ಕನ್ನಡಪ್ರಭ ವಾರ್ತೆ, ತರೀಕೆರೆ
ಅವರು ಅಜ್ಜಂಪುರ ತಾಲೂಕಿನ ಚಿಕ್ಕಾನವಂಗಲ ಗ್ರಾಮದಲ್ಲಿ ಯುವ ಸ್ಫೂರ್ತಿ ಅಕಾಡೆಮಿ ವತಿಯಿಂದ ಶ್ರೀ ಚನ್ನಬಸವೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ನಡೆದ ಶ್ರೀ ಸ್ವಾಮಿ ವಿವೇಕಾನಂದ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಶಿಕ್ಷಣ ತರಬೇತಿ ಕೇಂದ್ರ ಕಟ್ಟಡದ ಭೂಮಿಪೂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳಿಗೆ ಅಂಕ ನೀಡುವ ಬದಲು ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನೀಡಿ ಅವರನ್ನು ಆತ್ಮೀಯವಾಗಿ ಮಾಡಬೇಕು. ಆಗ ಅವರು ದುಡಿದು ತಿನ್ನುತ್ತಾರೆ, ದೇಶಕ್ಕಾಗಿ ದುಡಿಯುತ್ತಾರೆ. ರಾಷ್ಟ್ರವನ್ನು ಸದೃಢಗೊಳಿಸುತ್ತಾರೆ ಎಂದು ಅವರು ಹೇಳಿದರು.ಸರ್ಕಾರಿ ಶಾಲೆ ಉಳಿಸಲು ಪ್ರಯತ್ನಿಸಿ, ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಿಲ್ಲ. ಅದೇ ವೇಳೆ ಖಾಸಗಿ ಶಾಲೆಗಳು ಹೆಚ್ಚುತ್ತಿವೆ. ಸರ್ಕಾರಿ ಶಾಲೆ ಉಳಿಸಲು ಎಲ್ಲರೂ ಪ್ರಯತ್ನಿಸಬೇಕು. ಸ್ವಾತಂತ್ರ್ಯ ದೊರೆತು 79 ವರ್ಷ ಕಳೆದರೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಜನರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸಲಾಗದವರು ನಮ್ಮನ್ನು ಏಕೆ ಆಳಬೇಕು ಎಂದು ಜನ ಪ್ರಶ್ನಿಸಬೇಕು ಎಂದರು.
ಚುನಾವಣೆ ಸಂದರ್ಭ ಸಾಮಾಜಿಕವಾಗಿ, ಸಮಾಜದ ಮೌಲ್ಯಗಳಿಗೆ ಅನುಗುಣವಾಗಿ ಕೆಲಸ ಮಾಡುವವರನ್ನು ಗುರುತಿಸಿ, ಅವಕಾಶ ಮಾಡಿಕೊಟ್ಟು ಗೆಲ್ಲಿಸಬೇಕು. ಅಂತಹ ಜನಾಂದೋಲನ ಜನರಿಂದಲೇ ಆರಂಭವಾಗಬೇಕು ಎಂದು ಸಲಹೆ ನೀಡಿದರು.
ಹಣ್ಣೆ ಮಠದ ಶ್ರೀ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಕೀಲರು ಬಿ.ವಿ. ದಿನೇಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಂದ ಡಾ.ಸಿ.ಬಿ. ಸುಂದರೇಶ್ ಅವರಿಗೆ ಸನ್ಮಾನಿಸಲಾಯಿತು.
ಡಿ ದೇವರಾಜ ಅರಸು ವಿಚಾರ ವೇದಿಕೆ ಉಪಾಧ್ಯಕ್ಷ ಸಿ.ಆರ್. ಬಸವರಾಜ್, ಭೂಮಿ ಫೌಂಡೇಶನ್ ಟ್ರಸ್ಟಿ ಅಧ್ಯಕ್ಷರು ಟಿ.ಜಿ. ಶಶಾಂಕ್, ಡಿ.ಎಂ. ಮಂಜುನಾಥಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ರವಿ ದಳವಾಯಿ, ಎಚ್.ಆರ್. ಚಂದ್ರಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಆರ್. ಅನಂತಪ್ಪ ಎಸ್.ಸಿ.ಆರ್.ಡಿ.ಪಿ ಯೋಜನಾಧಿಕಾರಿ ಕೊರಗಪ್ಪ ಪೂಜಾರಿ, ಸಿ.ಆರ್. ಬಸವರಾಜು, ಕೆ.ಸಿ. ಶಿವಮೂರ್ತಿ, ಮುಖ್ಯೋಪಾಧ್ಯಾಯ ಜೆ.ಆರ್. ಮಂಜಪ್ಪ ಭಾಗವಹಿಸಿದ್ದರು.