ಜಿಲ್ಲೆಯಲ್ಲಿ ಮೊದಲ ಸರ್ಕಾರಿ ಗೋಶಾಲೆ ಪ್ರಾರಂಭ

KannadaprabhaNewsNetwork |  
Published : Jun 15, 2024, 01:06 AM IST
14ಕೆಎಂಎನ್ ಡಿ22 | Kannada Prabha

ಸಾರಾಂಶ

ಮದ್ದೂರು ತಾಲೂಕಿನ ಹೂತಗೆರೆ ಗ್ರಾಮದಲ್ಲಿ 50 ಲಕ್ಷ ರು ವೆಚ್ಚದಲ್ಲಿ ಮೊದಲ ಸರ್ಕಾರಿ ಗೋಶಾಲೆ ನಿರ್ಮಾಣವಾಗಿದೆ. ಇದನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ। ಕುಮಾರ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯಮದ್ದೂರು ತಾಲೂಕಿನ ಹೂತಗೆರೆ ಗ್ರಾಮದಲ್ಲಿ 50 ಲಕ್ಷ ರು ವೆಚ್ಚದಲ್ಲಿ ಮೊದಲ ಸರ್ಕಾರಿ ಗೋಶಾಲೆ ನಿರ್ಮಾಣವಾಗಿದೆ. ಇದನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ। ಕುಮಾರ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಾಣಿದಯಾ ಸಂಘ ಸಮಿತಿ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೋಶಾಲೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳಿ ಎಂದರು.

ಪ್ರಾಣಿಗಳಿಗೆ ವಸತಿ, ಕುಡಿಯುವ ನೀರು, ಮೇವಿಗೆ ಯಾವುದೇ ತೊಂದರೆಯಾಗಬಾರದು. ಹೂತಗೆರೆ ಗ್ರಾಮದ ಗೋಶಾಲೆಯು 10 ಎಕರೆ ವಿಸ್ತೀರ್ಣದಲ್ಲಿದೆ. ಇದರ ಸುತ್ತ ಕಾಂಪೌಂಡ್ ಅಥವಾ ಬೇಲಿ ನಿರ್ಮಿಸಿ ಸ್ಥಳದ ರಕ್ಷಣೆ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಒತ್ತುವರಿಯಾಗುವ ಸಾಧ್ಯತೆ ಹೆಚ್ಚು ಎಂದು ಹೇಳಿದರು.ಜಿಲ್ಲೆಯಲ್ಲಿ ಬೀದಿ ನಾಯಿಗಳ ಹವಾಳಿ ಕಡಿಮೆಗೊಳಿಸಲು ಎಬಿಸಿ (Animal birth control) ಚಿಕಿತ್ಸೆಗಾಗಿ ಸ್ಥಳೀಯ ಸಂಸ್ಥೆಗಳು ಅನುದಾನ ಮೀಸಲಿಡಬೇಕು. ಪ್ರತ್ಯೇಕವಾಗಿ ಸ್ಥಳ ಗುರುತಿಸಿ ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿ ಎಂದು ಸೂಚನೆ ನೀಡಿದರು.ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ದೇಶದಲ್ಲಿ ರೇಬೀಸ್ ರೋಗಿಗಳ ಸಂಖ್ಯೆ ಹೆಚ್ಚು. ಇದಕ್ಕೆ ಬೀದಿ ನಾಯಿ ಕಡಿತವೇ ಕಾರಣ. ಜಿಲ್ಲೆಯಲ್ಲಿ ಬೀದಿ ನಾಯಿ ಕಡಿತಕ್ಕೆ ಹೆಚ್ಚು ಜನರಿದ್ದಾರೆ. ಆದ್ದರಿಂದ ಎಬಿಸಿ ಚಿಕಿತ್ಸೆ ಕೆಲಸ ಚುರುಕುಗೊಳಿಸಿ ಎಂದರು.

ಖಾಸಗಿಯಾಗಿ ಕಾರ್ಯನಿರ್ವಹಿಸುವ ಗೋಶಾಲೆಗಳಿಗೆ ಪ್ರತಿ ಗೋವಿಗೆ ಪ್ರತಿದಿನಕ್ಕೆ 17.30 ರು /- ರಂತೆ ಸಹಾಯಧನ ನೀಡಲು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಎಸ್ಪಿ ಎನ್.ಯತೀಶ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ:ಸುರೇಶ್, ನಗರಸಭೆ ಆಯುಕ್ತ ಮಂಜುಮಾಥ್ , ವಿವಿಧ ಗೋಶಾಲೆಯ ಮುಖ್ಯಸ್ಥರು ಉಪಸ್ಥಿತರಿದ್ದರು.

ಅವಶ್ಯಕವಿರುವ ಕಡೆ ಸೂಚನಾ ಫಲಕ ಅಳವಡಿಸಿ: ಡಾ ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಅಪಘಾತ ವಲಯಗಳಲ್ಲಿ ಸಂಚಾರಿ ಸೂಚನಾ ಫಲಕಗಳನ್ನು ಅಳವಡಿಸಿ ಎಂದು ಜಿಲ್ಲಾಧಿಕಾರಿ ಡಾ:ಕುಮಾರ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ರಸ್ತೆ ಸುರಕ್ಷತಾ ಸಮಿತಿಯಲ್ಲಿ ಇರುವ 15 ಲಕ್ಷ ರು ಅನುದಾನದಲ್ಲಿ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಟ್ರಾಫಿಕ್ ಸಿಗ್ನಲ್ ಸರಿಪಡಿಸುವ ಕೆಲಸಗಳು, ಬ್ಲ್ಯಾಕ್ ಸ್ಪಾಟ್ ಗಳ ಬಳಿ ಸೂಚನಾ ಫಲಕಗಳು, ಹಂಪ್ ಗಳು ಸೇರಿದಂತೆ ಅವಶ್ಯಕ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸಿ ಅಪಘಾತ ತಡೆಗಟ್ಟಬೇಕಿದೆ. ಅದಕ್ಕೆ ತಗಲುವ ವೆಚ್ಚದ ವಿವರವನ್ನು ನಿಗದಿತ ನಮೂನೆಯಲ್ಲಿ ಸಿದ್ಧಪಡಿಸಿ ಅನುದಾನ ಕೋರಿ ಪ್ರಸ್ತಾವನೆಯನ್ನು ಕಳುಹಿಸಿಕೊಡುವಂತೆ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಂಧಿ ವಿಚಾರಧಾರೆಗಳೇ ಸೇವಾ ಕಾರ್ಯ ಮಾಡಲು ಪ್ರೇರಣೆ: ನಾಡೋಜ ವುಡೇ ಪಿ.ಕೃಷ್ಣ
ಸರ್ಕಾರಿ ಶಾಲೆಗಳನ್ನು ಉಳಿಸುವಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯ