ಅಂಧಾನುಕರಣೆ ತೊಡೆಯಲು ಗುರುಗಳ ಶ್ರಮ ಅಪಾರ

KannadaprabhaNewsNetwork |  
Published : Aug 29, 2026, 01:15 AM IST
ಫೋ :೨೮ಕೆಪಿಸೊರಬ-೦೧ : ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಈಡಿಗ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಯಿತು. | Kannada Prabha

ಸಾರಾಂಶ

The efforts of the Gurus to eradicate the evil eye are immense.

-ಹಿಂದುಳಿದವರಿಗೆ ದಾರಿದೀಪ

-ಗಣಪತಿ ಹುಲ್ತಿಕೊಪ್ಪ ಅಭಿಮತ । ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಸೊರಬ

ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶದಡಿ ಸಮಾಜದಲ್ಲಿನ ಅಂಧಾನುಕರಣೆ ದೂರ ಮಾಡುವಲ್ಲಿ ನಾರಾಯಣಗುರುಗಳ ಶ್ರಮ ಅಪಾರ ಎಂದು ಈಡಿಗ ಸಮಾಜದ ತಾಲೂಕು ಅಧ್ಯಕ್ಷ ಎಚ್. ಗಣಪತಿ ಹುಲ್ತಿಕೊಪ್ಪ ಹೇಳಿದರು.

ಹೊಸಪೇಟೆ ಬಡಾವಣೆಯ ಬ್ರಹ್ಮಶ್ರೀ ನಾರಾಯಣ ವೃತ್ತದಲ್ಲಿ ಶ್ರೀನಾರಾಯಣ ಗುರುಗಳ ಧರ್ಮ ಪರಿಪಾಲನಾ ಸಂಘ, ನಾರಾಯಣಗುರು ಸೇವಾ ಸಮಿತಿ, ಎಸ್‌ಎನ್‌ಜಿವಿ ನೇತೃತ್ವದಲ್ಲಿ ಈಡಿಗ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾರಾಯಣ ಗುರುಗಳು ಶಿಕ್ಷಣಕ್ಕೆ ಮಹತ್ವವನ್ನು ನೀಡುವ ಮೂಲಕ ಹಿಂದುಳಿದ ಸಮುದಾಯಗಳಿಗೆ ದಾರಿದೀಪವಾದರು. ಅವರು ಹಾಕಿಕೊಟ್ಟ ಮಾರ್ಗದರ್ಶನ ಮತ್ತು ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಅವರು, ಜಿಲ್ಲೆಯಲ್ಲಿಯೇ ಈಡಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸೊರಬ ಕ್ಷೇತ್ರದಿಂದ ಆಯ್ಕೆಯಾದ ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿದರೆ, ಅವರ ಪುತ್ರ ಮಧು ಬಂಗಾರಪ್ಪ ಅವರು ಈಡಿಗ ಸಮುದಾಯದ ಮೀಸಲಿನಲ್ಲಿ ಸಚಿವರಾಗಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರುತ್ತಿದ್ದಾರೆ. ಸಮಾಜದವರು ಯಾವುದೇ ಸಂಘಟನೆಗಳಲ್ಲಿ ಇರಲಿ, ಸಮುದಾಯದ ಕಾರ್ಯಕ್ರಮಗಳಲ್ಲಿ ಒಗ್ಗಟ್ಟಿನಿಂದ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಕಾರಣಿಕರ್ತರಾಗಬೇಕು ಎಂದರು.

ತಾಪಂ ಮಾಜಿ ಅಧ್ಯಕ್ಷ ಕೆ. ಅಜ್ಜಪ್ಪ ಕಾಸರಗುಪ್ಪೆ ಮಾತನಾಡಿ, ಸಮಾಜದಲ್ಲಿ ತುಳಿತಕ್ಕೊಳಗಾದ ಜನರನ್ನು ಮೇಲೆತ್ತುವ, ಅಸ್ಪೃಶ್ಯತೆ ತೊಲಗಿಸುವ ಮತ್ತು ಅಂತಹ ಪದ್ಧತಿಗಳ ವಿರುದ್ಧ ಹೋರಾಡಿದ ಮಹಾನ್ ನಾಯಕ ಬ್ರಹ್ಮಶ್ರೀ ನಾರಾಯಣಗುರುಗಳಾಗಿದ್ದಾರೆ. ನಾರಾಯಣ ಗುರು ವೃತ್ತದಲ್ಲಿ ಶ್ರೀಗಳ ಮೂರ್ತಿಯನ್ನು ಪ್ರತಿಷ್ಠಾಪಿಸುವ ಉದ್ದೇಶ ಹೊಂದಲಾಗಿದ್ದು, ಮುಂದಿನ ದಿನಗಳಲ್ಲಿ ಸಮಾಜದ ಎಲ್ಲಾ ಸಂಘಟನೆಗಳು ಒಗ್ಗೂಡಿ ಇಂತಹ ಮಹತ್ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಹಸೆಚಿತ್ತಾರ ಕಲಾವಿದ ವಿಶ್ವನಾಥ ಹೆಚ್ಚೆ ಅವರನ್ನು ಸನ್ಮಾನಿಸಲಾಯಿತು. ನಾರಾಯಣಗುರುಗಳ ಅನುಯಾಯಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ನಾರಾಯಣಗುರುಗಳ ಧರ್ಮ ಪರಿಪಾಲನಾ ಸಂಘದ ತಾಲೂಕು ಅಧ್ಯಕ್ಷ ರಾಜು ಹಿರಿಯಾವಲಿ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಸಂಸ್ಥಾಪಕ ನಾಗೇಶ ರಾಜೀವನಗರ, ಬಿಎಸ್‌ಎನ್‌ಡಿಪಿ ತಾಲೂಕು ಗೌರವಾಧ್ಯಕ್ಷ ನಂಜುಂಡಪ್ಪ ಮಳಲಗದ್ದೆ, ಜಿಲ್ಲಾಧ್ಯಕ್ಷ ಎಸ್.ಡಿ. ನಾಯ್ಕ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಡಿ. ಉಮೇಶ್, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ ಶೇಖರ್, ದೀವರ ಸಾಂಸ್ಕೃತಿಕ ಅಧ್ಯಯನ ಸಂಸ್ಥೆ ತಾಲೂಕು ಅಧ್ಯಕ್ಷ ಓ.ಬಿ. ರಾಜಶೇಖರಪ್ಪ ಕೆರೆಕೊಪ್ಪ, ಜಿ.ಡಿ. ನಾಯ್ಕ್, ಜಿ.ಡಿ. ಪ್ರಕಾಶ್ ಕೆರೆಕೊಪ್ಪ, ತ್ಯಾಗರಾಜ ಹುಲ್ತಿಕೊಪ್ಪ, ಈಶ್ಚರ ಎಂ. ಸಾರೇಮರೂರು, ರವಿ ಶೆಟ್ಟಿ, ಬಿ. ವಸಂತ್ ಕೆರೆಕೊಪ್ಪ, ರಾಮಪ್ಪ ಸಂಪಗೋಡು, ಪ್ರಶಾಂತ್ ಜೆ. ನಾಯ್ಕ್, ಶಿವರಾಜ್ ಸಾರೇಮರೂರು, ರಾಮು ಹಳೇಸೊರಬ, ವಿಶ್ವನಾಥ ಓಟೂರು ಇದ್ದರು.

ಫೋಟೋ

೨೮ಕೆಪಿಸೊರಬ-೦೧

ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಈಡಿಗ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳ್ಳಂಬೆಳಗ್ಗೆ ಮದ್ದೂರು ಸರ್ಕಾರಿ ಕಚೇರಿಗಳಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ
ಬೀದಿ ಬದಿ ಅಂಗಡಿಗಳಲ್ಲಿ ಆಹಾರ ಪರಿಶೀಲಿಸಿದ ಉಪಲೋಕಾಯುಕ್ತರು