ಬೆಳೆಗಾರರಿಗೆ ಪರಿಹಾರ ಕೊಡಿಸುವ ಪ್ರಯತ್ನ ಮಾಡಿರುವುದು ಶ್ಲಾಘನೀಯ

KannadaprabhaNewsNetwork |  
Published : Mar 17, 2025, 12:34 AM IST
೧೬ಬಿಹೆಚ್‌ಆರ್ ೨: ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ನಡೆದ ಕೃಷಿ ಸಮ್ಮೇಳನ ಯಶಸ್ವಿಯಾದ ಹಿನ್ನೆಲೆಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿ ಪದಾಧಿಕಾರಿಗಳು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳಿಗೆ ಗೌರವ ಸಲ್ಲಿಸಿದರು. | Kannada Prabha

ಸಾರಾಂಶ

ರಂಭಾಪುರಿ ಪೀಠದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಎನ್.ಆರ್.ಪುರ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಅರ್ಥಪೂರ್ಣ ಕೃಷಿ ಸಮ್ಮೇಳನ ನಡೆದಿರುವುದು ಶ್ಲಾಘನೀಯವಾಗಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.

ಬಾಳೆಹೊನ್ನೂರು: ರಂಭಾಪುರಿ ಪೀಠದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಎನ್.ಆರ್.ಪುರ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಅರ್ಥಪೂರ್ಣ ಕೃಷಿ ಸಮ್ಮೇಳನ ನಡೆದಿರುವುದು ಶ್ಲಾಘನೀಯವಾಗಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.ರಂಭಾಪುರಿ ಪೀಠದಲ್ಲಿ ಇತ್ತೀಚೆಗೆ ನಡೆದ ಕೃಷಿ ಸಮ್ಮೇಳನ ಯಶಸ್ವಿಯಾದ ಹಿನ್ನೆಲೆಯಲ್ಲಿ ಕೃಷಿ ಸಮ್ಮೇಳನ ಸಮಿತಿ ಸದಸ್ಯರು ಶ್ರೀಪೀಠಕ್ಕೆ ಭೇಟಿ ನೀಡಿದ ವೇಳೆ ಆಶೀರ್ವಚನ ನೀಡಿದರು.ಎನ್.ಆರ್.ಪುರ ತಾಲೂಕು ಪತ್ರಕರ್ತರ ಸಂಘ ಇದೇ ಮೊದಲ ಬಾರಿಗೆ ಒಂದು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಪತ್ರಕರ್ತರು ಕೇವಲ ಸಮಾಜದ ಅಂಕುಡೊಂಕುಗಳನ್ನು ತಿದ್ದುವುದು ಮಾತ್ರವಲ್ಲದೇ ನಾಡಿಗೆ ಅನ್ನ ನೀಡುವ ರೈತರು, ದೇಶದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡುವ ಬೆಳೆಗಾರರನ್ನು ಒಂದೆಡೆ ಸೇರಿಸಿ ಅವರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ಪ್ರಯತ್ನ ಮಾಡಿರುವುದು ಶ್ಲಾಘನೀಯವಾಗಿದೆ.ರಂಭಾಪುರಿ ಪೀಠ ಹಾಗೂ ತಾಲೂಕು ಪತ್ರಕರ್ತರ ಸಂಘದ ಇತಿಹಾಸದಲ್ಲಿ ಈ ಕಾರ್ಯಕ್ರಮವು ಸುವರ್ಣಾಕ್ಷಾರಗಳಲ್ಲಿ ಬರೆದಿಡುವ ಕಾರ್ಯಕ್ರಮವಾಗಿದೆ. ಕೃಷಿ ಸಮ್ಮೇಳನದಲ್ಲಿ ಕಾಫಿ, ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚಿಂತನ-ಮಂಥನ ನಡೆಯುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಪತ್ರಕರ್ತರ ಸಂಘದ ಪದಾಧಿಕಾರಿಗಳೊಂದಿಗೆ ವಿವಿಧ ಸಂಘ ಸಂಸ್ಥೆಗಳು, ಕಾಫಿ ಮಂಡಳಿ, ವಿವಿಧ ಇಲಾಖೆಯ ಅಧಿಕಾರಿಗಳು ಕೈ ಜೋಡಿಸಿರುವುದು ಕಾರ್ಯಕ್ರಮ ಯಶಸ್ವಿಯಾಗಲು ಕಾರಣವಾಗಿದೆ ಎಂದರು.ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಚಿನ್‌ಕುಮಾರ್, ಕಾರ್ಯದರ್ಶಿ ಬಿ.ಎಸ್.ನಾಗರಾಜಭಟ್, ಪೂರ್ವಾಧ್ಯಕ್ಷ ಸತೀಶ್ ಜೈನ್, ಓ.ಡಿ.ಸ್ಟೀಫನ್, ಸುಧಾಕರ್, ಚೈತನ್ಯ ವೆಂಕಿ, ಸತೀಶ್ ಅರಳೀಕೊಪ್ಪ, ಸೋಮೇಶ್‌ಗೌಡ, ವಿ.ಅಶೋಕ, ಶೇಖರ್ ಇಟ್ಟಿಗೆ, ಅವನಿ ತೇಜಸ್ವಿನಿ ಹಾಜರಿದ್ದರು.೧೬ಬಿಹೆಚ್‌ಆರ್ ೨: ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ನಡೆದ ಕೃಷಿ ಸಮ್ಮೇಳನ ಯಶಸ್ವಿಯಾದ ಹಿನ್ನೆಲೆಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿ ಪದಾಧಿಕಾರಿಗಳು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳಿಗೆ ಗೌರವ ಸಲ್ಲಿಸಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ