ಮಹಿಳೆಯರು ಸ್ವಾವಲಂಬಿಗಳಾದರೆ ದೇಶದ ಪ್ರಗತಿ ಸಾಧ್ಯ

KannadaprabhaNewsNetwork |  
Published : Dec 15, 2025, 02:45 AM IST
01 | Kannada Prabha

ಸಾರಾಂಶ

ದೇವನಹಳ್ಳಿ: ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರಿಗೂ ಸಮಾನ ಅವಕಾಶಗಳಿದ್ದು, ಅವರು ಸ್ವಾವಲಂಬಿಗಳಾದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಮಾರಬ್ಬತಿಳಿಸಿದರು.

ದೇವನಹಳ್ಳಿ: ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರಿಗೂ ಸಮಾನ ಅವಕಾಶಗಳಿದ್ದು, ಅವರು ಸ್ವಾವಲಂಬಿಗಳಾದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಮಾರಬ್ಬತಿಳಿಸಿದರು.

ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ "ಸಾಮರಸ್ಯ ಕಾಪಾಡಿಕೊಳ್ಳುವಲ್ಲಿ ಮಹಿಳೆಯರ ಪಾತ್ರ ಹಾಗೂ ವಿಚ್ಚೇದನ ತಡೆಗಟ್ಟುವಿಕೆಯಲ್ಲಿ ಪೋಷಕರ ಜವಾಬ್ದಾರಿ " ಕುರಿತು ಮಾತನಾಡಿದ ಅವರು, ಮಹಿಳೆಯರು ದೇಶದ ಶಕ್ತಿ. ಅನೇಕ ಮಹಿಳೆಯರು ಕುಟುಂಬ ಜೀವನದಲ್ಲಿ ಅವರ ಪ್ರತಿಭೆ ಹೊರಹಾಕಲು ಸಂಘಗಳು ಎಲ್ಲಾ ಅವಕಾಶಗಳನ್ನು ಕಲ್ಪಿಸಿಕೊಟ್ಟಿವೆ. ಹಿಂದಿನ ಕಾಲದಲ್ಲಿ ಶಾಲೆಗಳಲ್ಲಿ ನೀತಿ ಪಾಠ ಹೇಳಿಕೊಡುತ್ತಿದ್ದರು. ಆದರೆ ಇತ್ತೀಚೆಗೆ ಆ ಪಾಠಗಳೂ ಶಾಲೆಗಳಲ್ಲಿ ದೊರೆಯುತ್ತಿಲ್ಲ. ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವ ಜವಾಬ್ದಾರಿ ಪೋಷಕರ ಮೇಲೂ ಇದೆ. ನಗರ ಪ್ರದೇಶಗಳಲ್ಲಿ ಉದ್ಯೋಗಸ್ಥರು ಶೇ.೩೫ರಷ್ಟು ದಾಂಪತ್ಯಗಳು ವಿಚ್ಚೇದನದತ್ತ ಹೋಗುತ್ತಿರುವುದು ವಿಷಾದಕರ. ಅನಾಥಾಶ್ರಮ, ವೃದ್ಧಾಶ್ರಮಗಳ ಸಂಖ್ಯೆಯೂ ಹೆಚ್ಚಾಗುತ್ತಿವೆ. ಪೋಷಕರು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಬೇಕು ಎಂದರು. ಜಿಲ್ಲಾ ಜನಜಾಗೃತಿ ವೇದಿಕೆ ಮಾಜಿ ಉಪಾಧ್ಯಕ್ಷ ನರಸಿಂಹರಾಜು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹೆಣ್ಣು ಗಂಡಿಗಿಂತ ಅತಿ ವೇಗವಾಗಿ ಎಲ್ಲಾ ಕ್ಷೇತಗಳಲ್ಲೂ ಮುನ್ನುಗ್ಗುತ್ತಿದ್ದಾಳೆ. ರಾಜ್ಯದಲ್ಲಿ ೫೫ ಲಕ್ಷ ಸಂಘ ಸದಸ್ಯರಿದ್ದಾರೆ. ಅದರಲ್ಲಿ ಬಹುಪಾಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸಾಲ ಪಡೆದಿದ್ದಾರೆ. ನಾನು ಕೂಡ ೧೯.೫ ಲಕ್ಷ ಸಾಲ ಪಡಿದಿದ್ದೇನೆ. ಜ್ಞಾನ ವಿಕಾಸದ ಒಬ್ಬ ಕಾರ್ಯಕರ್ತನಾಗಿದ್ದ ನಾನು ವ್ಯಕ್ತಿತ್ವ ವಿಕಸನದಿಂದ ನಾನು ಬದಲಾಗಿದ್ದೇನೆ. ಪೂಜ್ಯರು ಸಂಘದಿಂದ ರಾಜ್ಯದಲ್ಲಿ ಕೆರೆ, ಕುಂಟೆ, ದೇವಾಲಯ, ಮಾಸಾಶನ, ಮಹಿಳಾ ಸಬಲೀಕರಣದಂತಹ ಅನೇಕ ಕಾರ್ಯಕ್ರಮಗಳೂ ರಾಜ್ಯಾದ್ಯಂತ ಚಾಲ್ತಿಯಲ್ಲಿವೆ. ಸರ್ಕಾರದಿಂದ ಮಾಡುವ ಕೆಲಸವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಪೂಜ್ಯರು ಮಾಡುತ್ತಿದ್ದಾರೆ. ರಾಜ್ಯದಲ್ಲಿ ೨೩೭ ಮದ್ಯವರ್ಜನ ಶಿಬಿರಗಳು ನಡೆಯುತ್ತಿವೆ. ೧.೮೦ ಕೋಟಿ ಜನ ಕುಡಿತ ಬಿಟ್ಟಿದ್ದಾರೆ. ಅನೇಕ ಕುಟುಂಬಗಳು ನಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದರು.

ಪುರಸಭೆ ಮಾಜಿ ಅಧ್ಯಕ್ಷರಾದ ಎಂ.ಮೂರ್ತಿ, ಗೋಪಮ್ಮ, ಉಪಾಧ್ಯಕ್ಷ ಜಿ.ಎ.ರವೀಂದ್ರ, ದೇವನಹಳ್ಳಿ ಯೋಜನಾ ನಿರ್ದೇಶಕ ರವಿರಾಜ್‌ನಾಯಕ್, ಜ್ಞಾನವಿಕಾಸ ಯೋಜನಾಧಿಕಾರಿಗಳು, ಸಮನ್ವಯಾಧಿಕಾರಿಗಳು, ಮೇಲ್ವಿಚಾರಕರು, ಧರ್ಮಸ್ಥಳ ಸಂಸ್ಥೆಯ ಸಿಬ್ಬಂದಿ, ಸೇವಾಪ್ರತಿನಿಧಿಗಳು ಇದ್ದರು.

೧೪ ದೇವನಹಳ್ಳಿ ಚಿತ್ರಸುದ್ದಿ:೦೧

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಮ್ಮಿಕೊಂಡಿದ್ದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕ ಉಮಾರಬ್ಬ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ