ಹಳಿಯಾಳ: ಮನುಷ್ಯನಿಗೆ ಸುತ್ತಮುತ್ತಲಿನ ಜಗತ್ತನ್ನು ಅರಿಯಲು, ಓದಲು, ಕೆಲಸ ಮಾಡಲು ಹಾಗೂ ದೈನಂದಿನ ಚಟುವಟಿಕೆಗಳನ್ನು ಸುರಕ್ಷಿತವಾಗಿ ನಡೆಸಲು ಕಣ್ಣು ಸಹಾಯ ಮಾಡುವ ಶರೀರದ ಪ್ರಮುಖವಾದ ಅಂಗಗಳಾಗಿವೆ ಎಂದು ತಾಲೂಕು ಆಸ್ಪತ್ರೆಯ ನೇತ್ರತಜ್ಞ ಡಾ. ಸಲೀಂ ಕಿತ್ತೂರು ಹೇಳಿದರು.
ಹುಬ್ಬಳ್ಳಿ ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆಯ ಸಂಯೋಜಕ ವಿ.ಜೆ. ಕಟ್ಟಿ ಮಾತನಾಡಿ, ಶಿಬಿರದಲ್ಲಿ ತಪಾಸಣೆಗೊಳಗಾಗುವ ಫಲಾನುಭವಿಗಳಿಗೆ ಅಗತ್ಯವಿರುವ ಮುಂದಿನ ಚಿಕಿತ್ಸಾ ಸೌಲಭ್ಯಗಳು ಹಾಗೂ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ನಿರ್ದೇಶಕ ಕಿರಣಕುಮಾರ ಬಗಾಡೆ ಮಾತನಾಡಿ, ಗ್ರಾಮೀಣ ಜನರ ಆರೋಗ್ಯ ಮತ್ತು ಕಲ್ಯಾಣಕ್ಕಾಗಿ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುವುದು ಸಂಸ್ಥೆಯ ಸಾಮಾಜಿಕ ಬದ್ಧತೆಯ ಭಾಗವಾಗಿದೆ ಎಂದರು.ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆ ನೇತ್ರ ತಜ್ಞ ಡಾ. ರಜತ್ ಪದ್ಮರಾಮ, ದಾಂಡೇಲಿ ಜನರಲ್ ಆಸ್ಪತ್ರೆಯ ನೇತ್ರ ತಂತ್ರಜ್ಞ ತಾಜುದ್ದೀನ್ ಬಲ್ಲಾರಿ ಹಾಗೂ ಹಳಿಯಾಳ ತಾಲೂಕು ಆಸ್ಪತ್ರೆಯ ನೇತ್ರ ತಂತ್ರಜ್ಞ ಸವಿತಾ ಸಿ. ಕಮ್ಮಾರ ಅವರು ಫಲಾನುಭವಿಗಳ ಕಣ್ಣಿನ ತಪಾಸಣೆ ನಡೆಸಿ, ಅಗತ್ಯ ಸಲಹೆ ಹಾಗೂ ಸೂಕ್ತ ಮಾರ್ಗದರ್ಶನ ನೀಡಿದರು. ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಮುಂದಿನ ಚಿಕಿತ್ಸಾ ಕ್ರಮಗಳ ಕುರಿತು ಮಾಹಿತಿ ನೀಡಲಾಯಿತು.