ಒನಕೆ ಓಬವ್ವಳ ಧೈರ್ಯ, ಸಮಯಪ್ರಜ್ಞೆ ಮಹಿಳೆಯರಿಗೆ ಸ್ಫೂರ್ತಿ

KannadaprabhaNewsNetwork |  
Published : Nov 12, 2026, 02:00 AM IST
ಆಲೂರು ಭವನದಲ್ಲಿ ಜಿಲ್ಲಾಡಳಿತವು ಆಯೋಜಿಸಿದ್ದ ಒನಕೆ ಓಬವ್ವ ಜಯಂತಿ | Kannada Prabha

ಸಾರಾಂಶ

ಅಕ್ಕಮಹಾದೇವಿ, ಕಿತ್ತೂರ ರಾಣಿ ಚೆನ್ನಮ್ಮ, ಹೇಮರೆಡ್ಡಿ ಮಲ್ಲಮ್ಮ, ಒನಕೆ ಓಬವ್ವ ಅಂತಹ ವೀರ ಮಹಿಳೆಯರ ಜಯಂತಿ ಆಚರಿಸುವ ಮೂಲಕ ಅವರ ಸಾಧನೆ ಸ್ಮರಿಸುವುದು ಸ್ತುತ್ಯರ್ಹ.

ಧಾರವಾಡ:

ಅಕ್ಕಮಹಾದೇವಿ, ಕಿತ್ತೂರ ರಾಣಿ ಚೆನ್ನಮ್ಮ, ಹೇಮರೆಡ್ಡಿ ಮಲ್ಲಮ್ಮ, ಒನಕೆ ಓಬವ್ವ ಅಂತಹ ವೀರ ಮಹಿಳೆಯರ ಜಯಂತಿ ಆಚರಿಸುವ ಮೂಲಕ ಅವರ ಸಾಧನೆ ಸ್ಮರಿಸುವುದು ಸ್ತುತ್ಯರ್ಹ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.

ಇಲ್ಲಿಯ ಆಲೂರು ಭವನದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಒನಕೆ ಓಬವ್ವ ಜಯಂತಿ ಉದ್ಘಾಟಿಸಿದ ಅವರು, ಈ ಹಿಂದಿನ ಕಾಲದಲ್ಲಿ ಮಹಿಳೆಯರು ಮನೆಯ ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದರು. ಆದರೆ, ಇಂದು ಪೈಲಟ್‌ಗಳಾಗಿ, ರೈಲ್ವೆ ಮತ್ತು ವಿಮಾನಯಾನ ಕ್ಷೇತ್ರಗಳಲ್ಲಿ, ನೌಕಾಯಾನದಲ್ಲಿ ಹಾಗೂ ಸೈನ್ಯದಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ಸಾಮರ್ಥ್ಯ ಸಾಬೀತುಪಡಿಸುತ್ತಿದ್ದಾರೆ. ನಾವಿಂದು ಉತ್ತಮ ಸ್ಥಾನಕ್ಕೆ ಹೋಗಲು ಸಂವಿಧಾನ ನೀಡಿರುವ ಹಕ್ಕುಗಳು ಎಂದರು.

ಚಿತ್ರದುರ್ಗದ ಮದಕರಿ ನಾಯಕನ ಕಾಲದಲ್ಲಿ ಮಹಿಳೆಯರು ಮತ್ತು ಹಿಂದುಳಿದ ಸಮುದಾಯಗಳಿಗೆ ಶಿಕ್ಷಣ ಹಾಗೂ ಅವಕಾಶಗಳು ಸೀಮಿತವಾಗಿದ್ದವು. ಅಂತಹ ಪರಿಸ್ಥಿತಿಯಲ್ಲಿಯೂ ಮಹಿಳೆಯರು ತಮ್ಮ ಧೈರ್ಯ ಮತ್ತು ಸಾಮರ್ಥ್ಯದಿಂದ ಇತಿಹಾಸದಲ್ಲಿ ಸ್ಥಾನ ಪಡೆದಿದ್ದಾರೆ. ಇಂದು ಜಾತಿ, ಧರ್ಮಗಳ ಎಲ್ಲೆ ಮೀರಿ ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸುತ್ತಿದ್ದಾರೆ ಎಂದು ಹೇಳಿದರು.

ದಲಿತ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಡಾ. ಶರೀಫ ಮಾಕಪ್ಪನವರ ವೀರವನಿತೆ ಒನಕೆ ಓಬವ್ವ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ರವಿ ಕುಲಕರ್ಣಿ ನಿರೂಪಿಸಿದರು. ಸಂಜೀವ ಕುಂದಗೋಳ ತಂಡದಿಂದ ನೃತ್ಯ ಪ್ರದರ್ಶನ ನಡೆಯಿತು. ಸಮಾಜ ಮುಖಂಡರಾದ ರಾಮಣ್ಣ ಗಡ್ಡದ, ವೈ.ಬಿ. ಚಲವಾದಿ, ಸಿ.ಎಂ. ಕಾಳೆ, ಯಲ್ಲಪ್ಪ ಮಂಟೂರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀಪಾವಳಿಲೀ ರಾಕೆಟ್‌ನಂತೆ ಹಾರಿದ ವಾಯು ಮಾಲಿನ್ಯ!
ಕೌಟುಂಬಿಕ ಕೇಸಲ್ಲಿ ಕುಟುಂಬ ಸಿಲುಕಿಸುವುದು ತರವಲ್ಲ: ಕೋರ್ಟ್‌