿ, ನಿಸ್ವಾರ್ಥ ಸೇವೆ ಮನೋಭಾವ ಅದು ಎನ್‌ಎಸ್‌ಎಸ್, ಇಂತಹ ಶಿಬಿರದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ನಿಮ್ಮ ವ್ಯಕ್ತಿತ್ವ, ಸ್ವಯಂಸೇವಾ ಮನೋಭಾವ ವಿಕಸನ ಮಾಡಿಕೂಳ್ಳಬೇಕು- ಡಾ.ಆರ್.ಎಂ.ಮಿರ್ಧೆ, ನಿವೃತ್ತ ಪ್ರಾಚಾರ್ಯೆ
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.