ಬ್ರೇಕ್ ಫೇಲ್ ಆದ ಬಸ್‌ ನಿಯಂತ್ರಿಸಿ ಪ್ರಯಾಣಿಕರ ಕಾಪಾಡಿದ ಚಾಲಕ

KannadaprabhaNewsNetwork |  
Published : Dec 13, 2024, 12:47 AM IST
ಪ್ರಯಾಣಿಕರ ಜೀವ ರಕ್ಷಣೆ ಮಾಡಿದ ಬಸ್‌ ಚಾಲಕ ಸಿದ್ದೀಕ್‌ ಎರ್ಮಾಳ್‌. | Kannada Prabha

ಸಾರಾಂಶ

ಬಸ್ಸು ನಿಂತ ಬಳಿಕ ತಮ್ಮ ಜೀವ ರಕ್ಷಣೆ ಮಾಡಿದ ಚಾಲಕ ಸಿದ್ದಿಕ್ ಅವರ ಸಮಯಪ್ರಜ್ಞೆ ಹಾಗೂ ಕಾರ್ಯಕ್ಷಮತೆಗೆ ಬಸ್ಸಿನ ಪ್ರಯಾಣಿಕರು ಕೃತಜ್ಞತೆ ವ್ಯಕ್ತಪಡಿಸಿದರು

ಕನ್ನಡಪ್ರಭ ವಾರ್ತೆ ಮಂಗಳೂರು

ಬ್ರೇಕ್‌ ಫೇಲ್‌ ಆದ ಬಸ್ಸನ್ನು ಚಾಲಕ ತನ್ನ ಚಾಕಚಕ್ಯತೆಯಿಂದ ನಿಯಂತ್ರಣಕ್ಕೆ ತಂದು ಪ್ರಯಾಣಿಕರ ಜೀವ ರಕ್ಷಣೆ ಮಾಡಿದ ಘಟನೆ ಗುರುವಾರ ಬೆಳಗ್ಗೆ ನಗರದ ಬಳ್ಳಾಲ್‌ಬಾಗ್‌ನಲ್ಲಿ ನಡೆದಿದೆ. ಚಾಲಕ ಸಿದ್ದಿಕ್‌ ಎರ್ಮಾಳ್‌ ಅವರ ಸಮಯಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.ಉಡುಪಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಶಾಲ್ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ಸು ಬೆಳಗ್ಗೆ 8 ಗಂಟೆ ವೇಳೆಗೆ ನಗರದ ಬಳ್ಳಾಲ್‌ಬಾಗ್‌ಗೆ ಬರುತ್ತಿದ್ದಂತೆ ಹಠಾತ್ತನೆ ಬ್ರೇಕ್‌ ಫೇಲ್‌ ಆಗಿದೆ. ಬೆಳಗ್ಗಿನ ಹೊತ್ತಾಗಿದ್ದರಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲೇ ಇದ್ದರು.

ಬ್ರೇಕ್‌ ಫೇಲ್‌ ಆದ ತಕ್ಷಣ ಚಾಲಕ ಸಿದ್ದಿಕ್‌ ಎರ್ಮಾಳ್‌ ತಡ ಮಾಡದೆ ಬಸ್ಸನ್ನು ಫುಟ್ಪಾತ್‌ ಮೇಲೆ ಏರಿಸಿ, ಗೇರ್‌ಗಳ ಮೂಲಕ ಬಸ್ಸನ್ನು ಹತೋಟಿಗೆ ತಂದು ಯಾವುದೇ ಸಣ್ಣ ಗಾಯವೂ ಆಗದಂತೆ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಸ್ವಲ್ಪ ವಿಳಂಬವಾಗಿದ್ದರೂ ದೊಡ್ಡ ಮಟ್ಟದ ಅಪಘಾತ, ಸಾವು- ನೋವಿಗೆ ಕಾರಣವಾಗುವ ಸಂಭವವಿತ್ತು.

ಬಸ್ಸು ನಿಂತ ಬಳಿಕ ತಮ್ಮ ಜೀವ ರಕ್ಷಣೆ ಮಾಡಿದ ಚಾಲಕ ಸಿದ್ದಿಕ್ ಅವರ ಸಮಯಪ್ರಜ್ಞೆ ಹಾಗೂ ಕಾರ್ಯಕ್ಷಮತೆಗೆ ಬಸ್ಸಿನ ಪ್ರಯಾಣಿಕರು ಕೃತಜ್ಞತೆ ವ್ಯಕ್ತಪಡಿಸಿದರು. ಮಾತ್ರವಲ್ಲದೆ, ಪ್ರಯಾಣಿಕರನೇಕರು ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಿ ಶ್ಲಾಘಿಸಿದ್ದು, ಸಾರ್ವಜನಿಕರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ