ವಿಶೇಷಚೇತನರಿಗೆ ಅನುಕಂಪಕ್ಕಿಂತ ಪ್ರೋತ್ಸಾಹದ ಅಗತ್ಯ: ಲತಾ ನಾಯಕ

KannadaprabhaNewsNetwork |  
Published : Dec 25, 2025, 02:45 AM IST
14 ಮತ್ತು 17 ವಯೋಮಾನದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಲತಾ ನಾಯಕ ಉದ್ಘಾಟಿಸಿದರು. | Kannada Prabha

ಸಾರಾಂಶ

ವಿಶೇಷಚೇತನರಲ್ಲಿ ಹಿಂಜರಿಕೆಯ ಭಾವನೆಯನ್ನು ದೂರಗೊಳಿಸಿ ಅವರಲ್ಲಿ ಸ್ವಾಭಿಮಾನ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಕಾರ್ಯವನ್ನು ಪಾಲಕರು ಹಾಗೂ ಶಿಕ್ಷಕರು ಮಾಡಬೇಕಾಗಿದೆ.

ವಿಶೇಷ ಚೇತನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಅನೆ

ಕನ್ನಡಪ್ರಭ ವಾರ್ತೆ ಅಂಕೋಲಾ

ವಿಶೇಷಚೇತನರಲ್ಲಿ ಹಿಂಜರಿಕೆಯ ಭಾವನೆಯನ್ನು ದೂರಗೊಳಿಸಿ ಅವರಲ್ಲಿ ಸ್ವಾಭಿಮಾನ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಕಾರ್ಯವನ್ನು ಪಾಲಕರು ಹಾಗೂ ಶಿಕ್ಷಕರು ಮಾಡಬೇಕಾಗಿದೆ. ಅವರಿಗೆ ಅನುಕಂಪಕ್ಕಿಂತ ಪ್ರೋತ್ಸಾಹದ ಅಗತ್ಯವಿದೆ ಎಂದು ಉಕ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲತಾ ಎಂ. ನಾಯಕ ಹೇಳಿದರು.

ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಉಕ, ಶಾಲಾ ಶಿಕ್ಷಣ ಇಲಾಖೆ ಉತ್ತರ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಂಕೋಲಾ ಇವರ ಸಯುಕ್ತ ಆಶ್ರಯದಲ್ಲಿ 14 ಮತ್ತು 17ರ ವಯೋಮಾನದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಲಲಕ್ಷ್ಮಿ ಪಾಟೀಲ, ಡಿವೈಪಿಸಿ ಭಾಸ್ಕರ ಗಾಂವಕರ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಂಜುನಾಥ ಎಂ. ನಾಯಕ, ಕರ್ನಾಟಕ ರಾಜ್ಯ ಗ್ರೇಡ್ ಒನ್ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಗಿರೀಶ ನಾಯಕ, ಜಿಲ್ಲಾಧ್ಯಕ್ಷ ಪ್ರಕಾಶ ನಾಯ್ಕ, ಹೊನ್ನಾವರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಅರುಣ ಕುಮಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಆನಂದು ಗಾಂವಕರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಜಗದೀಶ ಜಿ. ನಾಯಕ ಹೊಸ್ಕೇರಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಶ ನಾಯಕ, ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿ ವೆಂಕಟೇಶ ಎನ್. ನಾಯಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಠೋಬ ನಾಯಕ ಸ್ವಾಗತಿಸಿದರು. ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರು, ಸಿ.ಆರ್.ಪಿ., ಬಿ.ಆರ್.ಪಿ.ಗಳು, ಜಿಲ್ಲಾ ಹಾಗೂ ತಾಲೂಕು ಐ.ಇ.ಆರ್.ಟಿ.ಗಳು, ಶಿಕ್ಷಕರು ಉಪಸ್ಥಿತರಿದ್ದರು. ರಾಜೇಶ ನಾಯಕ ಸೂರ್ವೆ ಕಾರ್ಯಕ್ರಮ ನಿರ್ವಹಿಸಿದರು. ಅಂಕೋಲಾ ನಂಬರ್ 2 ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಸಕ ಪೊನ್ನಣ್ಣರಿಗೆ ‘ಯುಕೊ’ ಅಭಿನಂದನೆ
ದೈವಜ್ಞ ದರ್ಶನ ಕಾರ್ಯಕ್ರಮ ಉದ್ಘಾಟನೆ