ಕನ್ನಡಪ್ರಭವಾರ್ತೆ, ಚಿತ್ರದುರ್ಗ
ಜ್ಯೋತಿ ರಥಯಾತ್ರೆ ಆಗಮನದ ಹಿನ್ನಲೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜ್ಯೋತಿ ರಥಯಾತ್ರೆಯನ್ನು ಗೌರವದಿಂದ ಬರ ಮಾಡಿಕೊಳ್ಳಬೇಕು. ಇದಕ್ಕೆ ಬೇಕಾದ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ 6 ತಾಲೂಕುಗಳಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆ ಸಂಚರಿಸಲಿದೆ. ಸಂಬಂಧಪಟ್ಟ ಆಯಾ ತಾಲೂಕಿನ ತಹಸೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಸಮನ್ವಯತೆಯೊಂದಿಗೆ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಸಂಭ್ರಮದ ಸ್ವಾಗತ ನೀಡಬೇಕು. ಸಂಚಾರಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾತನಾಡಿ, ಕರ್ನಾಟಕ ಸುವರ್ಣ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯು ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲಕ ಜು.9ರಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿಗೆ ಆಗಮಿಸಲಿದ್ದು, ರಥಯಾತ್ರೆಯನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಲಾಗುವುದು. ಜು.10ರಂದು ಚಿತ್ರದುರ್ಗ, ಜು.11ರಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ, ಜು.12ರಂದು ಚಳ್ಳಕೆರೆ, ಜು.13ರಂದು ಹಿರಿಯೂರು, ಜು.14ರಂದು ಹೊಸದುರ್ಗ ತಾಲೂಕಿನಲ್ಲಿ ರಥಯಾತ್ರೆ ಸಂಚರಿಸಿ ನಂತರ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಗೆ ತೆರಳಲಿದೆ ಎಂದು ಮಾಹಿತಿ ನೀಡಿದರು.
ರಥಯಾತ್ರೆಯು ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ಒಳಗೊಂಡು, ವೈಭವಯುತವಾಗಿರಲಿದೆ. ಸಂಚಾರದ ಸಂದರ್ಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು, ಸಾಹಿತಿಗಳು, ಜನಪ್ರತಿನಿಧಿಗಳು ಯಾತ್ರೆಗೆ ಅದ್ಧೂರಿ ಸ್ವಾಗತ ಕೋರುವಂತಾಗಬೇಕು. ಕನ್ನಡ ಧ್ವಜ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
-----
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ಜ್ಯೋತಿ ರಥಯಾತ್ರೆ ಬರಮಾಡಿಕೊಳ್ಳುವ ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.ಅದ್ಧೂರಿ ಸ್ವಾಗತಕ್ಕೆ ಜಿಲ್ಲಾಡಳಿತ ಸಜ್ಜು । 14ರವರೆಗೆ ಜಿಲ್ಲಾದ್ಯಂತ ಸಂಚಾರ
ಕನ್ನಡಪ್ರಭವಾರ್ತೆ, ಚಿತ್ರದುರ್ಗಕರ್ನಾಟಕ ಸಂಭ್ರಮ-50ರ ಅಂಗವಾಗಿ ರಾಜ್ಯಾದ್ಯಂತ ಸಂಚರಿಸಲಿರುವ ಕರ್ನಾಟಕ ಜ್ಯೋತಿ ರಥಯಾತ್ರೆ ಜು.9ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದು, ಜು.14 ರವರೆಗೆ ಜಿಲ್ಲಾದ್ಯಂತ ಸಂಚರಿಸಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ಜಿಲ್ಲೆಯ 6 ತಾಲೂಕುಗಳಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆ ಸಂಚರಿಸಲಿದೆ. ಸಂಬಂಧಪಟ್ಟ ಆಯಾ ತಾಲೂಕಿನ ತಹಸೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಸಮನ್ವಯತೆಯೊಂದಿಗೆ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಸಂಭ್ರಮದ ಸ್ವಾಗತ ನೀಡಬೇಕು. ಸಂಚಾರಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.
ಕರ್ನಾಟಕ ಜ್ಯೋತಿ ಯಾತ್ರೆ ಸಂದರ್ಭದಲ್ಲಿ ಎರಡು ಕಲಾ ತಂಡಗಳು ಮತ್ತು ಯಾತ್ರೆಗೆ ಸಂಬಂಧಿಸಿದಂತೆ ನಗರದಲ್ಲಿ, ತಾಲೂಕುವಾರು ರೂಟ್ ಮ್ಯಾಪ್ ಸಿದ್ಧಪಡಿಸಿ ವಿವಿಧ ಸ್ಥಳಗಳ ಮೂಲಕ ಜ್ಯೋತಿಯಾತ್ರೆ ಸಂಚರಿಸುವ ಪಟ್ಟಿಯನ್ನು ಪ್ರಚುರಪಡಿಸಿ ಸಂಬಂಧಿಸಿದ ಮಾಹಿತಿ ನೀಡಲಾಗುವುದು. ಜಿಲ್ಲೆಯ ಪ್ರತಿ ತಾಲೂಕಿನಲ್ಲಿಯೂ ಬೆಳಗ್ಗೆ 9 ಗಂಟೆಗೆ ಜ್ಯೋತಿ ರಥಯಾತ್ರೆಯು ಪ್ರಾರಂಭವಾಗಲಿದ್ದು, ಒಂದು ದಿನ ಸಂಪೂರ್ಣ ಆಯಾ ತಾಲೂಕಿನಲ್ಲಿಯೇ ಸಂಚರಿಸಲಿದೆ.
ರಥಯಾತ್ರೆಯು ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ಒಳಗೊಂಡು, ವೈಭವಯುತವಾಗಿರಲಿದೆ. ಸಂಚಾರದ ಸಂದರ್ಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು, ಸಾಹಿತಿಗಳು, ಜನಪ್ರತಿನಿಧಿಗಳು ಯಾತ್ರೆಗೆ ಅದ್ಧೂರಿ ಸ್ವಾಗತ ಕೋರುವಂತಾಗಬೇಕು. ಕನ್ನಡ ಧ್ವಜ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.ಈ ವೇಳೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಶಿಕ್ಷಣ ಇಲಾಖೆಯ ಚಿದಾನಂದಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.