ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು

KannadaprabhaNewsNetwork |  
Published : Feb 07, 2026, 01:15 AM IST
ಪರಮೇಶ್ವರ್‌ | Kannada Prabha

ಸಾರಾಂಶ

ಚಿಕ್ಕಮಗಳೂರು: ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಮತ್ತೊಮ್ಮೆ ಮುನ್ನಲೆಗ ಬಂದಿದೆ. ಚಿಕ್ಕಮಗಳೂರಿಗೆ ಶುಕ್ರವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಆಗಮಿಸಿದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ಡಾ.ಜಿ.ಪರಮೇಶ್ವರ್‌ ಅವರನ್ನೇ ಮುಖ್ಯಮಂತ್ರಿ ಆಗಿ ಹೈಕಮಾಂಡ್‌ ನೇಮಿಸಬೇಕು ಎಂಬ ಘೋಷಣೆ ಕೇಳಿ ಬಂದಿದೆ.

ಚಿಕ್ಕಮಗಳೂರು: ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಮತ್ತೊಮ್ಮೆ ಮುನ್ನಲೆಗ ಬಂದಿದೆ. ಚಿಕ್ಕಮಗಳೂರಿಗೆ ಶುಕ್ರವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಆಗಮಿಸಿದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ಡಾ.ಜಿ.ಪರಮೇಶ್ವರ್‌ ಅವರನ್ನೇ ಮುಖ್ಯಮಂತ್ರಿ ಆಗಿ ಹೈಕಮಾಂಡ್‌ ನೇಮಿಸಬೇಕು ಎಂಬ ಘೋಷಣೆ ಕೇಳಿ ಬಂದಿದೆ.

ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಮಗಳೂರಿಗೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್ ಅವರನ್ನು ಹಿರೇಮಗಳೂರು ಸರ್ಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ದಲಿತ ಸಂಘಟನೆಗಳ ಪದಾಧಿಕಾರಿಗಳು ಅದ್ಧೂರಿ ಸ್ವಾಗತ ಕೋರಿದರು. ಈ ವೇಳೆ ಡಾ.ಜಿ.ಪರಮೇಶ್ವರ್‌ ಮುಖ್ಯಮಂತ್ರಿಯಾಗಬೇಕೆಂದು ಘೋಷಣೆ ಕೂಗಿದ್ದಾರೆ.

ಸಿದ್ದರಾಮಯ್ಯ ನಂತರ ಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್‌ ಅವರನ್ನು ನೇಮಿಸಬೇಕು. ಚಿಕ್ಕಮಗಳೂರು ಕ್ಷೇತ್ರದಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಗೆಲ್ಲಿಸಿದ್ದೇವೆ. ಡಾ.ಜಿ.ಪರಮೇಶ್ವರ್‌ ಅವರನ್ನು ಮುಖ್ಯಮಂತ್ರಿ ಮಾಡಲೇ ಬೇಕೆಂದು ಆಗ್ರಹಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ತೀರ್ಮಾನ ಮಾಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಇದರಲ್ಲಿ ಆಸೆ ಪ್ರಶ್ನೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.-- ಫೋಟೋ

ಚಿಕ್ಕಮಗಳೂರಿಗೆ ಆಗಮಿಸಿದ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಕಾಂಗ್ರೆಸ್‌ನ ದಲಿತ ಮುಖಂಡರು ಅದ್ಧೂರಿ ಸ್ವಾಗತ ಕೋರಿದರು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಎಚ್.ಜೆ.ಪರಮೇಶ್ವರ, ಮುಖಂಡರಾದ ಜಗಣ್ಣ, ಗಂಗಾಧರ್, ಎಚ್.ಕೆ.ಕೇಶಮೂರ್ತಿ, ವಕಿಲರಾದ ರಮೇಶ್, ಅನಿಲ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆನೆಗಾಡು ಸೋಲಿಗರ ಹಾಡಿಗೆ ಕೊನೆಗೂ ಹರಿದ ಗಂಗೆ
ನಾಯಕತ್ವ ವೃದ್ಧಿಗೆ ವಿದ್ಯಾರ್ಥಿ ಸಂಸತ್ತು ಸಹಕಾರಿ: ಪ್ರೊ. ಜೆ.ಎಂ. ನಾಗಯ್ಯ