ಶಿಕ್ಷಕರ ಕೈಯಲ್ಲಿ ವಿದ್ಯಾರ್ಥಿಗಳ ಭವಿಷ್ಯ

KannadaprabhaNewsNetwork |  
Published : Mar 10, 2026, 04:00 AM IST
ಗೋಕಾಕ | Kannada Prabha

ಸಾರಾಂಶ

ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದುದು. ಹಾಗಾಗಿ ನಮ್ಮ ಸಮಾಜದಲ್ಲಿ ಶಿಕ್ಷಕ ವೃತ್ತಿಗೆ ವಿಶೇಷವಾದ ಘನತೆ ಗೌರವವಿದೆ. ಭಾವಿ ಶಿಕ್ಷಕರಾಗ ಬಯಸುವವರು ತಮ್ಮ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವವರಾಗಬೇಕು. ಹಾಗಾಗಿ ವಿದ್ಯಾರ್ಥಿಗಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ ಎಂದು ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ.ಡಿ.ಎನ್.ಪಾಟೀಲ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಗೋಕಾಕ

ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದುದು. ಹಾಗಾಗಿ ನಮ್ಮ ಸಮಾಜದಲ್ಲಿ ಶಿಕ್ಷಕ ವೃತ್ತಿಗೆ ವಿಶೇಷವಾದ ಘನತೆ ಗೌರವವಿದೆ. ಭಾವಿ ಶಿಕ್ಷಕರಾಗ ಬಯಸುವವರು ತಮ್ಮ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವವರಾಗಬೇಕು. ಹಾಗಾಗಿ ವಿದ್ಯಾರ್ಥಿಗಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ ಎಂದು ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ.ಡಿ.ಎನ್.ಪಾಟೀಲ ಅಭಿಪ್ರಾಯಪಟ್ಟರು.

ನಗರದ ಗೋಕಾಕ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಬಿಇಡಿ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಸ್ವಾಗತ ಹಾಗೂ ವಿದ್ಯಾರ್ಥಿ ಒಕ್ಕೂಟ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿ ಅವರು, ಶಿಕ್ಷಕರಾದವರು ಕೇವಲ ಬೋಧಕರಾಗದೇ ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಅವುಗಳನ್ನು ತಮ್ಮ ವಿದ್ಯಾರ್ಥಿಗಳಲ್ಲೂ ಬೆಳೆಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಶಿಕ್ಷಣ ನಿಕಾಯದ ಸಹಾಯಕ ಪ್ರಾಧ್ಯಾಪಕ ಡಾ.ಕನಕಪ್ಪ ಪೂಜಾರ ಮಾತನಾಡಿ, ಉತ್ತಮ ಶಿಕ್ಷಕಕರನ್ನು ನಿರ್ಮಿಸುವಲ್ಲಿ ಶಿಕ್ಷಣ ಮಹಾವಿದ್ಯಾಲಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರಶಿಕ್ಷಣಾರ್ಥಿಗಳಲ್ಲಿ ಶಿಸ್ತು, ಕ್ರಿಯಾಶೀಲತೆ ಮತ್ತು ಬೋಧನಾ ಸಾಮರ್ಥ್ಯ ಬೆಳೆಸುವಲ್ಲಿ ಇಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳು ಪ್ರಮುಖವಾಗಿರುತ್ತವೆ. ಪ್ರಶಿಕ್ಷಣಾರ್ಥಿಗಳು ಉತ್ತಮ ಮಾತುಗಾರಿಕೆ ಕೌಶಲ, ಕ್ರಿಯಾಶೀಲತೆ, ಸಮಯಪ್ರಜ್ಞೆ, ಉತ್ತಮ ನಡುವಳಿಕೆ ಹಾಗೂ ಆರೋಗ್ಯದ ಕಾಳಜಿಯಿಂದ ಮುನ್ನಡೆದಾಗ ಉತ್ತಮ ಶಿಕ್ಷಕರಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ. ತನ್ಮೂಲಕ ರಾಷ್ಟ್ರಅಭಿವೃದ್ಧಿ ಹೊಂದುತ್ತದೆ ಎಂದು ತಿಳಿಸಿದರು.

ಗೋಕಾಕ ಶಿಕ್ಷಣ ಸಂಸ್ಥೆಯ ಚೇರಮನ್‌ ವಿ.ಎ.ಕಡಕೋಳ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಶಿಕ್ಷಣ ಮಹಾವಿದ್ಯಾಲಯದಲ್ಲಿ ತರಬೇತಿ ಪಡೆಯುವ ಪ್ರಶಿಕ್ಷಣಾರ್ಥಿಗಳಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ನಮ್ಮ ಸಂಸ್ಥೆಯಿಂದ ಒದಗಿಸಿದೆ. ಅದರ ಸದುಪಯೋಗವನ್ನು ಎಲ್ಲ ಪ್ರಶಿಕ್ಷಣಾರ್ಥಿಗಳು ಪಡೆದುಕೊಂಡು ಉತ್ತಮ ಶಿಕ್ಷಕರಾಗಿ ಬೆಳೆಯಬೇಕು ಎಂದು ಸಲಹೆ ನೀಡಿದರು.ಪ್ರಾಚಾರ್ಯ ಡಾ.ವಿರಾಜ ವಿ.ಮೋದಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗೋಕಾಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಮಹಾಂತೇಶ ತಾಂವಶಿ, ಕಾರ್ಯದರ್ಶಿ ಆರ್.ಎಂ.ವಾಲಿ, ಪ್ರಾಧ್ಯಪಕ ಪ್ರೊ.ಎಸ್.ಆರ್.ಮುದ್ದಾರ, ಪ್ರೊ.ಡಿ.ಎಸ್.ಪತ್ತಾರ ವಿದ್ಯಾರ್ಥಿ ಪ್ರತಿನಿಧಿಗಳಾದ ಸಿದ್ಧಾರೂಢ ನಾಯ್ಕರ ಮತ್ತು ವಾಣಿಶ್ರೀ ಗುಡಗುಡಿ ಹಾಗೂ ಮಹಾವಿದ್ಯಾಲದ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಎಲ್ಲ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.ಲಕ್ಷ್ಮೀ ತಳವಾರ ಹಾಗೂ ಶೃತಿ ಶಿಂಧಿಮರದ ಅವರ ವಂದೇ ಮಾತರಂಗೀತೆಯ ಹಾಡಿನೊಂದಿಗೆಆರಂಭಗೊಂಡಕಾರ್ಯಕ್ರಮವನ್ನು ಸ್ವಾತಿಗುರಾಯಿ ಮತ್ತು ಭೀಮಶಿ ಬಿ.ಗೌಡರಅವರು ನಿರೂಪಿಸಿದರು.ಸುನಂದಾ ಸುನ್ನಾಳ ಸ್ವಾಗತಿಸಿದರು.ಅಕ್ಷತಾ ಸನದಿ ಪುಷ್ಪಾರ್ಪಣೆಯನ್ನು ನಡೆಸಿಕೊಟ್ಟರು. ಮೇಘಾ ಈಟಿ ಮತ್ತುಚೈತ್ರಾ ಮನ್ನಿಕೇರಿ ಅತಿಥಿಗಳನ್ನು ಪರಿಚಯಿಸಿದರು.ರೇಣಿಕಾ ವ್ಯಾಪಾರಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪುಷ್ಪಾ ಹಡಿಗನಾಳ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಟಿಪ್ಪರ್‌
ಗಡಿನಾಡು ಬೆಳಗಾವಿ ಕನ್ನಡಿಗರ ದೊಡ್ಡ ಅಸ್ಮಿತೆ