ಗ್ಯಾರಂಟಿಯ ವಿಫಲತೆಯೇ ಕಾಂಗ್ರೆಸ್‌ ಸೋಲಿಗೆ ಕಾರಣವಾಗಲಿದೆ

KannadaprabhaNewsNetwork |  
Published : Nov 07, 2026, 01:45 AM IST
6ಎಚ್ಎಸ್ಎನ್‌18 :  | Kannada Prabha

ಸಾರಾಂಶ

ಷರೈತರ ಹಿತ ಕಾಯುತ್ತೇವೆ ಎಂದು ಹೇಳುವ ಕಾಂಗ್ರೆಸ್, ವಾಸ್ತವದಲ್ಲಿ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ. ನುಡಿದಂತೆ ನಡೆಯುತ್ತೇವೆ ಎಂದು ಅಧಿಕಾರಕ್ಕೆ ಬಂದ ಸರ್ಕಾರ ರೈತರಿಗೆ ನಿರಂತರವಾಗಿ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳೇ ಇಂದು ಜನರಿಗೆ ಮೋಸ ಮಾಡುವ ಸ್ಥಿತಿಗೆ ತಲುಪಿವೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ. ಇವಿಎಂ ಇರಲಿ ಅಥವಾ ಬ್ಯಾಲೆಟ್ ಪೇಪರ್ ಇರಲಿ, ಕಾಂಗ್ರೆಸ್ ಸೋಲುವುದು ಖಚಿತ. ಚುನಾವಣೆಯಲ್ಲಿ ಸೋಲನ್ನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದರು.

ಕನ್ನಡಪ್ರಭ ವಾರ್ತೆ ಹಾಸನ

ಕಾಂಗ್ರೆಸ್ ತನ್ನದೇ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವಿಫಲವಾಗಿದ್ದು, ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಹಾಗಾಗಿ ಈ ವಿಫಲತೆಯೇ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಕಾರಣವಾಗಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಭರವಸೆಗಳಿಗೂ, ಅಧಿಕಾರಕ್ಕೆ ಬಂದ ನಂತರದ ಕಾರ್ಯವೈಖರಿಗೂ ಸಾಕಷ್ಟು ವ್ಯತ್ಯಾಸವಿದೆ. ಯುವಕರಿಗೆ ಉದ್ಯೋಗ ಹಾಗೂ ಆರ್ಥಿಕ ನೆರವು ಕಲ್ಪಿಸುವ ಉದ್ದೇಶದಿಂದ ಘೋಷಿಸಿದ್ದ ಯುವನಿಧಿ ಯೋಜನೆ ಇದೀಗ ಸಂಪೂರ್ಣ ನಾಪತ್ತೆಯಾದಂತಾಗಿದೆ. ಯೋಜನೆಯ ನಿರೀಕ್ಷೆಯಲ್ಲಿದ್ದ ಯುವಜನರಿಗೆ ಸರ್ಕಾರ ನಿರಾಸೆ ಮೂಡಿಸಿದೆ ಎಂದು ಟೀಕಿಸಿದರು. ಹಾಲಿನ ಪ್ರೋತ್ಸಾಹ ಧನ ಹಾಗೂ ರೈತರಿಗೆ ನೀಡಬೇಕಾದ ಸಬ್ಸಿಡಿ ವಿಚಾರದಲ್ಲೂ ಸರ್ಕಾರ ಅನ್ಯಾಯ ಮಾಡುತ್ತಿದೆ. ರೈತರ ಹಿತ ಕಾಯುತ್ತೇವೆ ಎಂದು ಹೇಳುವ ಕಾಂಗ್ರೆಸ್, ವಾಸ್ತವದಲ್ಲಿ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ. ನುಡಿದಂತೆ ನಡೆಯುತ್ತೇವೆ ಎಂದು ಅಧಿಕಾರಕ್ಕೆ ಬಂದ ಸರ್ಕಾರ ರೈತರಿಗೆ ನಿರಂತರವಾಗಿ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳೇ ಇಂದು ಜನರಿಗೆ ಮೋಸ ಮಾಡುವ ಸ್ಥಿತಿಗೆ ತಲುಪಿವೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ. ಇವಿಎಂ ಇರಲಿ ಅಥವಾ ಬ್ಯಾಲೆಟ್ ಪೇಪರ್ ಇರಲಿ, ಕಾಂಗ್ರೆಸ್ ಸೋಲುವುದು ಖಚಿತ. ಚುನಾವಣೆಯಲ್ಲಿ ಸೋಲನ್ನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದರು.

ಗ್ರಾಮೀಣ ಜನರು ಹಾಗೂ ಸಾಮಾನ್ಯ ಜನರ ಕುರಿತು ಮಾತನಾಡುವಾಗ ಜವಾಬ್ದಾರಿಯುತ ನಡವಳಿಕೆ ಇರಬೇಕು. ದುರಹಂಕಾರದಿಂದ ಮೆರೆಯುವವರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಿಯಾಂಕ್ ಖರ್ಗೆ ಅವರ ’ಅಲ್ಪವಿದ್ಯೆ ಮಹಾಗರ್ವಿ’ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, ಭಾರತವೇ ಹಳ್ಳಿಗಳ ದೇಶ. ಹಳ್ಳಿಗಳಿಲ್ಲದೆ ದೆಹಲಿಯ ಅಸ್ತಿತ್ವವೂ ಸಾಧ್ಯವಿಲ್ಲ. ಗ್ರಾಮೀಣ ಜನರ ಶ್ರಮ, ಬೆವರು ಮತ್ತು ಕೊಡುಗೆಯಿಂದಲೇ ದೇಶದ ಆರ್ಥಿಕ ಹಾಗೂ ಸಾಮಾಜಿಕ ವ್ಯವಸ್ಥೆ ಮುನ್ನಡೆಯುತ್ತಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಹೇಳಿದರು. ಎಲ್ಲರೂ ಬಾಯಲ್ಲಿ ಚಿನ್ನದ ಚಮಚ ಇಟ್ಟುಕೊಂಡು ಹುಟ್ಟಲು ಸಾಧ್ಯವಿಲ್ಲ. ಸಾಮಾನ್ಯ ಕುಟುಂಬಗಳಿಂದ ಬಂದವರೂ ತಮ್ಮ ಪರಿಶ್ರಮದಿಂದ ಉನ್ನತ ಸ್ಥಾನಕ್ಕೇರಿದ್ದಾರೆ. ಹೀಗಿರುವಾಗ ಇತರರನ್ನು ಕೀಳಾಗಿ ಕಾಣುವ ಮನೋಭಾವ ಸರಿಯಲ್ಲ. ಅಹಂಕಾರದ ನಡವಳಿಕೆಯನ್ನು ಬಿಟ್ಟು, ಗಾದೆ ಮಾತುಗಳನ್ನು ತಪ್ಪಾಗಿ ಬಳಸುವುದನ್ನು ನಿಲ್ಲಿಸಲಿ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಿರಿಯ ರಾಜಕೀಯ ನಾಯಕರಾಗಿದ್ದು, ದೇಶದ ರಾಜಕೀಯದಲ್ಲಿ ತಮ್ಮದೇ ಆದ ಗೌರವ ಹೊಂದಿದ್ದಾರೆ. ಆದರೆ ಅವರ ಹೆಸರಿಗೆ ಧಕ್ಕೆ ತರುತ್ತಿರುವುದು ಬೇರಾರೂ ಅಲ್ಲ, ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರೇ. ಸಾರ್ವಜನಿಕ ಜೀವನದಲ್ಲಿರುವವರು ಮಾತಿನ ಮೇಲೆ ಹಿಡಿತ ಹೊಂದಿರಬೇಕು. ಅಧಿಕಾರ ಮತ್ತು ಸ್ಥಾನಮಾನದಿಂದ ಅಹಂಕಾರ ಪ್ರದರ್ಶಿಸುವುದಕ್ಕಿಂತ ಜನರ ಭಾವನೆಗಳಿಗೆ ಗೌರವ ನೀಡಬೇಕು. ಇಲ್ಲದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ