- ಶಾಮನೂರು ಶಿವಶಂಕರಪ್ಪ ಶ್ರದ್ಧಾಂಜಲಿ ಸಭೆಯಲ್ಲಿ ಎಚ್‌ಎಸ್‌ಎಂ
ಚನ್ನಗಿರಿ: ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ವೀರಶೈವ-ಲಿಂಗಾಯಿತ ಸಮಾಜವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದವರು ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ ಗೌರವ ಅಧ್ಯಕ್ಷ ಎಚ್.ಎಸ್. ಮಲ್ಲಿಕಾರ್ಜುನಪ್ಪ ಹೇಳಿದರು.
ಪಟ್ಟಣದ ನಿವೃತ್ತ ನೌಕರರ ಭವನದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್- ಬಸವ ಬಳಗ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಶಾಮನೂರು ಶಿವಶಂಕರಪ್ಪ ರಾಜ್ಯದ ಎಲ್ಲ ಮಠಮಾನ್ಯಗಳಿಗೆ ತಮ್ಮ ಸ್ವಂತ ಹಣದಲ್ಲಿ ದೇಣಿಗೆ ನೀಡಿದವರು. ವೀರಶೈವ-ಲಿಂಗಾಯಿತ ಸಮಾಜದಲ್ಲಿ ಅನೇಕ ಉಪ ಪಂಗಡಗಳಲ್ಲಿ ಇದ್ದ ಗೊಂದಲಗಳನ್ನು ಬಗೆಹರಿಸಿ ವೀರಶೈವ- ಲಿಂಗಾಯಿತರು ಒಂದೇ ಎಂದು ಸಾರಿದ ಕೀರ್ತಿ ಶಿವಶಂಕರಪ್ಪ ಅವರಿಗೆ ಸಲ್ಲುತ್ತದೆ ಎಂದರು.ತಾಲೂಕು ಶ.ಸಾ.ಪ. ಅಧ್ಯಕ್ಷ ಎಂ.ಎಸ್. ಮಲ್ಲೇಶಪ್ಪ ಮಾತನಾಡಿ, ದಾವಣಗೆರೆ ನಗರಸಭೆ ಸದಸ್ಯರಾಗಿ ರಾಜಕೀಯ ಜೀವನ ಪ್ರಾರಂಭಿಸಿದ್ದ ಶಿವಶಂಕರಪ್ಪ ಅವರು 6 ಬಾರಿ ಶಾಸಕರಾಗಿ 95 ವರ್ಷಗಳ ತುಂಬು ಜೀವನ ನಡೆಸಿದರು. ಇಂದು ನಮ್ಮನ್ನೆಲ್ಲಾ ಅಗಲಿದ್ದು, ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದರು.
ಸಭೆಯಲ್ಲಿ ಪ್ರಮುಖರಾದ ಎನ್.ಎಸ್. ರಾಜಪ್ಪ, ಟಿ.ವಿ.ಶಿವಲಿಂಗಪ್ಪ, ಮಹಾರುದ್ರಪ್ಪ, ಜಿ.ಎಸ್.ಚಂದ್ರಪ್ಪ, ಬೇಕರಿ ಶಿವಲಿಂಗಪ್ಪ, ಕುಮಾರಪ್ಪ, ಬಿಲ್ಲಹಳ್ಳಿ ಸಿದ್ದಯ್ಯ, ಮರವಂಜಿ ರುದ್ರನಾಯ್ಕ್, ಮಹೇಶ್, ಲಕ್ಷ್ಮಿಸಾಗರ ಮಧು, ಜಿ.ಚಿನ್ನಸ್ವಾಮಿ ಮೊದಲಾದರು ಹಾಜರಿದ್ದರು.- - -
-23ಕೆಸಿಎನ್‌ಜಿ2.ಜೆಪಿಜಿ:ಚನ್ನಗಿರಿ ಸರ್ಕಾರಿ ನಿವೃತ್ತ ನೌಕರರ ಭವನದಲ್ಲಿ ತಾಲೂಕು ಶ.ಸಾ.ಪ. -ಬಸವ ಬಳಗದಿಂದ ಶಾಮನೂರು ಶಿವಶಂಕರಪ್ಪ ಶ್ರದ್ಧಾಂಜಲಿ ಸಭೆ ನಡೆಸಿ, ಸಂತಾಪ ಸೂಚಿಸಲಾಯಿತು.