ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಆರ್ಥಿಕ ಪ್ರಗತಿ ಸಾಧ್ಯ: ಡಾ. ತೋಂಟದ ಸಿದ್ಧರಾಮ ಶ್ರೀಗಳು

KannadaprabhaNewsNetwork |  
Published : Oct 16, 2026, 02:15 AM IST
ವಾಣಿಜ್ಯೋದ್ಯಮ ಸಂಸ್ಥೆಯ ನೂತನ ಅಧ್ಯಕ್ಷ ಜಯದೇವ ಮೆಣಸಗಿ, ಕಾರ್ಯದರ್ಶಿ ರಾಘವೇಂದ್ರ ಕಾಲವಾಡ ಅವರನ್ನು ಸನ್ಮಾನಿಸಲಾಯಿತು.  | Kannada Prabha

ಸಾರಾಂಶ

ಗ್ರಾಮೀಣ ಭಾಗಕ್ಕೆ ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ತಂತ್ರಜ್ಞಾನದ ಪ್ರಾತಿನಿಧ್ಯ ಹೆಚ್ಚು ಸಿಗಬೇಕು.

ಲಿಂಗಾಯತ ಪ್ರಗತಿಶೀಲ ಸಂಘದ 2819ನೇ ಶಿವಾನುಭವ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಗದಗ

ಗ್ರಾಮಗಳು ಸಮಗ್ರವಾಗಿ ಅಭಿವೃದ್ಧಿಗೊಂಡಾಗ ಮಾತ್ರ ಭಾರತದ ಆರ್ಥಿಕ ಪ್ರಗತಿ ಸಾಧ್ಯ ಎಂದು ಎಡೆಯೂರು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.

ಗದಗ ನಗರದ ತೋಂಟದಾರ್ಯ ಮಠದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ 2819ನೇ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಹಳ್ಳಿಗಳು ಮತ್ತು ರೈತರು ದೇಶದ ಬೆನ್ನೆಲುಬು. ಗ್ರಾಮೀಣ ಭಾಗಕ್ಕೆ ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ತಂತ್ರಜ್ಞಾನದ ಪ್ರಾತಿನಿಧ್ಯ ಹೆಚ್ಚು ಸಿಗಬೇಕು. ಯುವಕರಲ್ಲಿ ವೃತ್ತಿ ಕೌಶಲ್ಯ ಬೆಳೆಸಿ, ಮಾನವ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಬೃಹತ್ ಕೈಗಾರಿಕೆಗಳಿಂದ ಹೊರಸೂಸುವ ವಿಷಾನಿಲ, ಕಲುಷಿತ ನೀರಿನ ದುಷ್ಪರಿಣಾಮ ನಿಯಂತ್ರಿಸಲು ವಿಜ್ಞಾನ ಬಳಸಬೇಕು ಎಂದರು. ಮದ್ಯ ಮತ್ತು ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು.

ಇದೇ ವೇಳೆ ಗದಗ ವಾಣಿಜ್ಯೋದ್ಯಮ ಸಂಸ್ಥೆಯ ನೂತನ ಅಧ್ಯಕ್ಷ ಜಯದೇವ ಮೆಣಸಗಿ, ಕಾರ್ಯದರ್ಶಿ ರಾಘವೇಂದ್ರ ಕಾಲವಾಡ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಯದೇವ ಮೆಣಸಗಿ, ವಾಣಿಜ್ಯವಿಲ್ಲದೆ ಪ್ರಗತಿ ಅಸಾಧ್ಯ. ವಾಣಿಜ್ಯ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.

ಅತಿಥಿ ಉಪನ್ಯಾಸ ನೀಡಿದ ಡಾ. ಟಿ.ಎನ್. ಗೋಡಿ, ದೇಶದ ನೈಸರ್ಗಿಕ, ಬೌದ್ಧಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿ, ವ್ಯಾಪಾರ-ವಹಿವಾಟು ಹಾಗೂ ವಿದೇಶಿ ಹೂಡಿಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಹೇಳಿದರು. ನಿವೃತ್ತ ಶಿಕ್ಷಕ ನಂಜಯ್ಯ ವಚನ ವಿಶ್ಲೇಷಣೆ ಮಾಡಿದರು.

ಪಾವನಿ ಮುನವಳ್ಳಿ, ಚೇತನಾ ವಚನ ಸಂಗೀತ ಹಾಡಿದರು. ಸೃಷ್ಟಿ ಪೂಜಾರ ಧರ್ಮಗ್ರಂಥ, ಶಾಂತಾ ಪೂಜಾರ ವಚನಚಿಂತನ ನಡೆಸಿದರು. ಎಚ್.ಎಸ್. ಕಿಂದ್ರಿ, ಚನ್ನಬಸಪ್ಪ ಅಂಗಡಿ ದಾಸೋಹ ಸೇವೆ ವಹಿಸಿದ್ದರು. ಸಂಘದ ಅಧ್ಯಕ್ಷ ಡಾ. ಉಮೇಶ ಪುರದ ಸ್ವಾಗತಿಸಿದರು. ಸುನಂದಾ ಪಿಳ್ಳೆ ನಿರೂಪಿಸಿದರು. ಶಿವಾನುಭವ ಸಮಿತಿ ಚೇರ್ಮನ್ ರಮೇಶ ಕಲ್ಲನಗೌಡರ, ಉಪಾಧ್ಯಕ್ಷರಾದ ಪ್ರಭು ಗಂಜಿಹಾಳ, ಸುರೇಖಾ ಪಿಳ್ಳಿ, ಕಾರ್ಯದರ್ಶಿ ಸಿದ್ಧರಾಮ ಪಟ್ಟೇದ, ಸಹಕಾರ್ಯದರ್ಶಿ ಪ್ರತಿಭಾ ಬಡ್ನಿ, ಕೋಶಾಧ್ಯಕ್ಷ ವೀರಣ್ಣ ಗೋಟಡಕಿ, ಪ್ರಮುಖರಾದ ಕೆ.ಎಸ್. ಕೋರಿಮಠ, ಸೋಮಶೇಖರ ಪುರಾಣಿಕಮಠ, ಆದೇಶ ಅಂಗಡಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಗಮಾಸ್ತಿ ಕ್ಷೇತ್ರದ ಮಹಿಳಾ ದಸರಾ ಜಿಲ್ಲೆಗೆ ಮಾದರಿ
ಅಗ್ನಿವೀರರಾಗಲು ಇಟಗಿಯಲ್ಲಿ ಉಚಿತ ತರಬೇತಿ ಶಿಬಿರ