ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಸಹಾಯಕ ನಿರ್ದೇಶಕರ ಕಚೇರಿಯ ವಿಭಾಗೀಯ ಗುಣ ನಿಯಂತ್ರಣ ತರಬೇತಿ ಕೇಂದ್ರದಲ್ಲಿ ಜರುಗಿದ ವಿಶ್ವ ಭೂದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾಲಿನ್ಯದಿಂದ ಪರಿಸರ ನಾಶವಾಗಿ ಭೂಮಿಯನ್ನು ವಿನಾಶದ ಅಂಚಿನತ್ತ ಕೊಂಡೊಯುತ್ತದೆ. ಅದನ್ನು ನಾವು ಕಾಪಾಡಬೇಕು ಎಂದು ಹೇಳಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಪರಿಸರ ಅಧಿಕಾರಿ ವಿವೇಕ ಗುನಗ ಮಾತನಾಡಿ, ಮಾನವ ಅಗತ್ಯತೆಯ ಮಿತಿಯನ್ನು ಕಂಡುಕೊಂಡಾಗ ಪ್ರಕೃತಿ ಸಂರಕ್ಷಣೆ ಮಾಡಲು ಸಾಧ್ಯ ಎಂದರು.ವಕೀಲರ ಸಂಘದ ಅಧ್ಯಕ್ಷ ಡಿ.ಜಿ.ಬಿರಾದಾರ ಮಾತನಾಡಿದರು. ರಾಷ್ಟ್ರೀಯ ಜಲ ವಿಜ್ಞಾನ ಸಂಸ್ಥೆಯ ರೂರ್ಕೆಲಾ ಬೆಳಗಾವಿ ವಿಭಾಗದ ನಿವೃತ್ತ ವಿಜ್ಞಾನಿಗಳು ಉಪನ್ಯಾಸ ನೀಡಿದರು. ಜಿಲ್ಲಾ ಅಂತರ್ಜಲ ನಿರ್ದೇಶನಾಲಯ ಕಚೇರಿಯ ಹಿರಿಯ ಭೂ ವಿಜ್ಞಾನಿಗಳಾದ ಮಹೇಶ ಬಿರಾಜನವರ ಹಾಗೂ ಟಿ.ಚಂದ್ರಶೇಖರ ಉಪಸ್ಥಿತರಿದ್ದರು