ಕನಕಪುರ: ಸದಸ್ಯರ ಸಹಕಾರ, ಆಡಳತ ಮಂಡಳಿ ಹಾಗೂ ಸಿಬ್ಬಂದಿಯ ಅವಿರತ ಶ್ರಮದ ಫಲವಾಗಿ ಸಂಸ್ಥೆ ಉತ್ತಮ ಲಾಭಗಳಿಸಲು ಸಾಧ್ಯವಾಗಿದೆ ಎಂದು ಶ್ರೀ ದೇಗುಲಮಠದ ಕಿರಿಯ ಶ್ರೀಗಳಾದ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು.
ಸಹಕಾರ ಸಂಘದ ಅಧ್ಯಕ್ಷ ಪರಮೇಶಯ್ಯ ಮಾತನಾಡಿ, ಸದಸ್ಯರ ನಂಬಿಕೆ, ಸಹಕಾರದಿಂದ ಒಂದು ಸಂಸ್ಥೆ ಆರ್ಥಿಕವಾಗಿ ಲಾಭ ಗಳಿಸಲು ಸಾಧ್ಯ. ಸಂಸ್ಥೆಯ ಆದಾಯ ಹೆಚ್ಚಿಸಲು ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವುದರ ಜೊತೆಗೆ ಯಶಸ್ವಿನಿ ಯೋಜನೆ ಸೇರಿ ಹಲವು ಯೋಜನೆಗಳನ್ನು ಸದಸ್ಯರ ಅನುಕೂಲಕ್ಕಾಗಿ ಜಾರಿಗೆ ತರಲಾಗಿದೆ. ಸದಸ್ಯರು ಇದರ ಉಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಸಂಸ್ಥೆ ಸಿಇಒ ಅವಿನಾಶ್ 2024-25ನೇ ಸಾಲಿನ ವಾರ್ಷಿಕ ವರದಿ ಮಂಡಿಸಿ ಸಂಸ್ಥೆ 6.30 ಲಕ್ಷ ಲಾಭ ಗಳಿಸಿರುವ ಬಗ್ಗೆ ಮಾಹಿತಿ ಹಾಗೂ 25/26ನೇ ಸಾಲಿನ ಬಜೆಟ್ ಮಂಡಿಸಿ ಸರ್ವ ಸದಸ್ಯರ ಸಭೆಯ ಅನುಮೋದನೆ ಪಡೆದುಕೊಂಡರು. ನಿತ್ಯನಿಧಿ ಠೇವಣಿ ಸಂಗ್ರಹಕಾರರು ಹಾಗೂ ಎಸ್ಸೆಸ್ಸೆಲ್ಸಿ/ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಗೌರವಿಸಲಾಯಿತು.ಈ ವೇಳೆ ಉಪಾಧ್ಯಕ್ಷ ಶ್ರೀನಿವಾಸ್, ನಿರ್ದೇಶಕರಾದ ಶಿವಮೂರ್ತಿ, ಜಗದೀಶ್ ಕುಮಾರ್, ಚನ್ನವೀರಯ್ಯ, ಮಹದೇವ್ ಪ್ರಸಾದ್, ಮಹದೇವ್ ಪ್ರಸಾದ್, ನಾಗೇಂದ್ರ ಸ್ವಾಮಿ, ಕಬ್ಬಾಳೇಗೌಡ, ಮಂಜುನಾಥ್, ನಾಗಮಣಿ, ಮಹದೇವಮ್ಮ ಹಾಗೂ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು.
ಕೆ ಕೆ ಪಿ ಸುದ್ದಿ 02:ಕನಕಪುರದ ಶ್ರೀ ನಿರ್ವಾಣೇಶ್ವರ ಹಿರಿಯ ವಿದ್ಯಾರ್ಥಿಗಳ ಮತ್ತು ನೌಕರರ ಸೌಹಾರ್ದ ಸಹಕಾರಿ ಸಂಘದ 19ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ನಡೆಯಿತು.