ಸಾಮೂಹಿಕ ಅಭಿವೃದ್ಧಿಗೆ ಸಹಕಾರಿ ತತ್ವವೇ ಪ್ರಮುಖ ಅಡಿಪಾಯ: ಸಿ.ಟಿ.ರವಿ

KannadaprabhaNewsNetwork |  
Published : Nov 21, 2026, 01:45 AM IST
ಪೋಟೋ | Kannada Prabha

ಸಾರಾಂಶ

ಮೂಡಿಗೆರೆಸಮಾಜದ ಸರ್ವಾಂಗೀಣ ಅಭಿವೃದ್ಧಿ ಹಾಗೂ ರೈತರ ಆರ್ಥಿಕ ಪ್ರಗತಿಗೆ ಸಹಕಾರಿ ತತ್ವವೇ ಪ್ರಮುಖ ಅಡಿಪಾಯ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಟಿ.ರವಿ ಹೇಳಿದರು.

ಟಿಎಪಿಸಿಎಂಎಸ್ ನೂತನ ಆಡಳಿತ ಕಚೇರಿ, ವಾಣಿಜ್ಯ ಸಂಕೀರ್ಣ ಕಟ್ಟಡಕ್ಕೆ ಭೂಮಿಪೂಜೆ

ಕನ್ನಡಪ್ರಭ ವಾರ್ತೆ, ಮೂಡಿಗೆರೆಸಮಾಜದ ಸರ್ವಾಂಗೀಣ ಅಭಿವೃದ್ಧಿ ಹಾಗೂ ರೈತರ ಆರ್ಥಿಕ ಪ್ರಗತಿಗೆ ಸಹಕಾರಿ ತತ್ವವೇ ಪ್ರಮುಖ ಅಡಿಪಾಯ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಟಿ.ರವಿ ಹೇಳಿದರು.ಪಟ್ಟಣದ ಟಿಎಪಿಸಿಎಂಎಸ್ (ಕೃಷಿ ಉತ್ಪನ್ನ ಮಾರುಕಟ್ಟೆ ಸಹಕಾರ ಸಂಘ) ನೂತನ ಆಡಳಿತ ಕಚೇರಿ ಹಾಗೂ ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ, ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರಧಾನಿ ನರೇಂದ್ರ ಮೋದಿ ಸಹಕಾರದಿಂದ ಸಮೃದ್ಧಿ ಆಶಯದಡಿ ಕೇಂದ್ರ ಸರ್ಕಾರ ಸಹಕಾರ ಸಚಿವಾಲಯ ಸ್ಥಾಪಿಸಿದೆ. ಅಮಿತ್ ಶಾ ನೇತೃತ್ವದಲ್ಲಿ ದೇಶಾದ್ಯಂತ ಸಹಕಾರಿ ಕ್ಷೇತ್ರ ಬಲಪಡಿಸುವ ಕಾರ್ಯ ನಡೆಯುತ್ತಿದೆ. ಸಹಕಾರಿ ತತ್ವ ಇಡೀ ವಿಶ್ವಕ್ಕೆ ಮಾದರಿ. ಸಮಾಜದ ಪ್ರತಿಯೊಬ್ಬರ ಅಭಿವೃದ್ಧಿಗೂ ಸಹಕಾರ ಮನೋಭಾವ ಅತ್ಯಗತ್ಯ ಎಂದರು.113 ವರ್ಷಗಳ ಹಿಂದೆ ಮಾಕೋನಹಳ್ಳಿ ಸಿದ್ದೇಗೌಡ ಹಾಗೂ ಕಡುವಳ್ಳಿ ಹುಚ್ಚೇಗೌಡರು ಸ್ಥಾಪಿಸಿದ ಸಂಸ್ಥೆ ಇಂದಿಗೂ ಉತ್ತಮ ವಾಗಿ ಮುನ್ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಸಂಸ್ಥೆ ಬೆಳವಣಿಗೆಯಲ್ಲಿ ಹಿಂದಿನ ಅಧ್ಯಕ್ಷರು, ನಿರ್ದೇಶಕರು ಹಾಗೂ ಸಿಬ್ಬಂದಿ ಪರಿಶ್ರಮ ಮಹತ್ವದ್ದಾಗಿದೆ. ಮೂಡಿಗೆರೆ ಟಿಎಪಿಸಿಎಂಎಸ್ ರೈತಸ್ನೇಹಿ ಸಂಸ್ಥೆಯಾಗಿ ಮತ್ತಷ್ಟು ಅಭಿವೃದ್ಧಿ ಹೊಂದಬೇಕು. ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಸಹಕಾರಿ ತತ್ವದ ಉದ್ದೇಶ ಈಡೇರಲಿದೆ. ನೂತನ ಕಟ್ಟಡದಲ್ಲಿ ಪಾರದರ್ಶಕ ಆಡಳಿತಕ್ಕೆ ಆದ್ಯತೆ ನೀಡಬೇಕು. ಪ್ರಸ್ತುತ ಬರಗಾಲದ ಪರಿಸ್ಥಿತಿಯಲ್ಲಿ ರೈತರ ಹಿತದೃಷ್ಟಿಯಿಂದ ಡಿಸಿಸಿ ಬ್ಯಾಂಕ್ ನಿಂದಲೂ ಅಗತ್ಯ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.ಮಾಜಿ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ 1913ರಲ್ಲಿ ಆರಂಭಗೊಂಡ ಸಂಸ್ಥೆ ಇಂದಿಗೂ ತನ್ನ ಅಸ್ತಿತ್ವ ಮತ್ತು ಗೌರವವನ್ನು ಉಳಿಸಿಕೊಂಡು ಮುನ್ನಡೆಯುತ್ತಿರುವುದು ಶ್ಲಾಘನೀಯ. ಇದಕ್ಕೆ ಹಿಂದಿನ ಅಧ್ಯಕ್ಷ ಹಾಗೂ ನಿರ್ದೇಶಕರ ಸೇವೆಯೇ ಕಾರಣ. ಬರಗಾಲ ಸೇರಿದಂತೆ ಸಂಕಷ್ಟದ ಸಂದರ್ಭಗಳಲ್ಲಿ ರೈತರೇ ಹೆಚ್ಚು ತೊಂದರೆ ಅನುಭವಿಸುತ್ತಾರೆ. ಇಂತಹ ಸಮಯದಲ್ಲಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಿ, ಹಣ ಮಿತವಾಗಿ ಬಳಸುವ ಮೂಲಕ ಸಹಕಾರ ತತ್ವದಡಿ ಪರಸ್ಪರ ನೆರವಾಗಿ ಬದುಕಬೇಕು ಎಂದು ಹೇಳಿದರು.ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಎಲ್.ಕಲ್ಲೇಶ್ ಮಾತನಾಡಿ, ಸುಮಾರು ₹2.65 ಕೋಟಿ ವೆಚ್ಚದಲ್ಲಿ ನೂತನ ಆಡಳಿತ ಕಚೇರಿ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಿಸಲಾಗುತ್ತಿದೆ. ಈ ಕಟ್ಟಡ ರೈತರು, ಷೇರುದಾರರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಜತೆಗೆ ಕೃಷಿ ಉತ್ಪನ್ನಗಳ ಮಾರಾಟಕ್ಕೂ ಅವಕಾಶ ಕಲ್ಪಿಸಲಾಗುವುದು ಎಂದರು.ಟಿಎಪಿಸಿಎಂಎಸ್ ಉಪಾಧ್ಯಕ್ಷ ಕೆ.ಬಿ.ಗಣೇಶ್, ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ, ರಾಜ್ಯ ಸರ್ಕಾರಿ ನೌಕರರ ಯೂನಿಯನ್ ನಿರ್ದೇಶಕ ಲೋಕಪ್ಪಗೌಡ, ಸಂಘದ ನಿರ್ದೇಶಕರು ಹಾಗೂ ವಿವಿಧ ಸಹಕಾರಿ ಸಂಸ್ಥೆಗಳ ಅಧ್ಯಕ್ಷರು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ಹೆದ್ದಾರಿ ದುರಸ್ತಿಗಾಗಿ ರಸ್ತೆತಡೆ
ಅನುದಾನಿತ ಶಾಲಾ ನೌಕರರಿಗೂ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹ