ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ

KannadaprabhaNewsNetwork |  
Published : Oct 24, 2025, 01:00 AM ISTUpdated : Oct 24, 2025, 02:47 PM IST
Tejasvi surya

ಸಾರಾಂಶ

ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ. ಇನ್ನು ಉಳಿದ ಎರಡೂವರೆ ವರ್ಷದ ನಂತರ ರಾಜ್ಯಕ್ಕೆ ಗ್ರಹಣ ಮುಕ್ತಿಯಾಗುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ತೀಕ್ಷ್ಣವಾಗಿ ಹೇಳಿದ್ದಾರೆ.

 ಬೆಂಗಳೂರು :  ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ. ಇನ್ನು ಉಳಿದ ಎರಡೂವರೆ ವರ್ಷದ ನಂತರ ರಾಜ್ಯಕ್ಕೆ ಗ್ರಹಣ ಮುಕ್ತಿಯಾಗುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ತೀಕ್ಷ್ಣವಾಗಿ ಹೇಳಿದ್ದಾರೆ.

ಗುರುವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ಅವರೇ, ಕರ್ನಾಟಕಕ್ಕೆ ಹಿಡಿದಿರುವ ಗ್ರಹಣ ನಿಮ್ಮ ಆಡಳಿತ. ನೀವು ಅಧಿಕಾರಕ್ಕೆ ಬಂದು ಸುಮಾರು ಎರಡೂವರೆ ವರ್ಷವಾಗಿದೆ. ಬೆಂಗಳೂರಿನ ರಸ್ತೆ ಗುಂಡಿಗಳಿಂದ ಜನ ನರಕಯಾತನೆ ಅನುಭವಿಸುತ್ತಿದ್ದಾರೆ. ನಿಮ್ಮ ಆಡಳಿತ ಎಷ್ಟು ಚೆನ್ನಾಗಿದೆ ಎಂಬುದಕ್ಕೆ ಬೆಂಗಳೂರಿನ ರಸ್ತೆ ಗುಂಡಿಗಳೇ ಸಾಕ್ಷಿ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಅವರು ಹಿರಿಯರು ಹಾಗೂ ಲೋಕಾನುಭವ ಹೊಂದಿರುವವರು. ಅಮಾವಾಸ್ಯೆಗೂ ಮತ್ತು ಹುಣ್ಣಿಮೆಗೂ ಅವರಿಗೆ ವ್ಯತ್ಯಾಸ ಗೊತ್ತಿಲ್ಲ. ಅಮಾವಾಸ್ಯೆ ದಿನ ಸೂರ್ಯ ಇರುತ್ತಾನೆ; ಹುಣ್ಣಿಮೆ ದಿನವೂ ಸೂರ್ಯ ಇರುತ್ತಾನೆ. ವರ್ಷದ 365 ದಿನವೂ ಪ್ರಕಾಶಮಾನವಾಗಿರುವುದು ಸೂರ್ಯನೇ. ಅಮಾವಾಸ್ಯೆ ದಿನ ಇಲ್ಲದಿರುವವನು ಚಂದ್ರ; ಸೂರ್ಯನಲ್ಲ. ಚಂದ್ರನನ್ನು ನೋಡಿ ಪೂಜೆ ಮಾಡುವ ಜನರೊಂದಿಗೆ ಅವರು ಇದ್ದು ಇದ್ದು, ಅಮಾವಾಸ್ಯೆ ಮತ್ತು ಹುಣ್ಣಿಮೆಗೆ ಸೂರ್ಯ ಇರುವುದಿಲ್ಲ ಎಂಬ ಗೊಂದಲದಲ್ಲಿ ಅವರು ಇದ್ದಾರೆ ಎಂದು ಟೀಕಿಸಿದರು.

ಸೂರ್ಯ ಮತ್ತು ಚಂದ್ರರನ್ನು ಪೂಜಿಸುವ ವ್ಯತ್ಯಾಸ ಹಾಗೂ ಅಮವಾಸ್ಯೆ ಹಾಗೂ ಹುಣ್ಣಿಮೆಗೂ ವ್ಯತ್ಯಾಸ ತಿಳಿದುಕೊಂಡು ಮುಂದೆ ಈ ರೀತಿ ಹೇಳಿಕೆಗಳನ್ನು ಕೊಡಿ. ಸೂರ್ಯ ಹುಣ್ಣಿಮೆ ದಿನ ಎಷ್ಟು ಪ್ರಕಾಶಮಾನವಾಗಿ ಇರುತ್ತಾನೋ ಅಷ್ಟೇ ಪ್ರಕಾಶಮಾನವಾಗಿ ಅಮಾವಾಸ್ಯೆ ದಿನವೂ ಇರುತ್ತಾನೆ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಿ ಎಂದು ಮನವಿ ಮಾಡಿದರು.

ಸಿದ್ದರಾಮಯ್ಯ ಅವರ ಬಗ್ಗೆ ನಾನೂ ಟೀಕಿಸಬಹುದು. ಆದರೆ ನನ್ನನ್ನು 24 ಲಕ್ಷ ಜನ ಸಂಸದನಾಗಿ ಆಯ್ಕೆ ಮಾಡಿದ್ದು, ಸಾಂವಿಧಾನಿಕ ಹುದ್ದೆಯಲ್ಲಿರುವಾಗ ಆ ರೀತಿಯ ಮಾತು ನನಗೆ ಶೋಭೆ ತರುವುದಿಲ್ಲ ಹಾಗೂ ನನ್ನ ಮತ್ತು ಪಕ್ಷದ ಸಂಸ್ಕಾರ ಅಲ್ಲ ಎಂದು ತಿಳಿಸಿದರು.

ಕಳೆದ ಒಂದು ವಾರದಲ್ಲಿ ಬಸವನಗುಡಿ, ಮಲ್ಲೇಶ್ವರ, ಗಂಗೊಂಡನಹಳ್ಳಿಯಲ್ಲಿ 3 ಜನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮತ್ತು ಕೊಲೆ ಆಗಿದೆ. ಅವರದ್ದೇ ಕ್ಷೇತ್ರದ ಮೈಸೂರಿನಲ್ಲಿ 9 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆಗಿದೆ. ನಿಮ್ಮ ಗೃಹ ಸಚಿವರು ದೀಪಾವಳಿಯ ಬೆಟ್ಟಿಂಗ್‌ನಲ್ಲಿ ಕಾರ್ಯನಿರತರಾಗಿದ್ದಾರೆ. ಇದು ನಿಮ್ಮ ಆಡಳಿತದ ವೈಖರಿ ಎಂದು ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದರು.

PREV
Read more Articles on

Recommended Stories

ತಿಮರೋಡಿ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ
ಒತ್ತಡ ಹೇರಿ ಶಾಸಕರಿಂದ ರಸ್ತೆ ಅಗಲೀಕರಣ