ಜಿಲ್ಲೆಯ ಉಳಿದ ಐದು ತಾಲೂಕುಗಳೂ ಬರಪೀಡಿತ ಪಟ್ಟಿಗೆ

KannadaprabhaNewsNetwork |  
Published : Sep 23, 2026, 03:00 AM IST
(ಫೋಟೊಬಿಕೆಟಿ9, ಜಿಲ್ಲಾಧಿಕಾರಿಗಳಾದ ಸಂಗಪ್ಪ) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆಜಿಲ್ಲೆಯ ಉಳಿದ ಐದು ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲಾ 10 ತಾಲೂಕುಗಳೂ ಬರಪೀಡಿತ ತಾಲೂಕುಗಳಾಗಿ ಘೋಷಣೆಯಾಗಿವೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯ ಉಳಿದ ಐದು ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲಾ 10 ತಾಲೂಕುಗಳೂ ಬರಪೀಡಿತ ತಾಲೂಕುಗಳಾಗಿ ಘೋಷಣೆಯಾಗಿವೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬೆಳೆ ಪರಿಸ್ಥಿತಿಯನ್ನು ಪರಿಗಣಿಸಿ ಸರ್ಕಾರ ಬರಪೀಡಿತ ತಾಲೂಕುಗಳ ಘೋಷಣೆ ಮಾಡಿದೆ. ಇದೀಗ ಬಾದಾಮಿ, ಹುನಗುಂದ, ಮುಧೋಳ, ರಬಕವಿ-ಬನಹಟ್ಟಿ ಹಾಗೂ ತೇರದಾಳ ತಾಲೂಕುಗಳನ್ನು ಸಹ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ಈ ಹಿಂದೆ ಜಿಲ್ಲೆಯ ಬಾಗಲಕೋಟೆ, ಬೀಳಗಿ, ಜಮಖಂಡಿ, ಗುಳೇದಗುಡ್ಡ ಹಾಗೂ ಇಳಕಲ್ಲ ತಾಲೂಕುಗಳನ್ನು ಮಾತ್ರ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿತ್ತು. ಇದೀಗ ಉಳಿದ ಐದು ತಾಲೂಕುಗಳನ್ನೂ ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಿರುವುದರಿಂದ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರದ ನೆರವು ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅವಕಾಶ ದೊರೆತಂತಾಗಿದೆ.

ಬರಪೀಡಿತ ತಾಲೂಕುಗಳ ಘೋಷಣೆಯಿಂದ ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರದ ನಿಯಮಾನುಸಾರ ವಿವಿಧ ಪರಿಹಾರ ಹಾಗೂ ನೆರವು ಕ್ರಮಗಳು ದೊರೆಯುವ ನಿರೀಕ್ಷೆಯಿದೆ. ತಾಲೂಕುವಾರು ಬೆಳೆ ಪರಿಸ್ಥಿತಿ, ಮಳೆ ಪ್ರಮಾಣ ಹಾಗೂ ಇತರೆ ಮಾನದಂಡಗಳನ್ನು ಆಧರಿಸಿ ಮುಂದಿನ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ 10 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಗಳು ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವುದು, ರೈತರಿಗೆ ಅಗತ್ಯ ನೆರವು ಒದಗಿಸುವುದು ಹಾಗೂ ಸರ್ಕಾರದ ಪರಿಹಾರ ಯೋಜನೆಗಳ ಸದುಪಯೋಗವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯಕ್ಕೆ ಮುಂದಾಗಬೇಕಿದೆ

-ಸಂಗಪ್ಪ, ಜಿಲ್ಲಾಧಿಕಾರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತನ್ಯ ಮಹಿಳಾ ಬ್ಯಾಂಕ್‌; ಶೇ.6ರಷ್ಟು ಲಾಭಾಂಶ ವಿತರಣೆ
ಬರ ಘೋಷಣೆಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ