ಸ್ವಚ್ಛತೆಗಾಗಿ ಕೈಲಿ ಪೊರಕೆ ಹಿಡಿದ ಜಿಲ್ಲಾ ನ್ಯಾಯಾಧೀಶ

KannadaprabhaNewsNetwork |  
Published : Sep 23, 2024, 01:26 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ | Kannada Prabha

ಸಾರಾಂಶ

ನ್ಯಾಯದಾನ ಮಾಡುವರ ಕೈಯಲ್ಲಿ ಕಸದ ಪೊರಕೆ ಹಾಗೂ ಬುಟ್ಟಿ ಹಿಡಿದು ಕಸ ತುಂಬುವುದರಲ್ಲಿ ಮಗ್ನರಾಗಿದ್ದ ನ್ಯಾಯಾಧೀಶರ ಕಂಡ ಎಲ್ಲಾ ಸಿಬ್ಬಂದಿಗೆ ವರ್ಗ, ವಕೀಲರು, ಪೌರಾಯುಕ್ತರು, ಪೌರಕಾರ್ಮಿಕರು ಅವರಿಂದ ಪ್ರೇರಣೆಗೊಂಡು ಕಸವ ಗುಡಿಸಿ ಎಲ್ಲರೂ ಟ್ರಾಕ್ಟರ್ ಗೆ ಸುರಿಯುತ್ತಿದ್ದರು. ಇದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಕಂಡು ಬಂದ ದೃಶ್ಯವಿದು.

ಕನ್ನಡಪ್ರಭವಾರ್ತೆ ಚಿತ್ರದುರ್ಗನ್ಯಾಯದಾನ ಮಾಡುವರ ಕೈಯಲ್ಲಿ ಕಸದ ಪೊರಕೆ ಹಾಗೂ ಬುಟ್ಟಿ ಹಿಡಿದು ಕಸ ತುಂಬುವುದರಲ್ಲಿ ಮಗ್ನರಾಗಿದ್ದ ನ್ಯಾಯಾಧೀಶರ ಕಂಡ ಎಲ್ಲಾ ಸಿಬ್ಬಂದಿಗೆ ವರ್ಗ, ವಕೀಲರು, ಪೌರಾಯುಕ್ತರು, ಪೌರಕಾರ್ಮಿಕರು ಅವರಿಂದ ಪ್ರೇರಣೆಗೊಂಡು ಕಸವ ಗುಡಿಸಿ ಎಲ್ಲರೂ ಟ್ರಾಕ್ಟರ್ ಗೆ ಸುರಿಯುತ್ತಿದ್ದರು. ಇದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಕಂಡು ಬಂದ ದೃಶ್ಯವಿದು.

ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ನ್ಯಾಯಾಧೀಶರು, ಸಿಬ್ಬಂದಿಗಳು, ವಕೀಲರು ಹಾಗೂ ನಗರಸಭೆಯ ಪೌರಾಯುಕ್ತರು, ಪೌರಕಾರ್ಮಿಕರು ಪೊರಕೆ ಹಿಡಿದು ಸ್ವಚ್ಛತಾ ಕಾರ್ಯಕ್ರಮ ನೆರವೇರಿಸಿದರು.ಸ್ವಚ್ಚತಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್, ಪರಿಸರ ಸ್ವಚ್ಛವಿದ್ದಾಗ ಮಾತ್ರ ನಮ್ಮ ಸುತ್ತಮುತ್ತಲಿನ ಸಮಾಜ ಸುಂದರವಾಗಿರುತ್ತದೆ. ಜತೆಗೆ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ. ಸ್ವಚ್ಛತೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದರು.

ಹಸಿ ಕಸ, ಒಣ ಕಸ ಪ್ರತ್ಯೇಕಿಸಿ ನೀಡುವಂತೆ ನಗರಸಭೆಯವರು ಸಾಕಷ್ಟು ಬಾರಿ ತಿಳಿ ಹೇಳಿದರೂ, ಸಾರ್ವಜನಿಕರಿಗೂ ನಿರ್ಲಕ್ಷ ವಹಿಸುತ್ತಾರೆ. ಹಸಿ ಕಸ ಮತ್ತು ಒಣ ಕಸ ಕೂಡಿಸಿ ಕೊಡುವುದರಿಂದ ಅವುಗಳನ್ನು ಪ್ರತ್ಯೇಕಿಸುವುದು, ವಿಲೇವಾರಿ ಮಾಡುವುದು ಕಷ್ಟವಾಗಲಿದೆ. ಹಾಗಾಗಿ ಸಾರ್ವಜನಿಕರು ಕಸವನ್ನು ಪ್ರತ್ಯೇಕಿಸಿ ಕಸದ ವಾಹನಗಳಿಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.ಪರಿಸರ ಸ್ವಚ್ಛ ಮಾಡುವುದರ ಜತೆಗೆ ನಮ್ಮ ಮನಸ್ಸನ್ನು ಕೂಡ ಸ್ವಚ್ಛಗೊಳಿಸಬೇಕು. ಪ್ರತಿಯೊಬ್ಬರು ಸ್ವಚ್ಛತೆ ಹಾಗೂ ಪರಿಸರ ಕಾಳಜಿ ವಹಿಸಬೇಕು. ಆ ಮೂಲಕ ಕಸಮುಕ್ತ ಸುಂದರ ಚಿತ್ರದುರ್ಗ ನಗರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ. ರೇಣುಕಾ ಮಾತನಾಡಿ, ಜನರಲ್ಲಿ ನೈರ್ಮಲ್ಯ, ಶುಚಿತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನ ಪ್ರಾರಂಭವಾಗಿದ್ದು, ಇದು ಅಕ್ಟೋಬರ್ 2 ರವರೆಗೆ ನಡೆಯಲಿದೆ. 15 ದಿನಗಳ ಕಾಲ ನಡೆಯುವ ಆಂದೋಲನದಲ್ಲಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಒಟ್ಟು 140ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿದರು.

ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಪ್ರತಿನಿತ್ಯವೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ, ಸ್ವಚ್ಛತೆ ಕುರಿತು ಅರಿವು ಮೂಡಿಸಲಾಗುತ್ತಿದೆ. ಈಗಾಗಲೇ ಉದ್ಯಾನವನಗಳ ಸ್ವಚ್ಛತೆ, ಕಲ್ಯಾಣಿಗಳ ಸ್ವಚ್ಛತೆ ಮಾಡಲಾಗುತ್ತಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಧೀಶ ರೋಣ ವಾಸುದೇವ್ ಅವರು ಸ್ವಚ್ಛತೆಯ ಪ್ರತಿಜ್ಞಾವಿಧಿ ಬೋಧಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯ್, ವಕೀಲರ ಸಂಘದ ಅಧ್ಯಕ್ಷ ವೈ. ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ನ್ಯಾಯಾಂಗ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!