ಶಿಕ್ಷಕರು, ಪದವೀಧರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ

KannadaprabhaNewsNetwork | Published : Jan 1, 2024 1:15 AM

ಸಾರಾಂಶ

ವಿಧಾನ ಪರಿಷತ್ತಿನ ಚುನಾವಣೆ- 2023 ರ ಸಂಬಂಧ ಮತದಾರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಅಂತಿಮ ಮತದಾರರ ಪಟ್ಟಿಗಳ ಪ್ರತಿಯನ್ನು ಶನಿವಾರ ಪ್ರಕಟಗೊಳಿಸಿದ್ದು, ಅಂತಿಮ ಮತದಾರ ಪಟ್ಟಿಯಲ್ಲಿ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ತಿಳಿಸಿದರು.

-ಅಂತಿಮ ಮತದಾರರ ಪಟ್ಟಿಯಲ್ಲಿ ಬೆಂ.ಗ್ರಾ. ಜಿಲ್ಲೆಯ 2006 ಶಿಕ್ಷಕರು,17648 ಪದವೀಧರರು: ಡಾ.ಶಿವಶಂಕರ್‌ದೊಡ್ಡಬಳ್ಳಾಪುರ:

ವಿಧಾನ ಪರಿಷತ್ತಿನ ಚುನಾವಣೆ- 2023 ರ ಸಂಬಂಧ ಮತದಾರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಅಂತಿಮ ಮತದಾರರ ಪಟ್ಟಿಗಳ ಪ್ರತಿಯನ್ನು ಶನಿವಾರ ಪ್ರಕಟಗೊಳಿಸಿದ್ದು, ಅಂತಿಮ ಮತದಾರ ಪಟ್ಟಿಯಲ್ಲಿ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ-2023 ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಬಗ್ಗೆ ಸಾರ್ವಜನಿಕವಾಗಿ 2023 ರ ಸೆಪ್ಟೆಂಬರ್ 30ರಂದು ಪ್ರಕಟಣೆ ಹೊರಡಿಸಲಾಗಿತ್ತು. ನಮೂನೆ 19 ಹಾಗೂ ನಮೂನೆ 18 ರಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅಕ್ಟೋಬರ್ 01 ರಿಂದ ನವೆಂಬರ್ 06 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 23 ರಂದು ಪ್ರಕಟಿಸಲಾಗಿತ್ತು. ಕರಡು ಮತದಾರರ ಪಟ್ಟಿಗೆ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಸಲ್ಲಿಸಲು ಡಿಸೆಂಬರ್ 09 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಅಂತಿಮ ಮತದಾರರ ಪಟ್ಟಿಗಯನ್ನು ಡಿಸೆಂಬರ್ 30 ರಂದು ಪ್ರಕಟಿಸಲಾಗಿದ್ದು ಜಿಲ್ಲೆ, ಉಪವಿಭಾಗ, ತಾಲೂಕು ಕಚೇರಿಗಳಲ್ಲಿ, ನಾಡಕಚೇರಿಗಳಲ್ಲಿ, ಪುರಸಭೆ, ನಗರಸಭೆ ಮತ್ತು ಎಲ್ಲಾ ಸಾರ್ವಜನಿಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದ್ದು ಅರ್ಜಿದಾರರು ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಾತರಿ ಪಡಿಸಿಕೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರ ಪಟ್ಟಿಯಂತೆ 1045 ಪುರುಷ ಶಿಕ್ಷಕರು ಹಾಗೂ 961 ಮಹಿಳಾ ಶಿಕ್ಷಕಿಯರು ಸೇರಿ ಒಟ್ಟು 2006 ಶಿಕ್ಷಕರು ಮತದಾರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿದ್ದಾರೆ.

ಪದವೀಧರ ಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿರುವಂತೆ 9378 ಪುರುಷ ಮತದಾರರು ಹಾಗೂ 8270 ಮಹಿಳಾ ಮತದಾರರು ಸೇರಿ 17648 ಮತದಾರರು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಅಂತಿಮ ಮತದಾರರ ಪಟ್ಟಿಗೆ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಆಯಾ ತಾಲೂಕಿನ ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಅವರು ತಿಳಿಸಿದರು.30ಕೆಡಿಬಿಪಿ2-

ಶಿಕ್ಷಕರು, ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ಪ್ರಕಟ ಕುರಿತು ಬೆಂ.ಗ್ರಾ. ಜಿಲ್ಲಾಧಿಕಾರಿ ಡಾ.ಶಿವಶಂಕರ್ ಮಾಹಿತಿ ನೀಡಿದರು.

Share this article