ಪಪಂ ಮುಖ್ಯಾಧಿಕಾರಿ ನಾಗೇಶ ನೇತೃತ್ವದಲ್ಲಿ ಅತಿಕ್ರಮಣ ತೆರವು

KannadaprabhaNewsNetwork |  
Published : Aug 31, 2024, 01:38 AM IST
೩೦ವೈಎಲ್‌ಬಿ೨:ಯಲಬುರ್ಗಾ ಪಟ್ಟಣದ ಐದನೇಯ ವಾರ್ಡಿನಲ್ಲಿ ಸರ್ಕಾರಿ ರಸ್ತೆಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡ ಮನೆಯ ಕಟ್ಟಡವನ್ನು ಶುಕ್ರವಾರ ಪ.ಪಂ  ಮುಖ್ಯಾಧಿಕಾರಿ ನಾಗೇಶ ಅವರ ನೇತೃತ್ವದಲ್ಲಿ ಇಲಾಖೆ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸಿದರು. | Kannada Prabha

ಸಾರಾಂಶ

ಎರಡೂ ಮನೆಗಳ ದಾಖಲೆಗಳನ್ನು ಪರಿಶೀಲಿಸಿಲನೆ ವೇಳೆ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅವುಗಳನ್ನೂ ತೆರವುಗೊಳಿಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯಲಬುರ್ಗಾ: ಪಟ್ಟಣದ 5ನೇ ವಾರ್ಡಿನ ಸರ್ಕಾರಿ ರಸ್ತೆಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡ ಕಟ್ಟಡವನ್ನು ಶುಕ್ರವಾರ ಪಪಂ ಮುಖ್ಯಾಧಿಕಾರಿ ನಾಗೇಶ ನೇತೃತ್ವದಲ್ಲಿ ಜೆಸಿಬಿ ಮೂಲಕ ತೆರವು ಮಾಡಲಾಯಿತು.

ಕೆಲವು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಸರ್ಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿಕೊಂಡಿದ್ದಾರೆ ಎಂದು ಪಪಂಗೆ ದೂರು ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಪಪಂ ಮುಖ್ಯಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ನೇತೃತ್ವದಲ್ಲಿ ತೆರವಿಗೆ ಮುಂದಾಗುತ್ತಿದ್ದಂತೆ ಅಧಿಕಾರಿಗಳು ಮತ್ತು ಮನೆ ಮಾಲೀಕರ ನಡುವೆ ಕೆಲ ಸಮಯ ಮಾತಿನ ಚಕಮಕಿ, ವಾಗ್ವಾದ, ಆರೋಪ, ಪ್ರತ್ಯಾರೋಪ ನಡೆಯಿತು.ಈ ಸಂದರ್ಭದಲ್ಲಿ ತೆರವುಗೊಳಿತ್ತಿದ್ದ ಮನೆ ಮಾಲೀಕ ನಮ್ಮ ವಿರುದ್ಧ ದೂರು ನೀಡಿರುವವರೂ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿದ್ದಾರೆ. ಅವರ ಮನೆಗಳ ದಾಖಲೆಗಳನ್ನು ಪರಿಶೀಲಿಸಿ ಕ್ರಮಕೈಗೊಂಡು ಅವರ ಮನೆಯ ಕಟ್ಟಡ ತೆರವುಗೊಳಿಸಬೇಕೆಂದು ಪಟ್ಟು ಹಿಡಿದರು.

ಎರಡೂ ಮನೆಗಳ ದಾಖಲೆಗಳನ್ನು ಪರಿಶೀಲಿಸಿಲನೆ ವೇಳೆ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅವುಗಳನ್ನೂ ತೆರವುಗೊಳಿಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಳಿಕ ಮುಖ್ಯಾಧಿಕಾರಿ ನಾಗೇಶ ಮಾತನಾಡಿ, ಪಟ್ಟಣದಲ್ಲಿ ಯಾರೇ ಆಗಲಿ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿಕೊಂಡು ಅಕ್ರಮವಾಗಿ ಕಟ್ಟಡ ನಿರ್ಮಿಸಿದರೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ೫ನೇ ವಾರ್ಡಿನ ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಕಟ್ಟಡವನ್ನು ತೆರವು ಮಾಡಲಾಗಿದೆ. ಪಟ್ಟಣದ ಜನರು ಸರ್ಕಾರಿ ಜಾಗವನ್ನು ಯಾವುದೇ ಕಾರಣಕ್ಕೂ ಒತ್ತುವರಿ ಮಾಡಬಾರದು. ಒಂದು ವೇಳೆ ಅಂತಹ ಪ್ರಕರಣಗಳು ಕಂಡುಬಂದಲ್ಲಿ ಯಾರೇ ಆಗಿರಲಿ, ತೆರವು ಜತೆಗೆ ದಂಡವನ್ನು ವಿಧಿಸುವುದು ಮತ್ತು ಮುನ್ಸಿಪಲ್ ಕಾಯ್ದೆ ಪ್ರಕಾರ ೯೬೪ಕಲಂ ೧೮೮ರ ಪ್ರಕಾರ ಕ್ರಮ ವಹಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಪಿಎಸ್‌ಐ ಗುಲಾಮ್ ಅಹ್ಮದ್, ಎಜಿನಿಯರ್ ಉಮೇಶ್ ಬೇಲಿ, ಸಿಬ್ಬಂದಿಗಳಾದ ರಮೇಶ್ ಬೇಲೇರಿ, ಕನಕಪ್ಪ, ಶಿವಕುಮಾರ್ ಸರಗಣಾಚಾರ್ ಮತ್ತಿತರರು ಇದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ