
ರಾಮನಗರ: ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಭಾಗವಾಗಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಬಿಡದಿಯ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ಸಮೀಕ್ಷೆಗೆ ಅಗತ್ಯವಿರುವ ದಾಖಲೆ ಮತ್ತು ಮಾಹಿತಿ ನೀಡಿದರು.
ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಕೇತಗಾನಹಳ್ಳಿಯ ನನ್ನ ತೋಟದ ಮನೆಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆಯಲ್ಲಿ (SIR) ಪ್ರಕ್ರಿಯೆಯಲ್ಲಿ ಕುಟುಂಬದೊಂದಿಗೆ ಪಾಲ್ಗೊಂಡು ಬಿಎಲ್‌ಓಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ ಮಾಹಿತಿ ನೀಡಲಾಯಿತು. ಈ ಪರಿಷ್ಕರಣೆ ಪಾರದರ್ಶಕವಾಗಿರಬೇಕು ಹಾಗೂ ನೈಜ ಮತದಾರರೆಲ್ಲರೂ ಮತದಾರರ ಪಟ್ಟಿಯಲ್ಲಿ ಉಳಿಯಲೇಬೇಕು ಎಂಬ ಆಶಯದೊಂದಿಗೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದೆ. ನಾಡಿನ ಪ್ರತಿಯೊಬ್ಬರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಿಯಮಾನುಸಾರ ತಪ್ಪದೇ ಪಾಲ್ಗೊಳ್ಳಬೇಕು ಎಂದರು.
ರಾಜ್ಯ ಸರ್ಕಾರದ ವಿರುದ್ಧ ಎಚ್ಡಿಕೆ ವಾಗ್ದಾಳಿ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದೆ. ಕೇಂದ್ರ ಚುನಾವಣಾ ಆಯೋಗದ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯ ಸರ್ಕಾರ ನೇರವಾಗಿ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಕುಮ್ಮಕ್ಕು ನೀಡುತ್ತಿದೆ. ಅನೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಎಸ್ಐಆರ್ ದುರ್ಬಳಕೆಯಲ್ಲಿ ಭಾಗಿಯಾಗಿದ್ದಾರೆ. ಈ ಕೂಡಲೇ ಕೇಂದ್ರ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಬೇಕು. ಪಶ್ಚಿಮ ಬಂಗಾಳದಲ್ಲಿ ಮಾಡಿದಂತೆಯೇ ರಾಜ್ಯದಲ್ಲಿಯೂ ಎಸ್ಐಆರ್ ಉಸ್ತುವಾರಿಗೆ ಹೊರ ರಾಜ್ಯದ ಅಧಿಕಾರಿಯನ್ನು ನೇಮಿಸಬೇಕು. ಈವರೆಗೂ ನಡೆಸಿರುವ ಸಮೀಕ್ಷೆಯನ್ನು ರದ್ದುಗೊಳಿಸಿ ಹೊಸದಾಗಿ ಸಮೀಕ್ಷೆ ನಡೆಸಬೇಕು. ಈ ಬಗ್ಗೆ ಕೇಂದ್ರ ಚುನಾವಣಾ ಆಯುಕ್ತರಿಗೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ದಾಖಲೆ ಸಮೇತ ದೂರು ನೀಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎ.ಮಂಜುನಾಥ್ ಹಾಜರಿದ್ದರು.
ಬಿಡದಿ ಟೌನ್ ಶಿಪ್ ಹೋರಾಟ ನಿಲ್ಲದು: