ಮೋದಿಜಿ ಸಮರ್ಥ ಆಡಳಿತಕ್ಕೆ ವಿಶ್ವವೇ ಮೆಚ್ಚಿದೆ: ಜಿಗಜಿಣಗಿ

KannadaprabhaNewsNetwork |  
Published : Sep 18, 2026, 03:00 AM IST
ಮೋದಿ ಅವರ ಜನ್ಮದಿನೋತ್ಸವ ಪ್ರಯುಕ್ತ ಸೇವಾ ಸಂಕಲ್ಪ ದಿನ | Kannada Prabha

ಸಾರಾಂಶ

ಪರಿಶುದ್ಧ ಆಡಳಿತದ ಮೂಲಕ ಭಾರತವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುತ್ತಿರುವ ಪ್ರಧಾನಿ ಮೋದಿ ಅವರ ಸಮರ್ಥ ಆಡಳಿತವನ್ನು ಇಡೀ ವಿಶ್ವವೇ ಮೆಚ್ಚಿದೆ, ಭಾರತ ವಿಶ್ವ ಗುರುವಾಗುವ ದಿನ ದೂರವಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಪರಿಶುದ್ಧ ಆಡಳಿತದ ಮೂಲಕ ಭಾರತವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುತ್ತಿರುವ ಪ್ರಧಾನಿ ಮೋದಿ ಅವರ ಸಮರ್ಥ ಆಡಳಿತವನ್ನು ಇಡೀ ವಿಶ್ವವೇ ಮೆಚ್ಚಿದೆ, ಭಾರತ ವಿಶ್ವ ಗುರುವಾಗುವ ದಿನ ದೂರವಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನೋತ್ಸವ ಪ್ರಯುಕ್ತ ಸೇವಾ ಸಂಕಲ್ಪ ದಿನ, ರಕ್ತದಾನ ಶಿಬಿರ ಸೇರಿದಂತೆ ವಿವಿಧ ಅರ್ಥಪೂರ್ಣ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಘಟ್ಟದಲ್ಲಿ ದೇಶದ ಜಿಡಿಪಿ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದರು. ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ರಕ್ತದಾನ ಶಿಬಿರ ನಡೆಯಿತು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಜಿಲ್ಲಾ ಕಾರ್ಯದರ್ಶಿ ಕೃಷ್ಣಾ ಗುನ್ಹಾಳಕರ, ರಾಘವೇಂದ್ರ ಕಾಪಸೆ ಮಾತನಾಡಿದರು. ಮಾಜಿ ಶಾಸಕ ರಮೇಶ ಭೂಸನೂರ, ಮುಖಂಡರಾದ ಸಂಜೀವ ಐಹೊಳೆ, ವಿವೇಕಾನಂದ ಡಬ್ಬಿ, ಉಮೇಶ ಕಾರಜೋಳ, ಚಂದ್ರಶೇಖರ ಕವಟಗಿ, ಪ್ರಕಾಶ ಅಕ್ಕಲಕೋಟ, ಮಳುಗೌಡ ಪಾಟೀಲ, ಈರಣ್ಣ ರಾವುರ, ಸಾಬು ಮಾಶಾಳ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಧ್ಯಮ ಕ್ಷೇತ್ರದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ ಕಿರು ಕೃತಿ ಬಿಡುಗಡೆ
21ಕ್ಕೆ ಡಿಸಿಸಿ ಬ್ಯಾಂಕ್‌ ಎದುರು ರೈತರ ಪ್ರತಿಭಟನೆ