ಶಾಲೆಗಳ ಅಭಿವೃದ್ಧಿಗೆ ದಾನಿಗಳ ಸಹಕಾರವೂ ಅಗತ್ಯ

KannadaprabhaNewsNetwork |  
Published : Aug 28, 2026, 01:15 AM IST
ಪೋಟೋ 4 : ಸೋಂಪುರ ಹೋಬಳಿಯ ಕಂಬಾಳು ಗ್ರಾಮದ ಶ್ರೀ ವಿಶ್ವಾರಾಧ್ಯ ದೇಶೀಕೇಂದ್ರ ಗ್ರಾಮಾಂತರ ಪ್ರೌಢಶಾಲೆಯಲ್ಲಿ ದಾನಿಗಳಾದ ಕಂಬಾಳು ಉಮೇಶ್ ಶಾಲಾ ಮಕ್ಕಳಿಗೆ ಬ್ಯಾಗ್ ಗಳನ್ನು ವಿತರಿಸಿದರು | Kannada Prabha

ಸಾರಾಂಶ

ದಾಬಸ್‍ಪೇಟೆ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಅನುದಾನದ ಜತೆಗೆ ದಾನಿಗಳು ಹಾಗೂ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಜೊತೆಗೆ ವಿದ್ಯಾರ್ಥಿಗಳೂ ಸಹ ಈ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮುಖ್ಯಶಿಕ್ಷಕ ವಿಜಯಕುಮಾರ್ ಹೇಳಿದರು

ದಾಬಸ್‍ಪೇಟೆ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಅನುದಾನದ ಜತೆಗೆ ದಾನಿಗಳು ಹಾಗೂ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಜೊತೆಗೆ ವಿದ್ಯಾರ್ಥಿಗಳೂ ಸಹ ಈ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮುಖ್ಯಶಿಕ್ಷಕ ವಿಜಯಕುಮಾರ್ ಹೇಳಿದರು.

ಸೋಂಪುರ ಹೋಬಳಿಯ ಕಂಬಾಳು ಗ್ರಾಮದ ಶ್ರೀ ವಿಶ್ವಾರಾಧ್ಯ ದೇಶೀಕೇಂದ್ರ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರಿ ಹಾಗೂ ಶಾಲೆಗಳಿಗೆ ದಾನಿಗಳು ವಿವಿಧ ಬಗೆಯ ನೆರವು ನೀಡುವುದರಿಂದ ಶಾಲೆಗಳ ಮೂಲಸೌಕರ್ಯ ಮತ್ತು ಶೈಕ್ಷಣಿಕ ವಾತಾವರಣವನ್ನು ಮತ್ತಷ್ಟು ಉತ್ತಮಪಡಿಸಲು ಸಾಧ್ಯವಾಗುತ್ತದೆ ಎಂದರು.

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಅಗತ್ಯ ಸೌಲಭ್ಯಗಳು ದೊರೆತಾಗ ಅವರಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ. ದಾನಿಗಳು ಶಾಲೆಗಳ ಅಭಿವೃದ್ಧಿ ಕಾರ್ಯಗಳಲ್ಲಿ ಕೈಜೋಡಿಸಿದರೆ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸಲು ಸಾಧ್ಯವಾಗುತ್ತದೆ. ಶಿಕ್ಷಕರು ಮಕ್ಕಳಿಗೆ ಪಠ್ಯಕ್ರಮದ ಜ್ಞಾನ ನೀಡುವುದರ ಜತೆಗೆ ಉತ್ತಮ ಸಂಸ್ಕಾರ, ಶಿಸ್ತು, ಮಾನವೀಯತೆ ಹಾಗೂ ದೇಶದ ಬಗ್ಗೆ ಜವಾಬ್ದಾರಿಯ ಭಾವನೆಯನ್ನು ಬೆಳೆಸಬೇಕು ಎಂದರು.

ಬ್ಯಾಗ್ ವಿತರಿಸಿದ ಮಾತನಾಡಿದ ದಾನಿ ಕಂಬಾಳು ಉಮೇಶ್ ಮಾತನಾಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಅಭಿವೃದ್ಧಿ ಸರ್ಕಾರದ ಕೆಲಸವμÉ್ಟೀ ಎಂಬ ಮನಸ್ಥಿತಿ ಸರಿಯಲ್ಲ. ಸ್ಥಳೀಯರು, ಉಳ್ಳವರು, ದಾನಿಗಳು ಅಗತ್ಯ ಸಹಕಾರ, ಪೆÇ್ರೀತ್ಸಾಹ ನೀಡಿದರೆ ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗೊಳ್ಳಲಿದೆ. ಜತೆಗೆ ನಮ್ಮ ಮಕ್ಕಳು ಕಲಿಕೆಯಲ್ಲಿ ಪ್ರಗತಿ ಸಾಧಿಸಿ, ಊರಿನ ಕೀರ್ತಿ ಹೆಚ್ಚಿಸಲಿದ್ದಾರೆ.ನಮ್ಮೂರಿನ ಶಾಲೆ ಎಂಬ ಅಭಿಮಾನದಿಂದ ದಾನದ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಈ ಮೂಲಕ ಹುಟ್ಟೂರಿನ ಋಣ ತೀರಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಿಕ್ಷಕರುಗಳಾದ ವೀರೇಶ್, ವಿಶ್ವನಾಥ್, ಜ್ಞಾನೇಶ್, ರವಿಕಿರಣ್, ಯೋಗೇಶ್ವರಿ, ಮುಖಂಡರುಗಳಾದ ಮಹೇಶ್ ಕುಮಾರ್, ಧನುಷ್ ಸೇರಿದಂತೆ ವಿದ್ಯಾರ್ಥಿಗಳಿದ್ದರು.

ಪೋಟೋ 4 : ಸೋಂಪುರ ಹೋಬಳಿಯ ಕಂಬಾಳು ಗ್ರಾಮದ ಶ್ರೀ ವಿಶ್ವಾರಾಧ್ಯ ದೇಶೀಕೇಂದ್ರ ಗ್ರಾಮಾಂತರ ಪ್ರೌಢಶಾಲೆಯಲ್ಲಿ ದಾನಿಗಳಾದ ಕಂಬಾಳು ಉಮೇಶ್ ಶಾಲಾ ಮಕ್ಕಳಿಗೆ ಬ್ಯಾಗ್ ಗಳನ್ನು ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾರಾಯಣ ಶ್ರೀಗಳ ಜಯಂತಿ: ಪ್ರಣವಾನಂದ ಶ್ರೀಗಳ ಕಡೆಗಣನೆ
ಇಂದು ಶರಣ ಶ್ರೀನುಲಿಯ ಚಂದಯ್ಯ ಜಯಂತಿ