ದೇಶ 2047ಕ್ಕೆ ವಿಕಸಿತ ಭಾರತವಾಗಲಿದೆ

KannadaprabhaNewsNetwork |  
Published : Aug 16, 2026, 04:00 AM IST
(ಪೋಟೋ-15ಬಿಕೆಟಿ3,   ಸಂಸದ ಪಿ.ಸಿ. ಗದ್ದಿಗೌಡರ  ಅವರು  ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ನಿತ್ಯ ಸ್ಮರಣೆಯಾಗಲಿ. ಅವರ ತ್ಯಾಗ, ಬಲಿದಾನ ಮತ್ತು ಕನಸುಗಳು ನಮಗೆ ನಿರಂತರ ಸ್ಫೂರ್ತಿ ನೀಡುತ್ತಿದ್ದು, ಈ ಸ್ಫೂರ್ತಿಯಿಂದ 2047ರ ವೇಳೆಗೆ ಭಾರತ ವಿಕಸಿತ ರಾಷ್ಟ್ರವಾಗಲಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ನಿತ್ಯ ಸ್ಮರಣೆಯಾಗಲಿ. ಅವರ ತ್ಯಾಗ, ಬಲಿದಾನ ಮತ್ತು ಕನಸುಗಳು ನಮಗೆ ನಿರಂತರ ಸ್ಫೂರ್ತಿ ನೀಡುತ್ತಿದ್ದು, ಈ ಸ್ಫೂರ್ತಿಯಿಂದ 2047ರ ವೇಳೆಗೆ ಭಾರತ ವಿಕಸಿತ ರಾಷ್ಟ್ರವಾಗಲಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.ನಗರದ ಶಿವಾನಂದ ಜೀನ್ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ವಸಾಹತುಶಾಹಿ ಆಳ್ವಿಕೆಯನ್ನು ಅಂತ್ಯಗೊಳಿಸಲು ಧೈರ್ಯ, ತ್ಯಾಗ ಮತ್ತು ಅಚಲ ಬದ್ಧತೆಯಿಂದ ಹೋರಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರನ್ನು ಕೃತಜ್ಞತೆಯಿಂದ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ವಿಕಸಿತ ಭಾರತ ನಿರ್ಮಾಣಕ್ಕಾಗಿ ನಾವೆಲ್ಲರೂ ಒಗ್ಗೂಡಿ ಶ್ರಮಿಸುತ್ತಿರುವ ಸಂದರ್ಭದಲ್ಲಿ, ಅವರ ಆದರ್ಶಗಳು ನಮಗೆ ನಿರಂತರ ಸ್ಫೂರ್ತಿ ನೀಡುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ 140 ಕೋಟಿ ಭಾರತೀಯರ ಶಕ್ತಿಯೊಂದಿಗೆ ದೇಶವು ವಿವಿಧ ಕ್ಷೇತ್ರಗಳಲ್ಲಿ ಪ್ರಗತಿಯ ಹೊಸ ಶಿಖರಗಳನ್ನು ಏರುತ್ತಿದೆ ಎಂದರು.

ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, ಭಾರತಾಂಬೆಯ ಸ್ವಾತಂತ್ರ್ಯಕ್ಕಾಗಿ ಬದುಕನ್ನೇ ಮುಡುಪಾಗಿಟ್ಟು ಸರ್ವಸ್ವವನ್ನೂ ತ್ಯಾಗ ಮಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ವೀರ ಸೇನಾನಿಗಳ ತ್ಯಾಗ, ಬಲಿದಾನಗಳಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅವರ ಸ್ಮರಣೆ ಸದಾ ನಮ್ಮಲ್ಲಿ ದೇಶಭಕ್ತಿಯ ಭಾವನೆ ಮೂಡಿಸಲಿ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಮಾತನಾಡಿ, ಸ್ವಾತಂತ್ರ್ಯದ ಮೌಲ್ಯಗಳನ್ನು ಎತ್ತಿಹಿಡಿದು, ಏಕತೆ ಮತ್ತು ರಾಷ್ಟ್ರಪ್ರೇಮದೊಂದಿಗೆ ಸಶಕ್ತ, ಸ್ವಾವಲಂಬಿ ಹಾಗೂ ವಿಕಸಿತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ಎಲ್ಲರೂ ಮುನ್ನಡೆಯೋಣ ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಡಾ.ಎಂ.ಎಸ್.ದಡ್ಡೆನ್ನವರ, ಎಸ್ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಬಸವರಾಜ ಯಂಕಂಚಿ, ರಾಜು ರೇವಣಕರ್, ಸತ್ಯನಾರಾಯಣ ಹೇಮಾದ್ರಿ, ಸುರೇಶ ಕೊಣ್ಣೂರ, ಬಸವರಾಜ ಹುನಗುಂದ, ಕಲ್ಲಪ್ಪ ಭಗವತಿ, ಉಮೇಶ ಹಂಚಿನಾಳ, ಶೋಭಾ ರಾವ್, ಶಶಿಕಲಾ ಮಜ್ಜಗಿ, ಭಾಗೀರಥಿ ಪಾಟೀಲ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಚಿವ ಸ್ಥಾನ ತಪ್ಪಲು ಎಂ.ಬಿ.ಪಾಟೀಲ ಕಾರಣ
ಹುನ್ನಾರಗಳಿಗೆ ಜನರೇ ಕಡಿವಾಣ ಹಾಕಲಿ