ರಾಜ್ಯಮಟ್ಟಕ್ಕೆ ಆಯ್ಕೆಯಾದ ಕಾರ್ಮಿಕನ ಮಗಳು

KannadaprabhaNewsNetwork | Published : Nov 11, 2024 11:49 PM

ಸಾರಾಂಶ

ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದ ಶಾಲಾ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ನಮ್ಮ ಗ್ರಾಮ ಹಾಗು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ ಇದು ಹೆಮ್ಮೆಯ ವಿಷಯ. ಇದೇ ರೀತಿ ಮುಂಬರುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯು ಪ್ರಥಮ ಸ್ಥಾನ ಪಡೆಯುವ ಮೂಲಕ ನಾಡಿಗೆ ಕೀರ್ತಿ ತರುವಂತಾಗಲಿ ಎಂದು ಮುಮ್ತಾಜ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದ ಕಟ್ಟಡ ಕಾರ್ಮಿಕನ ಮಗಳಾದ ಮೈತ್ರಿ ಎಂಬ ಗ್ರಾಮೀಣ ಪ್ರತಿಭೆ ಜಾವಲಿನ್ ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ಕಾರ್ಮಿಕ ಸಂಘದಿಂದ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಪಟ್ಟಣದ ಈದ್ಗಾ ಬೀದಿಯಲ್ಲಿರುವ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಲೆನಾಡು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಅಧ್ಯಕ್ಷರಾದ ಮುಮ್ತಾಜ್ ಮಾತನಾಡಿ, ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದ ಶಾಲಾ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ನಮ್ಮ ಗ್ರಾಮ ಹಾಗು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ ಇದು ಹೆಮ್ಮೆಯ ವಿಷಯ. ಇದೇ ರೀತಿ ಮುಂಬರುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯು ಪ್ರಥಮ ಸ್ಥಾನ ಪಡೆಯುವ ಮೂಲಕ ನಾಡಿಗೆ ಕೀರ್ತಿ ತರುವಂತಾಗಲಿ ಸನ್ಮಾನ ಕಾರ್ಯಕ್ರಮದಲ್ಲಿ ಶುಭ ಹಾರೈಸಿದರು. ಈ ವೇಳೆ ವಿದ್ಯಾರ್ಥಿನಿಯ ತಂದೆ ಮಾತನಾಡಿ, ಈ ದಿನ ನಮ್ಮ ಸಂಘದ ವತಿಯಿಂದ ಸನ್ಮಾನ ಮಾಡಿರುವುದು ಸಂತಸದ ವಿಷಯ. ಇದೇ ರೀತಿ ಸಂಘದಲ್ಲಿರುವ ಎಲ್ಲಾ ಸದಸ್ಯರ ಮಕ್ಕಳು ಸಹ ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ಮಾಡುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು. ಸ್ಪರ್ಧಾ ವಿಜೇತೆ ಮೈತ್ರಿ ಮಾತನಾಡಿ, ಕಳೆದೆರಡು ದಿನಗಳ ಹಿಂದೆ ಜಿಲ್ಲಾ ಮಟ್ಟದಲ್ಲಿ ನಡೆದ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಬಹಳ ಖುಷಿ ತಂದಿದೆ, ಇದಕ್ಕೆಲ್ಲಾ ಕಾರಣ ನಾನು ಓದುತ್ತಿರುವ ಅರೇಹಳ್ಳಿ ರೋಟರಿ ಶಾಲೆಯ ಶಿಕ್ಷಕ ವೃಂದದವರು ಹಾಗು ತರಬೇತುದಾರರ ಹೆಚ್ಚಿನ ಪ್ರೋತ್ಸಾಹ, ಅದೇ ರೀತಿ ನನ್ನ ತಂದೆ ತಾಯಿಯ ಹೆಚ್ಚಿನ ಪ್ರೋತ್ಸಾಹದೊಂದಿಗೆ ಗುರಿ ಮುಟ್ಟಲು ಪ್ರೇರೇಪಿಸಿದ್ದಾರೆ ಅಂಥಹ ಕಠಿಣ ಸಂದರ್ಭಗಳನ್ನು ನಾನಿಂದು ನೆನಪಿಸಿಕೊಳ್ಳುತ್ತೇನೆ ಎಂದರು.ಈ ವೇಳೆ ಕಟ್ಟಡ ಕಾರ್ಮಿಕ ಸಂಘದ ಖಜಾಂಚಿ ವಿಜಯ್, ಸಂಘಟನಾ ಕಾರ್ಯದರ್ಶಿ ವಿಜಯ್ ಅರೇಹಳ್ಳಿ, ರೇಣುಕಾಚಾರ್ಯ, ನಾಜಿಂ, ಲೀಲಾ, ಜ್ಯೋತಿ ಕೆ. ವಿ ಸೇರಿದಂತೆ ಇನ್ನಿತರರು ಇದ್ದರು.

Share this article