ಬೆಳಗ್ಗೆಯೇ ಮದ್ಯ ಸೇವಿಸಿ ಶಾಲಾ ವಾಹನ ಓಡಿಸುತ್ತಿದ್ದ ಚಾಲಕರು!

KannadaprabhaNewsNetwork |  
Published : Jul 10, 2024, 12:41 AM IST
Drunk and drive | Kannada Prabha

ಸಾರಾಂಶ

ನಗರದಲ್ಲಿ ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುವ ಚಾಲಕರ ವಿರುದ್ಧ ಮಂಗಳವಾರ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದ ನಗರ ಸಂಚಾರ ಪೊಲೀಸರು 23 ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದಲ್ಲಿ ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುವ ಚಾಲಕರ ವಿರುದ್ಧ ಮಂಗಳವಾರ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದ ನಗರ ಸಂಚಾರ ಪೊಲೀಸರು 23 ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಗರದ ಸಂಚಾರ ಪೊಲೀಸರು ತಮ್ಮ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 7 ಗಂಟೆಯಿಂದ 9.30ರ ವರೆಗೆ ಈ ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 3,016 ಶಾಲಾ ವಾಹನಗಳ ಚಾಲಕರ ತಪಾಸಣೆ ಮಾಡಿದ್ದಾರೆ. ಈ ಪೈಕಿ ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ 23 ಚಾಲಕರು ಸಿಕ್ಕಿಬಿದ್ದಿದ್ದಾರೆ. ಇವರ ವಿರುದ್ಧ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಚಾಲಕರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಶಿಫಾರಸು ಮಾಡಿದ್ದಾರೆ.

ಈ ವಿಶೇಷ ಕಾರ್ಯಾಚರಣೆ ವೇಳೆ ಅರ್ಹತಾ ಪ್ರಮಾಣ ಪತ್ರ ಇಲ್ಲದ 11 ಶಾಲಾ ವಾಹನಗಳು ಪತ್ತೆಯಾಗಿವೆ. ಈ ವಾಹನಗಳನ್ನು ಜಪ್ತಿ ಮಾಡಿದ್ದು, ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಡ್ರಂಕ್‌ ಆ್ಯಂಡ್ ಡ್ರೈವ್‌ ವಿರುದ್ಧ ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್‌ಗೆ ಸರ್ಕಾರದಿಂದ ಸಿಕ್ತು ಬಂಪರ್ ಗಿಫ್ಟ್
ಕಾಂಗ್ರೆಸ್‌ನಿಂದ ಗೆದ್ದಿದ್ದ ಸುಬ್ಬಾರೆಡ್ಡಿ ಶಾಸಕತ್ವಕ್ಕೆ ‘ಸುಪ್ರೀಂ’ ರಕ್ಷಣೆ