ರಾಜ್ಯದ ಅಭಿವೃದ್ಧಿ ಸಂಪೂರ್ಣ ಕುಂಠಿತ

KannadaprabhaNewsNetwork |  
Published : Dec 21, 2024, 01:18 AM IST
ಪೋಟೋ೨೦ಸಿಎಲ್‌ಕೆ೩ ಚಳ್ಳಕೆರೆ ನಗರದ ಪ್ರವಾಸಿಮಂದಿರದಲ್ಲಿ ಶ್ರವಣಬೆಳಗೋಳ ಶಾಸಕ ಸಿ.ಎನ್.ಬಾಲಕೃಷ್ಣ ಭೇಟಿ ನೀಡಿ ಪಕ್ಷದ ಮುಖಂಡರು, ಸ್ನೇಹಿತರೊಂದಿಗೆ ಚರ್ಚಿಸಿದರು. | Kannada Prabha

ಸಾರಾಂಶ

ಚಳ್ಳಕೆರೆ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದಿದ್ದು, ರಾಜ್ಯದ ಯಾವುದೇ ಭಾಗದಲ್ಲಿ ನಿರೀಕ್ಷಿತ ಪ್ರಗತಿಯಾಗಿಲ್ಲ. ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲವೆಂದು ಚಿಂತನೆ ಮಾಡುತ್ತಿದ್ದಾರೆ. ಆದರೆ, ಪತ್ರಿಕೆಗಳಲ್ಲಿ ಮಾತ್ರ ಸರ್ಕಾರ ಸಾಧನೆ ಮಾಡಿರುವುದಾಗಿ ಸುಳ್ಳುಪ್ರಚಾರ ಪಡೆಯುತ್ತಿದೆ ಎಂದು ಶ್ರವಣಬೆಳಗೋಳದ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಆರೋಪಿಸಿದರು.

ಚಳ್ಳಕೆರೆ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದಿದ್ದು, ರಾಜ್ಯದ ಯಾವುದೇ ಭಾಗದಲ್ಲಿ ನಿರೀಕ್ಷಿತ ಪ್ರಗತಿಯಾಗಿಲ್ಲ. ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲವೆಂದು ಚಿಂತನೆ ಮಾಡುತ್ತಿದ್ದಾರೆ. ಆದರೆ, ಪತ್ರಿಕೆಗಳಲ್ಲಿ ಮಾತ್ರ ಸರ್ಕಾರ ಸಾಧನೆ ಮಾಡಿರುವುದಾಗಿ ಸುಳ್ಳುಪ್ರಚಾರ ಪಡೆಯುತ್ತಿದೆ ಎಂದು ಶ್ರವಣಬೆಳಗೋಳದ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಆರೋಪಿಸಿದರು.

ಬೆಳಗಾವಿಯ ಅಧಿವೇಶನ ಮುಗಿಸಿಕೊಂಡು ತಮ್ಮ ಕ್ಷೇತ್ರಕ್ಕೆ ಹೋಗುವ ಸಂದರ್ಭದಲ್ಲಿ ಚಳ್ಳಕೆರೆ ನಗರದ ಪ್ರವಾಸಿಮಂದಿರಕ್ಕೆ ಆಗಮಿಸಿದ ಅವರನ್ನು ನಗರ ಜೆಡಿಎಸ್ ಮುಖಂಡರು ಹಾಗೂ ಸ್ನೇಹಿತರು ಭೇಟಿ ಮಾಡಿ ಚರ್ಚೆ ನಡೆಸಿದ ಬಳಿಕ ಪತ್ರಿಕೆಯೊಂದಿಗೆ ಪ್ರಸ್ತುತ ಸರ್ಕಾರದ ಸ್ಥಿತಿಯ ಬಗ್ಗೆ ಮಾತನಾಡಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆದರೂ, ತೃಪ್ತಿಕರವಾದ ಚರ್ಚೆ ನಡೆಯಲಿಲ್ಲ. ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟಕ್ಕೆ ಮುಂದಿನ ಚುನಾವಣೆಯಲ್ಲಿ ಉತ್ತಮ ಭವಿಷ್ಯವಿದೆ ಎಂದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಗೌರವಾಧ್ಯಕ್ಷ ಎಚ್.ಆನಂದಪ್ಪನವರಿಗೆ ಚಳ್ಳಕೆರೆ ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷವನ್ನು ಬಲಪಡಿಸಬೇಕು ಎಂದು ಹೇಳಿದರು.

ಪತ್ರಕರ್ತ ಬಿ.ವಿ.ಚಿದಾನಂದಮೂರ್ತಿ, ಬಷೀರ್‌ಹಯಾತ್, ಡಿ.ಮಂಜುನಾಥ ಇವರೊಂದಿಗೆ ನಾನು ಇಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದು, ಹಳೆ ದಿನಗಳು ಇನ್ನೂ ನೆನಪಿನಲ್ಲಿವೆ. ಆಗಾಗ ಚಳ್ಳಕೆರೆಗೆ ಭೇಟಿ ನೀಡಿ ಸ್ನೇಹಿತರೊಂದಿಗೆ ಕುಶಲೋಪನಡೆಸುವ ಪರಿಪಾಠ ಬೆಳೆಸಿಕೊಂಡಿದ್ದೇನೆ ಎಂದು ತಿಳಿಸಿದರು.

ನಗರಸಭಾ ಸದಸ್ಯರಾದ ಸಿ.ಶ್ರೀನಿವಾಸ್, ಸಿ.ಎಂ.ವಿಶುಕುಮಾರ್, ಮುಖಂಡರಾದ ಸುರೇಶ್, ಪಿ.ಎ.ತಮ್ಮಣ್ಣ, ಎಂ.ಬಾಲಸಿದ್ದೇಶ್ವರ, ಅಕ್ಷರವೆಂಕಟೇಶ್, ಎಂ.ಆರ್.ರವಿಪ್ರಸಾದ್, ಉದ್ಯಮಿ ಬಾಲಾಜಿ, ಚಿನ್ಮಯಸ್ವಾಮಿ, ಟಿ.ಬಿ.ಜಿತೇಂದ್ರ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ